Board examination 9 ಮತ್ತು 11 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. ಮಕ್ಕಳ ಕಲಿಕಾ ದೃಷ್ಟಿಯಿಂದ 9ನೇ ತರಗತಿ ಮಕ್ಕಳಿಗೆ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆ ನಡೆಸಲಾಗುತ್ತಿದ್ದರೆ, 11ನೇ ತರಗತಿ ಮಕ್ಕಳಿಗೆ ವಾರ್ಷಿಕ ಪರೀಕ್ಷೆ ನಡೆಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಈ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಕೆಲವು ಬದಲಾವಣೆ ಮಾಡಲು ನಿರ್ಧಾರ ಮಾಡಲಾಗಿದೆ.
ಕಳೆದ ವರ್ಷವಷ್ಟೇ 5 ಮತ್ತು 8ನೇ ತರಗತಿ ಮಕ್ಕಳಿಗೆ ಮೌಲ್ಯಾಂಕನ ಪರೀಕ್ಷೆಯನ್ನು ಶಿಕ್ಷಣ ಇಲಾಖೆ ಜಾರಿ ಮಾಡಿತ್ತು. ಸಾಕಷ್ಟು ವಿರೋಧಗಳ ಮಧ್ಯೆಯೇ ಈ ವರ್ಷ 9 ಮತ್ತು 11 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆಯನ್ನು ನಿಗದಿ ಮಾಡಿ ಆದೇಶವನ್ನು ಹೊರಡಿಸಿದೆ.
2023-24ನೇ ಸಾಲಿನಲ್ಲಿಯೇ ಈ ನಿಯಮವನ್ನು ಜಾರಿ ಮಾಡುವ ಬಗ್ಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುವ ಎಲ್ಲ ಅನುದಾನಿತ, ಸರ್ಕಾರಿ ಹಾಗೂ ಅನುದಾನ ರಹಿತ ಖಾಸಗಿ ಶಾಲೆಗಳಿಗೆ ಈ ಆದೇಶ ಅನ್ವಯ ಆಗಲಿದೆ.
ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಒಂಬತ್ತು ಮತ್ತು 11ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಮಾರ್ಗದಲ್ಲಿ ಮಂಡಳಿ ಪರೀಕ್ಷೆ ನಡೆಸಲು ನಿರ್ಧರಿಸಿದೆ.
Board examination ಇಂದಲೇ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ರೂಪಿಸಿ ಕಳಿಸಲಾಗುತ್ತದೆ. ಮಂಡಳಿಯು ಪರೀಕ್ಷೆಯನ್ನು ಶಾಲಾ ಮತ್ತು ಕಾಲೇಜು ಹಂತದಲ್ಲಿಯೇ ನಡೆಸಲಿದೆ. ಪ್ರಶ್ನೆ ಪತ್ರಿಕೆಗಳನ್ನು ಮಂಡಳಿ ವತಿಯಿಂದಲೇ ಸಿದ್ಧಪಡಿಸಲಾಗುತ್ತದೆ.
ಎಲ್ಲ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಪರಿಶೀಲಿಸುವ ಮೂಲಕ ವಿದ್ಯಾರ್ಥಿಗಳ ಪ್ರಗತಿಯನ್ನು ಹೆಚ್ಚುಗೊಳಿಸುವ ಉದ್ದೇಶದಿಂದ ಈ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಮಂಡಳಿ ತಿಳಿಸಿದೆ.