Friday, December 5, 2025
Friday, December 5, 2025

Skill Development Department ಕೌಶಲ್ಯತರಬೇತಿಯು ವ್ಯಕ್ತಿಯ ಅಭಿವೃದ್ಧಿಗೆ ಸಹಕಾರಿ- ಎಚ್.ಎಂ.ಸುರೇಶ್

Date:

Skill Development Department ಭಾರತ ಸರ್ಕಾರ,ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಹಿಂದೂ ಯುವತಿ ರಕ್ಷತಿ ಯುವತಿ ಮಂಡಳಿ, ಶಿವಮೊಗ್ಗ ಇವರ ಸಹಯೋಗದೊಂದಿಗೆ ಇಂದು ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ ಮತ್ತು ಕೌಶಲ್ಯಾಧಾರಿತ ಉದ್ಯಮಶೀಲತೆ ಕಾರ್ಯಕ್ರಮ (ಹೊಲಿಗೆ ತರಬೇತಿ) ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮವನ್ನು ಸುತ್ತುಕೋಟೆ ಗ್ರಾಮದಲ್ಲಿ ಆಚರಿಸಲಾಯಿತು.

ಕೌಶಲ್ಯಾಭಿವೃದ್ಧಿ ಇಲಾಖೆಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಸುರೇಶ್ ಹೆಚ್. ಎಂ. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕೌಶಲ್ಯ ತರಬೇತಿಯು ವ್ಯಕ್ತಿಯ ಅಭಿವೃದ್ಧಿಗೆ ಬಹಳ ಸಹಕಾರಿಯಾಗಿದೆ. ಕೌಶಲ್ಯವನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುಂದೆ ಬರಬೇಕಾಗಿ ಕರೆಕೊಟ್ಟರು.

ಕೌಶಲ್ಯಾಭಿವೃದ್ದಿ ಇಲಾಖೆಯ, ಅಭಿಯಾನ ವ್ಯವಸ್ಥಾಪಕರಾದ ಸಮನ್ವಯ ಕಾಶಿಯವರು ದೀನ್ ದಯಾಳ್ ಉಪಾಧ್ಯಾಯರ ಜೀವನದಲ್ಲಿ ಮಾಡಿದ ಸಾಧನೆಗಳ ಬಗ್ಗೆ ಹಾಗೂ ಅವರು ಜೀವನದಲ್ಲಿ ಅಳವಡಿಸಿಕೊಂಡ ಮೌಲ್ಯಗಳ ಬಗ್ಗೆ ತಿಳಿಸಿದರು.

ನೆಹರು ಯುವ ಕೇಂದ್ರ, ಜಿಲ್ಲಾ ಯುವ ಅಧಿಕಾರಿ ಉಲ್ಲಾಸ್, ನೆಹರು ಯುವ ಕೇಂದ್ರದ ಪ್ರಮುಖ ಕಾರ್ಯಕ್ರಮವಾದ ಮೇರಿ ಮಿಟ್ಟಿ ಮೇರಾ ದೇಶ್ ಬಗ್ಗೆ ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಎಲ್ಲಾ ಅಭ್ಯರ್ಥಿಗಳಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು.

Skill Development Department ಹರಮಘಟ್ಟ ಗ್ರಾಮ ಪಂಚಾಯತಿಯ ಅಧ್ಯಕ್ಷೆ ಪುಟ್ಟಮ್ಮ, ಸುತ್ತುಕೋಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಗೀತಾ, ಹೊಲಿಗೆ ತರಬೇತಿಯ ಶಿಕ್ಷಕಿಯಾದ ಸಿಂಧು ಹಾಗೂ ತರಬೇತಿಯ ಅಭ್ಯರ್ಥಿಗಳು, ಊರಿನ ಗ್ರಾಮಸ್ಥರು, ನೆ.ಯು. ಕೇಂದ್ರದ ಕಾರ್ಯಕರ್ತರಾದ ದುತೀಂದ್ರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...