Tuesday, June 17, 2025
Tuesday, June 17, 2025

Shimoga District Chamber of Commerce & Industry ಯುವ ಉದ್ಯಮಿಗಳು ಸಮಾಜಸೇವೆಯಲ್ಲೂ ತೊಡಗಿಸಿಕೊಳ್ಳಬೇಕು-ಶಾಸಕ ರುದ್ರೇಗೌಡರು

Date:

Shimoga District Chamber of Commerce & Industry ಯುವ ಉದ್ಯಮಿಗಳು ಉದ್ಯಮವನ್ನು ಯಶಸ್ವಿಯಾಗಿ ಮುನ್ನಡೆಸುವ ಜತೆಯಲ್ಲಿ ಸಮಾಜದ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಸಂಘದ ಮಾಜಿ ಅಧ್ಯಕ್ಷ ಹಾಗೂ ಎಫ್‌ಕೆಸಿಸಿಐ ಮ್ಯಾನೇಜಿಂಗ್ ಕಮಿಟಿ ಸದಸ್ಯರಾಗಿ ಆಯ್ಕೆಯಾಗಿರುವ ಡಿ.ಎಂ.ಶಂಕರಪ್ಪ ಅವರಿಗೆ ಮಾಜಿ ಅಧ್ಯಕ್ಷರು ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಂತ್ರಜ್ಞಾನ ಕ್ಷೇತ್ರದಲ್ಲಿ ಯುವ ಉದ್ಯಮಿಗಳಿಗೆ ಹೆಚ್ಚಿನ ಅವಕಾಶ ಇದ್ದು, ಪರಿಣಾಮಕಾರಿಯಾಗಿ ಬಳಸಿಕೊಂಡು ಹಂತ ಹಂತವಾಗಿ ಬೆಳೆಯಬೇಕು. ಸಂಸ್ಥೆ ಪ್ರಗತಿ ಹೊಂದುವ ಜತೆಯಲ್ಲಿ ಸಮಾಜದ ಬೆಳವಣಿಗೆಯಲ್ಲಿ ಪಾಲ್ಗೊಳ್ಳಬೇಕು. ಸಮಾಜಮುಖಿ ಕಾರ್ಯಗಳಲ್ಲಿ ಯುವ ಉದ್ಯಮಿಗಳನ್ನು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘವು ಈಗಾಗಲೇ ಹಿರಿಯ ಅಧ್ಯಕ್ಷರ ಕೊಡುಗೆಯಿಂದ ರಾಜ್ಯದಲ್ಲಿಯೇ ಮಾದರಿ ಸಂಘಟನೆಯಾಗಿ ಗುರುತಿಸಿಕೊಂಡಿದೆ. ಸ್ಕಿಲ್ ಅಕಾಡೆಮಿ ಆರಂಭ ಮಾಡಲು ಮುಂದಾಗಿರುವುದು ಶ್ಲಾಘನೀಯ ಎಂದರು.

ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಮಾತನಾಡಿ, ಡಿ.ಎಂ.ಶಂಕರಪ್ಪ ಅವರು ಅನೇಕ ಸಂಘ ಸಂಸ್ಥೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ವಾಣಿಜ್ಯ ಸಂಘದಲ್ಲಿ ಉನ್ನತ ಸ್ಥಾನ ತಲುಪಿ ಸಮರ್ಥವಾಗಿ ಸೇವಾ ಕಾರ್ಯ ನಡೆಸುವಂತಾಗಲಿ ಎಂದು ಶುಭಕೋರಿದರು.

ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷರಿಂದ ಎಫ್‌ಕೆಸಿಸಿಐ ಮ್ಯಾನೇಜಿಂಗ್ ಕಮಿಟಿ ಸದಸ್ಯ ಡಿ.ಎಂ.ಶಂಕರಪ್ಪ ಅವರಿಗೆ ಆತ್ಮೀಯವಾಗಿ ಅಭಿನಂದಿಸಲಾಯಿತು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ಡಿ.ಎಂ.ಶಂಕರಪ್ಪ ಅವರು ಶಿವಮೊಗ್ಗ ಸಂಘದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಇದೀಗ ಮ್ಯಾನೇಜಿಂಗ್ ಕಮಿಟಿ ಸದಸ್ಯರಾಗಿ ಆಯ್ಕೆ ಆಗಿರುವುದು ಹೆಮ್ಮೆಯ ಸಂಗತಿ. ಮುಂದಿನ ದಿನಗಳಲ್ಲಿ ಉನ್ನತ ಸ್ಥಾನ ತಲುಪುವಂತಾಗಲಿ ಎಂದು ಆಶಿಸಿದರು.

Shimoga District Chamber of Commerce & Industry ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷ ಟಿ.ಆರ್.ಅಶ್ವತ್ಥ್ ನಾರಾಯಣ ಶೆಟ್ಟಿ, ಕೆ.ವಿ.ವಸಂತ್‌ಕುಮಾರ್, ಜೆ.ಆರ್.ವಾಸುದೇವ್, ಉಪಾಧ್ಯಕ್ಷ ಬಿ.ಗೋಪಿನಾಥ್, ಕಾರ್ಯದರ್ಶಿ ವಸಂತ್ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Friends Health Care Center ಜೂ.18 ರಂದು ಉಚಿತ ಮಧುಮೇಹ ಮತ್ತು ರಕ್ತದೊತ್ತಡ ತಪಾಸಣಾ ಶಿಬಿರ

Friends Health Care Center ಫ್ರೆಂಡ್ಸ್ ಹೆಲ್ತ್ ಕೇರ್ ಸೆಂಟರ್ ಸುದೇನು...