Thursday, March 19, 2026
Thursday, March 19, 2026

Breaking News ಈದ್ ಮಿಲಾದ್ ಮೆರವಣಿಗೆ ಸಂಬಂಧ ಗಲಾಟೆ ಪ್ರಕರಣ :ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿ – ಡಿಸಿ ಆದೇಶ

Date:

Shivamogga Police ಶಿವಮೊಗ್ಗದಲ್ಲಿ ಈದ್ ಮಿಲಾದ್ ಪ್ರಯುಕ್ತ ನಡೆದ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಗಿಗುಡ್ಡ ಪ್ರದೇಶದಲ್ಲಿ 144 ಸೆಕ್ಷನ್‌ ಜಾರಿ ಮಾಡಲಾಗಿದೆ.

ಶಿವಮೊಗ್ಗದ ಶಾಂತಿನಗರದ ರಾಗಿಗುಡ್ಡ ಪ್ರದೇಶದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಸ್ಥಳಕ್ಕೆ ರ್ಯಾಪಿಡ್ ಆ್ಯಕ್ಷನ್ ಫೋರ್ಸ್ ಭೇಟಿ ನೀಡಿ ಗುಂಪನ್ನು ಚದುರಿಸಿ ಪರಿಸ್ಥಿತಿ ಹತೋಟಿಗೆ ತೆಗೆದುಕೊಂಡಿದೆ. ಸ್ಥಳಕ್ಕೆ ಎಸ್ಪಿ ಜಿ.ಕೆ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈದ್ ಮಿಲಾದ್ ಆಚರಣೆ ವೇಳೆ ಕಲ್ಲೆಸೆತ ಉಂಟಾದ ಹಿನ್ನಲೆ ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ ಅವರು ಶಿವಮೊಗ್ಗದ ಶಾಂತಿನಗರದ ರಾಗಿಗುಡ್ಡ ಪ್ರದೇಶದಲ್ಲಿ 144 ಸೆಕ್ಷನ್‌ ಜಾರಿಗೆ ಆದೇಶಿಸಿದ್ದಾರೆ.

Shivamogga Police ಶಿವಮೊಗ್ಗದ ರಾಗಿಗುಡ್-ಶಾಂತಿನಗರದಲ್ಲಿ ಟಿಪ್ಪು ಸುಲ್ತಾನ್ ಕಟೌಟ್ ಅಳವಡಿಸಲಾಗಿತ್ತು. ಟಿಪ್ಪುವಿನ ಕಟೌಟ್​ನ ಕೆಳಭಾಗದಲ್ಲಿ ಆಕ್ಷೇಪಾರ್ಹ ಸಂಗತಿ ಇದ್ದ ಹಿನ್ನಲೆಯಲ್ಲಿ ಪೊಲೀಸರು ಬಿಳಿ ಬಣ್ಣವನ್ನು ಬಳಿದಿದ್ದರು.

ಇದರಿಂದ ರೊಚ್ಚಿಗೆದ್ದ ರಾಗಿಗುಡ್ಡದ ಶಾಂತಿನಗರ ನಿವಾಸಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಇನ್ನು ಗಲಾಟೆ ವೇಳೆ ಸಿಲುಕಿದ್ದ 7 ಜನರನ್ನು ಪೊಲೀಸರು ರಕ್ಷಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...