Saturday, December 6, 2025
Saturday, December 6, 2025

Women and Child Development ಹಿರಿಯರ ಬದುಕಿನ ಮೌಲ್ಯಗಳನ್ನ ನಾವು ಅಳವಡಿಸಿಕೊಂಡರೇ ಅದೇ ಹಿರಿಯರಿಗೆ ನಾವು ನೀಡುವ ಗೌರವ- ಸಿದ್ಧರಾಮಯ್ಯ

Date:

Women and Child Development ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು
ಉದ್ಘಾಟಿಸಿದರು.

ವಿವಿಧ ಕ್ಷೇತ್ರಗಳ ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯರನ್ನು ಸನ್ಮಾನಿಸಿ ಮಾತನಾಡಿದರು.

ಪ್ರತಿಯೊಬ್ಬರೂ ವಿಶ್ವ ಮಾನವರಾಗಿ ಬದುಕಿ, ವಿಶ್ವ ಮಾನವರಾಗಿಯೇ ಇಹಲೋಕ ತ್ಯಜಿಸಬೇಕು. ಹಿರಿಯರನ್ನು ಗೌರವದಿಂದ ನಡೆಸಿಕೊಳ್ಳುವುದು ಮತ್ತು ಅವರ ಬದುಕಿನ ಮೌಲ್ಯಗಳನ್ನು ನಾವು ಅಳವಡಿಸಿಕೊಳ್ಳುವುದೇ ಹಿರಿಯರಿಗೆ ನಾವು ನೀಡುವ ಗೌರವ. ನಾವು ನೀವೆಲ್ಲಾ ಎಷ್ಟು ವರ್ಷ ಬದುಕುತ್ತೀವಿ ಎನ್ನುವುದಕ್ಕಿಂತ ಇದ್ದಷ್ಟು ದಿನ ಸಾರ್ಥಕ ಬದುಕು ನಡೆಸುವುದು ಉತ್ತಮ ಎಂದು ತಿಳಿಸಿದರು.

Women and Child Development ಕಾರ್ಯಕ್ರಮದಲ್ಲಿ ಸನ್ಮಾನಿತರಾದ ಪದ್ಮಶ್ರೀ ಪುರಸ್ಕೃತ ಶ್ರೀ ಹರೇಕಳ ಹಾಜಬ್ಬ, ಹಿರಿಯ ನ್ಯಾಯವಾದಿ ಪಿ.ಎಸ್.ರಾಜಗೋಪಾಲ್, ಯೋಗಪಟು ಡಿ.ನಾಗರಾಜ್, ಸಂಬಾಳ ವಾದಕ ಹಣಮಂತ ಗೋವಿಂದಪ್ಪ ಹೂಗಾರ, ನಿವೃತ್ತ ಕುಲಪತಿ ಆರ್.ಆರ್.ಹಂಚಿನಾಳ, ಸಮಾಜ ಸೇವಕ ವೀರಭದ್ರಪ್ಪ ಶರಣಪ್ಪ ಉಪ್ಪಿನ, ನಿವೃತ್ತ ಶಿಕ್ಷಕರಾದ ಎಚ್.ಎಸ್.ಗಿರಿರಾಜ್ ಎಲ್ಲರೂ ನಮಗೆ ಮಾದರಿ ಮತ್ತು ಮಾರ್ಗದರ್ಶಕರು. ಇವರ ಬದುಕಿನ ಮೌಲ್ಯಗಳು ಸಮಾಜವನ್ನು ಬೆಳಗುತ್ತವೆ ಎಂಬ ಭಾವನೆ ನನ್ನದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೇಳಿದರು.

ಈ ಸಂದರ್ಭದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...