Chikkamagaluru District Jail ಸಮಾಜವನ್ನು ದುಶ್ಚಟಗಳಿಂದ ಮುಕ್ತಗೊಳಿಸಿ ರಕ್ಷಿಸಬೇಕಿದೆ, ಆ ನಿಟ್ಟಿನಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಯೂ ಸಮಾಜಮುಖಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಕಾರಾಗೃಹ ಅಧೀಕ್ಷಕ ಶ್ರೀಶೈಲಾ ಎಸ್.ಮೇಟಿ ಹೇಳಿದರು.
ಚಿಕ್ಕಮಗಳೂರು ನಗರದ ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ, ನಿಮ್ಹಾನ್ಸ್ ಆಸ್ಪತ್ರೆ, ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ಸ್ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಕಾರಾಗೃಹದಲ್ಲಿ ವ್ಯಸನಮುಕ್ತ ಕೇಂದ್ರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ವ್ಯಸನದಿಂದ ದೂರವಿರಲು ಸಮತೋಲನ ಆಹಾರ ಸೇವನೆ, ವ್ಯಾಯಾಮ ಇತರ ಆರೋಗ್ಯಕರ ಹವ್ಯಾಸ ಗಳನ್ನು ರೂಪಿಸಿಕೊಳ್ಳಬೇಕು. ದುಶ್ಚಟಗಳಿಂದ ದೂರವಿರಲು ಯುವಕರಲ್ಲಿ ಜಾಗೃತಿ ಮೂಡಿಸಬೇಕು. ಮಾದಕ ವ್ಯಸನವು ಮೆದುಳಿನ ಕಾಯಿಲೆಯಾಗಿದೆ. ಮಾದಕ ವ್ಯಸನಗಳನ್ನು ಲಘುವಾಗಿ ಪರಿಗಣಿಸದೇ ಅವುಗಳ ವಿರುದ್ಧ ಎಲ್ಲರೂ ಹೋರಾಟ ಮಾಡುವುದು ಅತ್ಯಂತ ಅವಶ್ಯವಾಗಿದೆ ಎಂದರು.
ಸಮಾಜವನ್ನು ವ್ಯಸನಮುಕ್ತಗೊಳಿಸುವಲ್ಲಿ ಪೋಷಕರ ಪಾತ್ರ ಮುಖ್ಯವಾಗಿದ್ದು, ಮಕ್ಕಳನ್ನು ಡಾಕ್ಟರ್, ಎಂಜಿನಿ ಯರ್ ಆಗಲೆಂಬ ಆಸೆಯನ್ನು ತೊರೆದು ಅವರಲ್ಲಿ ಉತ್ತಮ ಸಂಸ್ಕಾರ ಬೆಳೆಸಬೇಕು. ಇಂತಹ ಮನಸ್ಸು ಮಾಡಿದರೆ ಇಡೀ ಸಮುದಾಯವನ್ನು ವ್ಯಸನಮುಕ್ತ ಮಾಡಲು ಸಾಧ್ಯವಾಗಲಿದೆ ಎಂದರು.
ವ್ಯಸನಮುಕ್ತ ಸಮಾಜ ನಿರ್ಮಾಣ ಕಾರ್ಯದಲ್ಲಿ ಡಾ.ಮಹಾಂತ ಶ್ರೀಗಳ ಪಾತ್ರ ಮುಖ್ಯವಾಗಿದ್ದು, ಅವರ ಈ ಕಾರ್ಯಕ್ಕೆ ನಾವೆಲ್ಲರೂ ಪಣತೊಡುವ ಅಗತ್ಯವಿದೆ. ಆ ನಿಟ್ಟಿನಲ್ಲಿ ಇಂದಿನ ಯುವಜನತೆ ಹೆತ್ತವರ ಆಶಯ ಮತ್ತು ಕನಸುಗಳನ್ನು ಅರ್ಥಮಾಡಿಕೊಂಡು ಉತ್ತಮ ಭವಿಷ್ಯಕ್ಕಾಗಿ ವ್ಯಸನಗಳಿಂದ ದೂರವಿರಬೇಕು ಎಂದು ತಿಳಿಸಿದರು.
ಬೆಂಗಳೂರು ನಿಮ್ಹಾನ್ಸ್ ಆಸ್ಪತ್ರೆಯ ಸಹಾಯಕ ಪ್ರಾಧ್ಯಾಪಕ ಡಾ. ಜಯಂತ್ ಮಹಾದೇವನ್ ಮಾತನಾಡಿ ವ್ಯಸನದಿಂದ ಬಳಲುತ್ತಿರುವವರು ಕೆಲವೊಂದು ವಸ್ತುಗಳಿಗೆ ದಾಸರಾಗಿದ್ದು ಇದರಿಂದ ಮುಂದಿನ ಜೀವನ ದಲ್ಲಿ ಆರೋಗ್ಯ ಸಮಸ್ಯೆ ಎದುರಾಗುವ ವಿಷಯ ಅರಿತಿದ್ದರೂ ಬಳಸಲಾಗುತ್ತಿದೆ. ಅಂತಹವರಿಗೆ ಜಾಗೃತಿ ಮೂಡಿಸಿ ವ್ಯಸನಮುಕ್ತಗೊಳಿಸಲು ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
Chikkamagaluru District Jail ಇದೇ ವೇಳೆ ವ್ಯಸನದಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮ ಕುರಿತು ಬ್ಯಾನರ್ ಜಿಲ್ಲಾ ಕಾರಾಗೃಹ ಅಧೀಕ್ಷಕರು ಬಿಡುಗಡೆಗೊಳಿಸಿ ವ್ಯಸನಮುಕ್ತ ಕೇಂದ್ರದಲ್ಲಿ ಹಾಕಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾರಾಗೃಹ ಸಹಾಯಕ ಜೈಲರ್ ಎಂ.ಕೆ.ನೆಲಧರಿ, ಜಿಲ್ಲಾಸ್ಪತ್ರೆ ಮಾನಸಿಕ ಆರೋಗ್ಯ ತಜ್ಞ ಡಾ. ಚಂದ್ರಶೇಖರ್, ಡಿ.ಎಲ್.ಎಸ್.ಎ. ಉಪ ಕಾನೂನು ಅಭಿರಕ್ಷಕ ಡಿ.ನಟರಾಜ್, ಬೆಂಗಳೂರು ನಿಮ್ಹಾನ್ಸ್ ಆಸ್ಪತ್ರೆಯ ವೈದ್ಯರುಗಳಾದ ಡಾ. ರಾಹುಲ್‌ಶರ್ಮ, ಡಾ. ಹರ್ಷಿತ್ ದೋವ, ಎನ್.ಜಿ.ಓ. ಡಿ.ಪ್ರವೀಣ್‌ಕುಮಾರ್ ಮತ್ತಿತರರು ಹಾಜರಿದ್ದರು.