Madhu Bangarappa ಜನಸಾಮಾನ್ಯರಿಗೆ ಸರ್ಕಾರದ ಎಲ್ಲ ಸೌಲಭ್ಯಗಳನ್ನು ಸುಲಭ, ಸರಳವಾಗಿ ಒದಗಿಸುವ ಹಿನ್ನೆಲೆಯಲ್ಲಿ ಜನಸ್ನೇಹಿ ಆಡಳಿತವನ್ನು ಅನುಷ್ಟಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು.
ಶಿವಮೊಗ್ಗ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಕುವೆಂಪು ರಂಗಮoದಿರದಲ್ಲಿ ಏರ್ಪಡಿಸಿದ್ದ ಜನತಾದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಈ ಕಾರ್ಯಕ್ರಮವನ್ನು ಪ್ರತಿ ತಿಂಗಳು ಜಿಲ್ಲೆಯ ತಾಲೂಕು ಕೇಂದ್ರ ಒಂದರಲ್ಲಿ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಆಯೋಜಿಸಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಸ್ಥಳೀಯವಾಗಿ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು. ಉಳಿದ ಅರ್ಜಿಗಳನ್ನು ನಿಯಮಾನುಸಾರ ಇಲಾಖೆಗಳ ಅಧಿಕಾರಿಗಳ ಮೂಲಕ ವಿಲೇವಾರಿಗೊಳಿಸಲು ಸಮಯ ಅವಕಾಶ ನೀಡಲಾಗುವುದು. ಇದರಿಂದಾಗಿ ಸರ್ಕಾರಕ್ಕೆ ಆಡಳಿತದಲ್ಲಿ ಹಿಡಿತ ಸಿಗಲಿದೆ ಅಲ್ಲದೆ ವ್ಯವಸ್ಥೆ ತಪ್ಪು ದಾರಿಗೆ ಸಾಗದಂತೆ ಗಮನಿಸಬಹುದಾಗಿದೆ ಎಂದವರು ನುಡಿದರು.
ಜನತಾದರ್ಶನ ಕಾರ್ಯಕ್ರಮದಿಂದಾಗಿ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ದೊರೆಯಲಿದೆ ಅಲ್ಲದೆ ಅನಗತ್ಯವಾಗಿ ಆಗುತ್ತಿರುವ ವಿಳಂಬವನ್ನು ನಿಯಂತ್ರಿಸಬಹುದಾಗಿದೆ. ತಮ್ಮ ಸಮಸ್ಯೆಗಳನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಪಡೆಯಲಾಗುವ ಮನವಿಗಳಿಗೆ ಉಪಸ್ಥಿತರಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳು ಸ್ಥಳೀಯವಾಗಿ ಸಮಸ್ಯೆಗಳನ್ನು ಪರಿಹರಿಸುವರು. ಸಾರ್ವಜನಿಕರು ತಮ್ಮೆಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವAತೆ ಅವರು ಮನವಿ ಮಾಡಿದರು.
ಇಲ್ಲಿ ಸ್ವೀಕೃತವಾಗುವ ಕೆಲವು ಅರ್ಜಿಗಳು ನಿಯಮಾನುಸಾರ ಇತ್ಯರ್ಥಗೊಂಡರೆ, ಕಾನೂನಿನ ತೊಡಕಿನಿಂದ ಇನ್ನೂ ಕೆಲವು ಅರ್ಜಿಗಳು ವಿಲೇಗೊಳ್ಳದೇ ಹೋಗಬಹುದು. ಅವುಗಳನ್ನು ಗುರುತಿಸಿ, ಕಾನೂನು ತೊಡಕನ್ನು ನಿವಾರಿಸಿ, ಅಗತ್ಯವೆಂದಾದಲ್ಲಿ ಅವುಗಳಿಗೆ ತಜ್ಞರ ಸಲಹೆ ಪಡೆದು, ಸದನದಲ್ಲಿ ಚರ್ಚಿಸಿ, ಕಾನೂನನ್ನು ರೂಪಿಸಿ ಅನುಷ್ಠಾನಕ್ಕೆ ಕ್ರಮವಹಿಸಲಾಗುವುದು ಎಂದರು.
ವಿಕಲಚೇತನರು ಮಹಿಳೆಯರು ಗುಂಪಾಗಿ ಹಾಗೂ ವೈಯಕ್ತಿಕವಾಗಿ ಅರ್ಜಿಗಳನ್ನು ಸ್ವೀಕರಿಸಲು ವ್ಯವಸ್ಥೆ ಕಲ್ಪಿಸಲಾಗಿದೆ. ಜನತಾದರ್ಶನದಲ್ಲಿ ಪಡೆದ ಅರ್ಜಿಗಳನ್ನು ಐಪಿಜಿಆರ್‌ಎಸ್ ತಂತ್ರಾoಶದ ಮೂಲಕ ದಾಖಲಿಸಿಕೊಂಡು ತ್ವರಿತ ವಿಲೇವಾರಿಗೆ ಹಾಗೂ ತಕ್ಷಣದಲ್ಲಿ ವಿಲೇವಾರಿ ಮಾಡಲು ಕ್ರಮ ವಹಿಸಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ.ಮಿಥುನ್ ಕುಮಾರ್, ಅರಣ್ಯಾಧಿಕಾರಿ ಶಿವಶಂಕರ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
- ರಾಜ್ಯ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಸೆ.25 ರಂದು ನಗರದ ಕುವೆಂಪು ರಂಗಮoದಿರದಲ್ಲಿ ಸಾರ್ವಜನಿಕರ ಕುಂದು-ಕೊರತೆ ಆಲಿಸುವ ಪ್ರಥಮ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು.
