HD Tammaiah ಮಕ್ಕಳಗೆ ವಿದ್ಯಾಭ್ಯಾಸ ಮಾನಸಿಕವಾಗಿ ಸದೃಢವಾಗಿಸಿದರೆ, ಕ್ರೀಡೆ ಎಂ ಬುದು ದೈಹಿಕವಾಗಿ ಗಟ್ಟಿಗೊಳಿಸಲು ಸಾಧ್ಯ. ಆ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚು ಭಾಗವಹಿಸಬೇಕು ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.
ಚಿಕ್ಕಮಗಳೂರು ನಗರದ ಜಿಲ್ಲಾ ಆಟದ ಮೈದಾನದಲ್ಲಿ ಶಾಲಾ ಶಿಕ್ಷಣ ಇಲಾಖೆ, ತಾಲ್ಲೂಕು ಪಂಚಾಯಿತಿ, ಕ್ಷೇತ್ರ ಶಿಕ್ಷಣಾಧಿ ಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ತಾಲ್ಲೂಕು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಸಂಯುಕ್ತಾ ಶ್ರಯದಲ್ಲಿ ಚಿಕ್ಕಮಗಳೂರು ತಾಲ್ಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.
ಕ್ರೀಡಾಚಟುವಟಿಕೆಯಲ್ಲಿ ನಗರ ಸೇರಿದಂತೆ ಗ್ರಾಮೀಣ ಪ್ರದೇಶದಿಂದ ಭಾಗವಹಿಸಿದ ವಿದ್ಯಾರ್ಥಿಗಳ ಸಾಮ ರ್ಥ್ಯಕ್ಕಾಗನುಸಾರವಾಗಿ ತೀರ್ಪುಗಾರರು ಆಯ್ಕೆಗೊಳಿಸಬೇಕು. ಕ್ರೀಡಾಸಕ್ತಿ ಬಗ್ಗೆ ಹೆಚ್ಚು ಆಸಕ್ತಿ ಹೊಂದಿರುವ ಮಕ್ಕಳಿ ಗೆ ಶಾಲೆಯ ಶಿಕ್ಷಕರು ಪ್ರೋತ್ಸಾಹಿಸುವ ಮೂಲಕ ಕ್ರೀಡಾ ಪ್ರತಿಭೆ ಅನಾವರಣಕ್ಕೆ ಮುಂದಾಗ ಬೇಕು ಎಂದು ಸಲಹೆ ಮಾಡಿದರು.
ಇತ್ತೀಚಿನ ದಿನಗಳಲ್ಲಿ ದೇಶದ ಕ್ರೀಡಾಪಟುಗಳು ಒಲಂಪಿಕ್ಸ್ ಸೇರಿದಂತೆ ಇನ್ನಿತರೆ ಕ್ರೀಡಾ ಚಟುವಟಿಕೆಗಳಲ್ಲಿ ಹೆಸರು ಗಳಿಸುತ್ತಿದ್ದು ಇದನ್ನು ಮನಗಂಡು ವಿದ್ಯಾರ್ಥಿಗಳು ಗಮನಾರ್ಹವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಸಾಧನೆ ಮಾಡುವ ಮೂಲಕ ದೇಶ ಹಾಗೂ ವಿದೇಶಗಳಲ್ಲಿ ಜಿಲ್ಲೆಯ ಮಕ್ಕಳು ಸ್ಪರ್ಧಿಸಿ ಉನ್ನತ ಮಟ್ಟದ ಹೆಸರು ಗಳಿಸಲು ಪ್ರಯತ್ನಿಸಬೇಕು ಎಂದು ಕರೆ ನೀಡಿದರು.
HD Tammaiah ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಮಾತನಾಡಿ ಇತ್ತೀಚೆಗೆ ಸರ್ಕಾರದಿಂದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಕ್ರೀಡಾಚಟುವಟಿಕೆಗೆ ಸೂಚಿಸಲಾಗುತ್ತಿದೆ. ಆದರೆ ಕೆಲವು ಶಾಲೆಗಳಲ್ಲಿ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುವುದರಿಂದ ದಾನಿಗಳು ಅಥವಾ ಸಾರ್ವಜನಿಕ ವಂತಿಕೆಗಳಲ್ಲಿ ಕ್ರೀಡಾ ಚಟುವಟಿಕೆ ನಡೆಸಬೇಕಾದ ಅನಿ ವಾರ್ಯವಾಗಿದೆ ಎಂದರು.
