Monday, December 15, 2025
Monday, December 15, 2025

Vishwa Hindu Parishad-Bajrang Dal ಹಿಂದೂ ಸಮಾಜದ ಯುವಕರನ್ನು ಜಾಗೃತಗೊಳಿಸಲು ಶೌರ್ಯ ಜಾಗರಣ ರಥ- ಕೆ.ಆರ್.ಸುನೀಲ್

Date:

Vishwa Hindu Parishad-Bajrang Dal ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಹಿಂದೂಗಳನ್ನು ಸ್ವಾಭಿಮಾನಿಗಳನ್ನಾಗಿ ಮಾಡುವ ಕೆಲಸ ಹಿಂದಿನಿoದಲೂ ಮಾಡುತ್ತಿದೆ. ತ್ಯಾಗದ ಪರಂಪರೆ ನಮ್ಮದು ಎನ್ನುವುದನ್ನು ಇಂದಿನ ಪೀಳಿಗೆಗೆ ತಿಳಿಸಬೇಕಿದೆ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಂಯೋಜಕ ಕೆ.ಆರ್. ಸುನೀಲ್ ಹೇಳಿದರು.

ಸೊರಬ ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್-ಬಜರಂಗದಳದಿoದ ಹಮ್ಮಿಕೊಂಡ ಶೌರ್ಯ ಜಾಗರಣ ರಥಯಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಹಿಂದೂ ಧರ್ಮದ ಮೇಲೆ ನೂರಾರು ವರ್ಷಗಳ ಕಾಲ ಪರಕೀಯರ ದಾಳಿ ನಡೆದಾಗಲೂ ಧರ್ಮವೂ ಈ ನೆಲದಲ್ಲಿ ನೆಲೆಯೂರಿದೆ. ಹಿಂದೂ ಧರ್ಮದ ರಕ್ಷಣೆಗಾಗಿ ಅನೇಕ ಮಹನೀಯರ ತ್ಯಾಗ ಮತ್ತು ಬಲಿದಾನವಿದೆ. ಇದನ್ನೂ ಇಂದಿನ ಪೀಳಿಗೆಗೆ ತಿಳಿಸುವುದು ಆದ್ಯ ಕರ್ತವ್ಯವಾಗಿದೆ. ಹಿಂದೂ ಧರ್ಮದ ಮೇಲೆ ಅನೇಕ ಆಕ್ರಮಣಗಳಾಗಿವೆ. ಇಸ್ಲಾಂ ಕ್ರೆöÊಸ್ತರ ದಾಳಿಯನ್ನು ಶೌರ್ಯ ಮತ್ತು ತ್ಯಾಗದ ಮೂಲಕ ಹಿರಿಯರು ಎದುರಿಸಿದ್ದಾರೆ.

ಹಿಂದೂ ಸಮಾಜದ ಯುವಕರನ್ನು ಬಡಿದೆಬ್ಬಿಸಲು ಶೌರ್ಯ ಜಾಗರಣ ರಥ ಯಾತ್ರೆ ದೇಶಾದ್ಯಂತ ನಡೆಯುತ್ತಿದೆ ಎಂದರು.