- ತಮ್ಮ ಸಮಸ್ಯೆಗೆ ಪರಿಹಾರ ಕಾಣಲು ಸಾರ್ವಜನಿಕರು ಮುಖ್ಯಮಂತ್ರಿ, ಸಚಿವರ ಭೇಟಿಗೆ ಬೆಂಗಳೂರು ಹೋಗುವುದನ್ನು ತಪ್ಪಿಸಿ ಜಿಲ್ಲಾ ಹಂತದಲ್ಲಿಯೇ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಿದ್ದು, ಸಚಿವ ಮಧು ಎಸ್. ಬಂಗಾರಪ್ಪ ಅವರು ಜಿಲ್ಲೆಯ ಜನರ ಸಮಸ್ಯೆ ಆಲಿಸಿ, ಅವರ ಅಹವಾಲುಗಳನ್ನು ಸ್ವೀಕರಿಸಿದ ನಂತರ ಕೆಲವು ಅರ್ಜಿಗಲಿಗೆ ಸ್ಥಳೀಯವಾಗಿ ಹಾಗೂ ಇನ್ನೂ ಕೆಲವು ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಿದರು.
- ಪ0ಚ ಗ್ಯಾರಂಟಿಯಲ್ಲಿ 4 ಗ್ಯಾರಂಟಿಗಲನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದಿರುವ ರಾಜ್ಯ ಸರ್ಕಾರ, ಇದೀಗ ಜನರ ಬಳಿಗೆ ಧಾವಿಸಿ ಅವರ ದೂರು, ದುಮ್ಮಾನುಗಳಿಗೆ ಕಿವಿಯಾಗುವತ್ತ ಮಹತ್ವದ ಹೆಜ್ಜೆ ಇಟ್ಟಿದೆ. ಮಲೆನಾಡಿನ ಹೆಬ್ಬಾಗಿಲು ಎನಿಸಿರುವ ಶಿವಮೊಗ್ಗದ ಕುವೆಂಪು ರಂಗಮ0ದಿರದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ “ಜನತಾ ದರ್ಶನ”ದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಲಿಂದ ತಮ್ಮ ಅಹವಾಲುಗಲೊಂದಿಗೆ ಆಗಮಿಸಿದ್ದ ಸಹಸ್ರಾರು ಸಂಖ್ಯೆಯ ಜನರು ಸಚಿವರಿಗೆ ಮನವಿ ಸಲ್ಲಿಸಿದರು.
- ಮನವಿ ನೀಡಲು ಬಂದವರಿಗಾಗಿ ಸೂಕ್ತ ಆಸನ, ಕುಡಿಯುವ ನೀರು, ಉಪಹಾರ ವ್ಯವಸ್ಥೆ ಮಾಡಲಾಗಿತ್ತು. ನೆರಳಿಗಾಗಿ ಟೆಂಟ್, ವಾಹನಗಳ ವ್ಯವಸ್ಥಿತ ನಿರ್ವಹಣೆಗಾಗಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಸಾರ್ವಜನಿಕರಿಗೆ ಸರ್ಕಾರದ ವಿವಿಧ ಜನಪರ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಆಹಾರ, ಕೃಷಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್, ತೋಟಗಾರಿಕೆ, ಕಾರ್ಮಿಕ, ಕಂದಾಯ ಹೀಗೆ ಪ್ರಮುಖ 15 ಕ್ಕೂ ಹೆಚ್ಚು ಇಲಾಖೆಯ ಮಳಿಗೆಗಳನ್ನು ಹಾಕಲಾಗಿತ್ತು.
- ಬಗರ್ ಹುಕುಂ ಹಕ್ಕುಪತ್ರ, ಖಾತೆ ಪೋಡಿ, ಬೀದಿಬದಿಯ ವ್ಯಾಪಾರಕ್ಕೆ ಸಾಲಸೌಲಭ್ಯ, ಪಡಿತರ ಚೀಟಿ ತಿದ್ದುಪಡಿ, ಆಧಾರ್, ಕೆ.ವೈ.ಸಿ., Madhu Bangarappa ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಸಾರಿಗೆ, ಹಾಸ್ಟೆಲ್ ಸೇರಿದಂತೆ ಇನ್ನಿತರ ಯೋಜನೆಗಳ ಸಮಸ್ಯೆಗಳ ಕುರಿತು ಅರ್ಜಿಗಳು ಸಲ್ಲಿಕೆಯಾದವು.
- ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ-ಸಿಬ್ಬಂದಿಗಳು ಸ್ಥಳದಲ್ಲಿ ಇದ್ದು, ಕುಂದುಕೊರತೆ ಅರ್ಜಿ ಸ್ವೀಕರಿಸಿದರು. ಅದಕ್ಕಾಗಿ ಸಭಾಂಗಣದ ಆವರಣದಲ್ಲಿ 10-15 ಕೌಂಟರ್‌ಗಳನ್ನು ತೆರೆಯಲಾಗಿತ್ತು.