Monday, February 2, 2026
Monday, February 2, 2026

Gandhi Jayanti 2023 ಅಕ್ಟೋಬರ್2 ರಂದು ಡಾ.ಅಂಬೇಡ್ಕರ್ ಭವನದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ

Date:

Gandhi Jayanti 2023  ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಅ.02 ರಂದು ಮಹಾತ್ಮಾ ಗಾಂಧಿಜಿಯವರ 154 ನೇ ಜಯಂತಿಯನ್ನು ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 9 ಗಂಟೆಗೆ ಏರ್ಪಡಿಸಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನೆರವೇರಿಸುವರು.

ಅಧ್ಯಕ್ಷತೆಯನ್ನು ಶಿವಮೊಗ್ಗ ನಗರ ಕ್ಷೇತ್ರದ ವಿಧಾನಸಭಾ ಶಾಸಕರಾದ ಎಸ್.ಎನ್.ಚನ್ನಬಸಪ್ಪ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ, ವಿಧಾನಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾದಿಕಾರಿಗಳು, ಇತರೆ ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳ್ಳುವರು.

Gandhi Jayanti 2023  ಕಾರ್ಯಕ್ರಮದಲ್ಲಿ ಸರ್ವಧರ್ಮ ಪ್ರಾರ್ಥನೆ ಇರಲಿದೆ. ಹಾಗೂ ಬಾಪೂಜಿ ಕುರಿತು ಪ್ರೌಢಶಾಲೆ, ಪದವಿಪೂರ್ವ ಮತ್ತು ಪದವಿ/ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ವಿತರಿಸಲಾಗುವುದು ಎಂದು ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...