ಆ ನಿಟ್ಟಿನಲ್ಲಿ ಜಿಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಡಿಡಿಪಿಐ ಅಧಿಕಾರಿಗಳು ಜಿಲ್ಲಾ ಮಟ್ಟದ ಕ್ರೀಡೆಗೆ 1.50 ಲಕ್ಷ, ತಾಲ್ಲೂಕು ಮಟ್ಟಕ್ಕೆ 75 ಸಾವಿರ ಹಾಗೂ ಪ್ರತಿಭಾ ಕಾರಂಜಿಗೆ 50 ಸಾವಿರ ಆರ್ಥಿಕ ಸೌಲಭ್ಯ ಒದಗಿಸಲು ಸರ್ಕಾರಕ್ಕೆ ಅರ್ಜಿ ಸಲ್ಲಿಸಿದರೆ ಮುಂದಿನ ಅಧಿವೇಶನದಲ್ಲಿ ತಾವು ಸೇರಿದಂತೆ ಶಾಸಕರು ಪೂರ್ಣಪ್ರಮಾಣದಲ್ಲಿ ಹಕ್ಕೋ ತ್ತಾಯಗೊಳಿಸುವ ಮೂಲಕ ಶಾಲಾ ಮಕ್ಕಳ ಕ್ರೀಡೆಗಳಿಗೆ ಸೂಕ್ತ ವ್ಯವಸ್ಥೆಗೆ ಪ್ರಯತ್ನಿಸಲಾಗುವುದು ಎಂದರು.
ಕೆಲವು ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯ ಮಕ್ಕಳಿಗೆ ಕ್ರೀಡಾ ಸಲಕರಣೆ ಸಂಬoಧ ಸೂಕ್ತ ವ್ಯವಸ್ಥೆಯಿ ಲ್ಲದೇ ಪರದಾಡುವಂತಾಗಿದೆ. ಕೆಲವು ಮಕ್ಕಳಿಗೆ ಕ್ರೀಡಾವಸ್ತ್ರ ಸಲಕರಣೆ ಸೇರಿದಂತೆ ಇನ್ನಿತರೆ ಸೌಲಭ್ಯವಿಲ್ಲದಂತಾ ಗಿದೆ. ಈ ಬಗ್ಗೆ ಶಿಕ್ಷಕರು ಸಂಪೂರ್ಣ ಮಾಹಿತಿಗಳನ್ನು ಡಿಡಿಪಿಐ ಅವರ ಮೂಲಕ ಸರ್ಕಾರ ಅರ್ಜಿ ಸಲ್ಲಿಸಿ ಮಕ್ಕಳ ಕ್ರೀಡಾಸಕ್ತಿಗೆ ಶ್ರಮವಹಿಸಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಂ.ಆರ್.ಪರಮೇಶ್ವರಪ್ಪ ಪ್ರಾಸ್ತಾವಿಕ ವಾಗಿ ಮಾತನಾಡಿ ಮಕ್ಕಳಿಗೆ ಕ್ರೀಡಾಚಟುವಟಿಕೆಗಳಲ್ಲಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇಲಾಖೆಯಿಂದ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದ್ದು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕು ಎಂದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ರವೀಶ್, ಪದ್ಯೋನ್ನತ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವನಂಜೇಗೌಡ, ತಾಲ್ಲೂಕು ಅಧ್ಯಕ್ಷ ಸಿ.ಎನ್.ಸುರೇಶ್, ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಕರೇಗೌಡ, ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರನಾಯ್ಕ್, ತಾಲ್ಲೂಕು ಅಧ್ಯಕ್ಷ ಗಂಗಾಧರ್, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಉಮೇಶ್, ತಾಲ್ಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶಂಕರೇಗೌಡ ಮತ್ತಿತರರು ಹಾಜರಿದ್ದರು.