Shimul Dairy Shivamogga ಶಿಮುಲ್ 7.22 ಕೋಟಿ ರೂಪಾಯಿ ನಿವ್ವಳ ಲಾಭಗಳಿಸಿದೆ.
ನಿಯಮಾನುಸಾರ ಲಾಭವನ್ನು ಸದಸ್ಯ ಸಂಘಗಳಿಗೆ ಬೋನಸ್ ಮತ್ತು ಡಿವಿಡೆಂಡ್ ರೂಪದಲ್ಲಿ ವಿಲೇವಾರಿ ಮಾಡಲಾಗುವುದೆಂದು ಒಕ್ಕೂಟದ ಅಧ್ಯಕ್ಷರು ಎನ್. ಹೆಚ್. ಶ್ರೀಪಾದರಾವ್ ಅವರು ಹೇಳಿದ್ದಾರೆ.
ಶಿವಮೊಗ್ಗ ನಗರದ ಪೆಸಿಟ್ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ನಡೆದ ಶಿವಮೊಗ್ಗ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟದ 2022-2 3ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.
ಶಿವಮೊಗ್ಗ ಡೈರಿಯಲ್ಲಿ ಪ್ರತ್ಯೇಕವಾಗಿ ಸಿಹಿ ಉತ್ಪನ್ನಗಳ ಉತ್ಪಾದನಾ ಘಟಕವನ್ನು 21.5 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಥಾಪಿಸಲು ಯೋಜಿಸಲಾಗಿದೆ. ಚಿತ್ರದುರ್ಗ ಹಾಗೂ ಹೊಸದುರ್ಗದಲ್ಲಿ ಅನುಕ್ರಮವಾಗಿ ನಿತ್ಯ ತಲಾ ಒಂದು ಲಕ್ಷ ಲೀಟರ್ ಸಾಮರ್ಥ್ಯದ ಶೀತಲೀಕರಣ ಕೇಂದ್ರಗಳ ಕಾಮಗಾರಿಗಳನ್ನು ಕರ್ನಾಟಕ ಗಣಿ ಅಭಿವೃದ್ಧಿ ಪುನಸ್ಚೇತನ ನಿಗಮದ ಅನುದಾನದೊಂದಿಗೆ ಕೈಗೆತ್ತಿಕೊಳ್ಳಲು ಯೋಜಿಸಲಾಗಿದೆ ಎಂದು ಮಾಹಿತಿ ತಿಳಿಸಿದರು.
Shimul Dairy Shivamogga ಶಿವಮೊಗ್ಗ ಡೈರಿಯಲ್ಲಿ ನಿತ್ಯ 30.0 ಮೆಟ್ರಿಕ್ ಟನ್ ಸಾಮರ್ಥ್ಯದ ಹಾಲಿನ ಪುಡಿ ತಯಾರಿಕೆ ಘಟಕವನ್ನು ರಾಜ್ಯ ಸರ್ಕಾರ ಹಾಗೂ ಕರ್ನಾಟಕ ಸಹಕಾರ ಹಾಲು ಮಹಾಮಂಡಲದ ಅನುದಾನದೊಂದಿಗೆ ಮತ್ತು ಡಿಐಡಿಎಫ್ ಯೋಜನೆಯಲ್ಲಿ ಅಗತ್ಯ ಧನ ಸಹಾಯದೊಂದಿಗೆ ಅಂದಾಜು 145 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಯೋಜಿಸಲಾಗಿದೆ ಎಂದು ಹೇಳಿದರು.