Friday, April 25, 2025
Friday, April 25, 2025

Department of Youth Empowerment and Sports ಅಕ್ಟೋಬರ್ 2&3 ರಂದು ಶಿವಮೊಗ್ಗ ದಸರಾ ಕ್ರೀಡಾಕೂಟ

Date:

Department of Youth Empowerment and Sports ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿವಿಧ ಕ್ರೀಡಾ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಅ.02 ಮತ್ತು 03 ರಂದು ನೆಹರೂ ಕ್ರೀಡಾಂಗಣದಲ್ಲಿ ದಸರಾ ಕ್ರೀಡಾ ಕೂಟವನ್ನು ಹಮ್ಮಿಕೊಳ್ಳಲಾಗಿದೆ.

ಈ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭವನ್ನು ಅ.02 ರಂದು ಬೆಳಗ್ಗೆ 10:00ಕ್ಕೆ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪರವರು ಉದ್ಘಾಟಿಸುವರು. ಶಾಸಕ ಎಸ್.ಎನ್. ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್‌ರವರ ಗೌರವ ಉಪಸ್ಥಿತಿ ಇರಲಿದೆ.

Department of Youth Empowerment and Sports ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನ ಸಭೆ ಮತ್ತು ವಿಧಾನ ಪರಿಷತ್ ಶಾಸಕರು, ಮಹಾನಗರ ಪಾಲಿಕೆ ಮಹಾಪೌರರು, ಸದಸ್ಯರು ಹಾಗೂ ಶಿವಮೊಗ್ಗ ಜಿಲ್ಲೆಯ ಎಲ್ಲಾ ಗೌರವಾನ್ವಿತ ಜನ ಪ್ರತಿನಿಧಿಗಳು, ಮಹಾನಗರ ಪಾಲಿಕೆ ಸದಸ್ಯರುಗಳು, ಗ್ರಾಮ ಪಂಚಾಯತ್ ಸದಸ್ಯರುಗಳು ಭಾಗವಹಿಸಲಿದ್ದಾರೆ.

ಜಿಲ್ಲಾಧಿಕಾರಿ ಡಾ. ಸೆಲ್ವಮಣ ಆರ್., ಜಿ.ಪಂ. ಸಿಇಓ ಲೋಖಂಡೆ ಸ್ನೇಹಲ್ ಸುಧಾಕರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ. ಮಿಥುನ್‌ಕುಮಾರ್, ಯು.ಸ.ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಂ.ಟಿ.ಮಂಜುನಾಥಸ್ವಾಮಿ ಉಪಸ್ಥಿತರಿರುವರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Acharya Tulsi National College of Commerce ರಕ್ತದಾನಿಗಳು ಸಮಾಜದ ನೈಜ ಹೀರೋಗಳು- ಡಾ.ಪಿ.ನಾರಾಯಣ್

Acharya Tulsi National College of Commerce ಎಲ್ಲಾ ದಾನಗಳಿಗಿಂತ ರಕ್ತದಾನ...