Thursday, March 19, 2026
Thursday, March 19, 2026

Kuvempu University ಕುವೆಂಪು ವಿವಿ ಯಿಂದ ಡಾ.ಅಂಬೇಡ್ಕರ್ ಬಗ್ಗೆ ಸೆ.26 ರಿಂದ ಆಕಾಶವಾಣಿಯಲ್ಲಿ ಕಾರ್ಯಕ್ರಮ ಸರಣಿ ಪ್ರಾರಂಭ

Date:

Kuvempu University ಶಂಕರಘಟ್ಟ, ಕುವೆಂಪು ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಭದ್ರಾವತಿ ಆಕಾಶವಾಣಿ ಸಹಯೋಗದಲ್ಲಿ ಸೆಪ್ಟೆಂಬರ್ 26ರಿಂದ ಪ್ರತಿ ಮಂಗಳವಾರ ಬೆಳಿಗ್ಗೆ 7 ಗಂಟೆ 15 ನಿಮಿಷದಿಂದ 7 ಗಂಟೆ 30 ನಿಮಿಷದವರೆಗೆ ವಿಶ್ವಜ್ಞಾನಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ ಕುರಿತ ವಿಶೇಷ 15 ಕಂತುಗಳ ಉಪನ್ಯಾಸ ಮಾಲಿಕೆ ಪ್ರಸಾರವಾಗಲಿದೆ.

ಡಾ. ಎಸ್. ನರೇಂದ್ರ ಕುಮಾರ್, ಎಂ.ಎನ್. ಸುಂದರ್‌ರಾಜ್, ಡಾ. ನೆಲ್ಲಿಕಟ್ಟೆ ಎಸ್. ಸಿದ್ದೇಶ್, ಡಾ. ಜಗನ್ನಾಥ ಕೆ. ಡಾಂಗೆ, ಡಾ. ಶುಭಾ ಮರವಂತೆ, ಡಾ. ಹಾ. ಮ. ನಾಗಾರ್ಜುನ ಉಪನ್ಯಾಸ ನೀಡಲಿದ್ದಾರೆ.

ಪ್ರತಿ ಕಾರ್ಯಕ್ರಮದ ಕೊನೆಯಲ್ಲಿ ಪ್ರಶ್ನೆಯನ್ನು ಕೇಳಲಾಗುವುದು. ಇದಕ್ಕೆ ಸರಿ ಉತ್ತರ ನೀಡಿದವರಿಗೆ ಬಹುಮಾನ ನೀಡಿ ಪುರಸ್ಕರಿಸಲಾಗುವುದು. ಉತ್ತರವನ್ನು ಭದ್ರಾವತಿ ಆಕಾಶವಾಣಿ ಕೇಂದ್ರದ ವಾಟ್ಸ್ ಪ್ ಸಂಖ್ಯೆ: 9481572600 ಗೆ ಅದೇ ದಿನ ಕಳುಹಿಸಬೇಕು.

Kuvempu University ಈ ಕಾರ್ಯಕ್ರಮ ಭದ್ರಾವತಿ ಆಕಾಶವಾಣಿ ಎಫ್ಎಂ 103.5 ಹಾಗೂ ತರಂಗಾತಂರ MW675 khzನಲ್ಲಿ ಹಾಗೂ ವಿಶ್ವದಾದ್ಯಂತ ‘News on Air’ ಆ‌ಪ್ ನಲ್ಲಿ ಕೇಳಬಹುದು ಎಂದು ಕುವೆಂಪು ವಿವಿಯ ಡಾ. ಬಿ.ಆರ್.ಅಂಬೇಢ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ನೆಲ್ಲಿಕಟ್ಟೆ ಎಸ್. ಸಿದ್ದೇಶ್ ಅವರು ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...