Hampi Tourism ರಾಜ್ಯದ ವಿಶ್ವ ಪಾರಂಪರಿಕ ತಾಣವಾದ ವಿಜಯನಗರ ಸಾಮ್ರಾಜ್ಯದ ಹಂಪಿಗೆ ಈಗ ಮತ್ತೊಂದು ಗರಿ ಮೂಡಿದೆ. ಈ ವರ್ಷದ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮವೆಂದು ಪ್ರವಾಸೋದ್ಯಮ ಸಚಿವಾಲಯವು ಘೋಷಣೆ ಮಾಡಿದೆ. ಇದು ಗ್ರಾಮೀಣ ಮೂಲಸೌಕರ್ಯ ಮತ್ತು ಅದರ ಸಂಸ್ಕೃತಿಯನ್ನು ಸುಧಾರಿಸಲು ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಹಣ ಪಡೆಯಲು ನೆರವಾಗುತ್ತದೆ. ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ಈ ಘೋಷಣೆ ಮಾಡಲಾಗಿದೆ.
ಹಂಪಿಗೆ ಪ್ರವಾಸಿ ಗ್ರಾಮ ಪ್ರಶಸ್ತಿ ಲಭಿಸಿದ್ದಕ್ಕೆ ರಾಜ್ಯದ ಮುಖ್ಯಮಂತ್ರಿ ಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸಂತೋಷ ವ್ಯಕ್ತಡಿಸಿದ್ದಾರೆ.
Hampi Tourism ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಸಲುವಾಗಿ ಕೇಂದ್ರ ಸರ್ಕಾರ ನೀಡುವ “ಪ್ರವಾಸಿ ಗ್ರಾಮ ಪ್ರಶಸ್ತಿ” ಯು ನಮ್ಮ ನಾಡಿನ ಹೆಮ್ಮೆಯ ಪ್ರವಾಸಿ ತಾಣಗಳಲ್ಲೊಂದಾದ ಹಂಪಿ ಗ್ರಾಮಕ್ಕೆ ದೊರೆತದ್ದು ಅತ್ಯಂತ ಖುಷಿಯ ಸಂಗತಿ. ಕಳೆದ ವಾರವಷ್ಟೇ ಹೊಯ್ಸಳರ ಕಾಲದ ಪುಣ್ಯಕ್ಷೇತ್ರಗಳು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಗೊಂಡಿದ್ದವು, ಈಗ ಹಂಪಿ ಗ್ರಾಮವು ಉತ್ತಮ ಪ್ರವಾಸಿ ಗ್ರಾಮವಾಗಿ ಗುರುತಿಸಲ್ಪಟ್ಟಿರುವುದು ನಾಡಿನ ಪ್ರವಾಸೋದ್ಯಮಕ್ಕೆ ಮತ್ತಷ್ಟು ಚೈತನ್ಯ ನೀಡಿದೆ ಎಂದು ಮುಖ್ಯಮಂತ್ರಿಗಳು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದ್ದಾರೆ.