ವಿಹಿಂಪ ಕ್ಷೇತ್ರೀಯ ಸತ್ಸಂಗ ಪ್ರಮುಖ್ ಮಹಾಬಲೇಶ್ವರ ರಾವ್ ಮಾತನಾಡಿ, ಭಾರತದ ಮೇಲೆ ಅಕ್ರಮಣ ನಡೆದಾಗಲೂ ಹಿಂದೂ ಧರ್ಮ ಉಳಿದಿದೆ. ಹಿಂದೂ ಧರ್ಮದು ಸೋಲಿನ ಇತಿಹಾಸವಲ್ಲ ಪರಾಕ್ರಮದ ಇತಿಹಾಸ ಎನ್ನುವುದನ್ನು ಸಮಾಜಕ್ಕೆ ತಿಳಿಸುವುದು ಅಗ್ಯವಿದೆ. ಅನ್ಯಧರ್ಮಿಯರಿಂದ ಹಿಂದೂ ಸಮಾಜದ ಮೇಲೆ ಅನೇಕ ಅಕ್ರಮಗಳಾಗಿವೆ. ಜಗತ್ತಿನಲ್ಲಿ ಹಿಂದೂಗಳಿಗೆ ಉಳಿದಿರುವುದು ಭಾರತ ಮಾತ್ರ. ದೇಶ ಹಿಂದೂಸ್ತಾನವಾಗಬೇಕು. ವಿಹಿಂಪ ಸ್ಥಾಪನೆಯಾಗಿ ಅರವತ್ತು ವರ್ಷ ಹಾಗೂ ಶ್ರೀ ರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಭವ್ಯ ಶ್ರೀ ರಾಮ ಮಂದಿರ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ಶೌರ್ಯ ಜಾಗರಣ ರಥಯಾತ್ರೆ ನಡೆಯುತ್ತಿದೆ ಎಂದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜ್ ಮುಂಭಾಗ ಶೌರ್ಯ ಜಾಗರಣ ರಥಯಾತ್ರೆಯನ್ನು ಸ್ವಾಗತಿಸಿ, ರಾಜಬೀದಿಯಲ್ಲಿ ಡೊಳ್ಳು ಕುಣಿತ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಲಾತಂಡಗಳೊoದಿಗೆ ಮೆರವಣಿಗೆ ನಡೆಸಲಾಯಿತು.

Vishwa Hindu Parishad-Bajrang Dal ಬಜರಂಗದಳ ವಿಭಾಗ ಸಂಯೋಜಕ ರಾಜೇಶ್‌ಗೌಡ, ಜಿಲ್ಲಾ ಸಹ ಸಂಯೋಜಕ್ ಶಶಿಕುಮಾರ್, ತಾಲೂಕು ಸಹ ಸಂಯೋಜಕ ಮಣಿಕಂಠ, ನಗರ ಸಂಯೋಜಕ ಎಸ್.ಎನ್. ಶರತ್, ವಿಹಿಂಪ ಸಾಗರ ಜಿಲ್ಲಾ ಕಾರ್ಯದರ್ಶಿ ಎಚ್.ಎಲ್. ಚಂದನ್, ಜಿಲ್ಲಾ ಮಂದಿರ ಅರ್ಚಕ ಪರೋಹಿತ ಸಂಪರ್ಕ ಪ್ರಮುಖ್ ಎಂ.ಎಸ್. ಕಾಳಿಂಗ್‌ರಾಜ್, ಮಾತೃ ಮಂಡಳಿಯ ವಾಸಂತಿ ನಾವುಡಾ, ವೀಣಾ ಶ್ರೀಧರ್, ದುರ್ಗಾ ವಾಹಿನಿ ಕೋಮಲಾ ಪುರಾಣಿಕ್, ಪ್ರಮುಖರಾದ ಡಾ.ಎಚ್.ಇ. ಜ್ಞಾನೇಶ್, ಪಾಣಿ ರಾಜಪ್ಪ, ಸಂಜೀವ್ ಆಚಾರ್, ನಾಗರಾಜ ಗುತ್ತಿ, ಸಿ.ಪಿ. ಈರೇಶ್‌ಗೌಡ, ಮಹೇಶ್ ಖಾರ್ವಿ, ಮಹೇಶ್ ಗೋಖಲೆ, ಆಶೀಕ್ ನಾಗಪ್ಪ, ನಿರಂಜನ್, ನೆಮ್ಮದಿ ಶ್ರೀಧರ್, ಅಮೃತ, ಕೆ.ವಿ. ವಿನಾಯಕ, ರಾಘು ಮಡಿವಾಳ, ಉಮಾಶಂಕರ, ಪ್ರವೀಣ, ಆನಂದ, ಅಭಿ ಹೊಯ್ಸಳ ಸೇರಿದಂತೆ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...