Saturday, December 6, 2025
Saturday, December 6, 2025

Minister Prahlada Joshi ಎಸ್ಕಲೇಟರ್ ಸೌಲಭ್ಯ ಹಿರಿಯ ನಾಗರಿಕರು & ಅಂಗವಿಕಲರಿಗೆ ಉಪಕಾರಿಯಾಗಲಿದೆ- ಸಚಿವ ಪ್ರಹ್ಲಾದ ಜೋಷಿ

Date:

Minister Prahlada Joshi ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ‌ ಪ್ರಯಾಣಿಕರ ಉಪಯೋಗಕ್ಕೆ ನೂತನವಾಗಿ ನಿರ್ಮಿಸಲಾದ ಎಸ್ಕೆಲೇಟರ್ ಸೌಲಭ್ಯವನ್ನು ಸಚಿವ ಪ್ರಹ್ಲಾದ ಜೋಷಿ ಅವರು ಉದ್ಘಾಟನೆ ಮಾಡಿದರು.

ನಂತರ ಮಾತನಾಡಿದ ಅವರು ಪ್ರಯಾಣಿಕರ ಬಳಕೆಗೆ ಮುಕ್ತಗೊಳಿಸಲಾಯಿತು.ವಿಶ್ವದ ಅತೀ ಉದ್ದದ ರೈಲ್ವೆ ಫ್ಲಾಟ್‌ಫಾರ್ಮ್ ಹೊಂದಿದ ನಮ್ಮ ಹುಬ್ಬಳ್ಳಿಯ ರೈಲ್ವೆ ನಿಲ್ದಾಣವು ಸರ್ವ ರೀತಿಯಲ್ಲೂ ಅಭಿವೃದ್ಧಿ ಮಾಡಲಾಗುತ್ತಿದೆ. ಇದರ ಭಾಗವಾಗಿ ಇಂದು ಪಿಎಂ ಗತಿಶಕ್ತಿ ಯೋಜನೆಯಡಿ ನೂತನ ಎಸ್ಕೆಲೇಟರ್ ನಿರ್ಮಿಸಲಾಗಿದೆ. ಇಂದಿನಿಂದ ಪ್ರಯಾಣಿಕರ ಸುಲಭ ಸುಖಕರ ಪ್ರಯಾಣಕ್ಕೆ ಈ ಸೌಲಭ್ಯ ನೆರವಾಗಲಿದೆ ಎಂಬ ನಂಬಿಕೆಯಿದೆ. ಹಿರಿಯ ನಾಗರಿಕರು ಹಾಗೂ ಅಂಗವಿಕಲರಿಗೆ ಈ‌ ಸೇವೆ ಉಪಕಾರಿಯಾಗಲಿದೆ.
ನಮ್ಮ ಪ್ರಸ್ತಾವನೆಗೆ ಸ್ಪಂದಿಸಿ ಈ ಸೇವೆಯನ್ನು ಒದಗಿಸಿದ ಪ್ರಧಾನಮಂತ್ರಿ ಶ್ರೀ. ನರೇಂದ್ರ
ಜೀ‌ ಹಾಗೂ ಕೇಂದ್ರ ರೈಲ್ವೆ ಸಚಿವರಾದ ಶ್ರೀ. ಅಶ್ವಿನಿ ವೈಷ್ಣವ್ ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಧನ್ಯವಾದಗಳು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಷಿ ಅವರು ತಿಳಿಸಿದರು.

Minister Prahlada Joshi ಸಂದರ್ಭದಲ್ಲಿ ಮಾನ್ಯ ಸಭಾಪತಿಗಳಾದ ಶ್ರೀ ಬಸವರಾಜ್ ಹೊರಟ್ಟಿ, ವಿಧಾನಪರಿಷತ್ ಸದಸ್ಯರಾದ ಶ್ರೀ ಎಸ್.ವಿ.ಸಂಕನೂರು, ಹು-ಧಾ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀಮತಿ ವೀಣಾ ಬಾರದ್ವಾಡ ಪಾಲಿಕೆಯ ಸದಸ್ಯರು ಹಾಗೂ ಪ್ರಮುಖರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...