Thursday, June 18, 2026
Thursday, June 18, 2026

VISL Bhadravati ಭದ್ರಾವತಿ ವಿಐಎಸ್ಎಲ್ ನಿಂದ ಗಾಂಧೀ ಜಯಂತಿ ಆಚರಣೆ

Date:

VISL Bhadravati ವಿಐಎಸ್ ಎಲ್ ವತಿಯಿಂದ ಗಾಂಧಿ ಜಯಂತಿಯನ್ನು ಅಕ್ಟೋಬರ್ 02 ರಂದು ವಿಐಎಸ್‌ಎಲ್ ಭದ್ರ‍್ರಾ ಅತಿಥಿಗೃಹ, ನ್ಯೂಟೌನ್, ಭದ್ರಾವತಿಯಲ್ಲಿ ಆಚರಿಸಲಾಯಿತು.

ಶ್ರೀ ಕೆ.ಎಸ್. ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ) ಮತ್ತು ಪ್ರಭಾರಿ ಕಾರ್ಯಪಾಲಕ ನಿರ್ದೇಶಕರು, ಶ್ರೀ ಎಲ್. ಪ್ರವೀಣ್ ಕುಮಾರ್, ಮಹಾಪ್ರಬಂಧಕರು (ಸಿಬ್ಬಂದಿ ಮತ್ತು ಸಾರ್ವಜನಿಕ ಸಂಪರ್ಕ), ಶ್ರೀ ಜೆ. ಜಗದೀಶ್, ಅಧ್ಯಕ್ಷರು, ವಿಐಎಸ್‌ಎಲ್ ಕಾರ್ಮಿಕರ ಸಂಘ, ಶ್ರೀ ಅಜಯ್ ಸೋಂಕುವರ್, ಪ್ರಧಾನ ಕಾರ್ಯದರ್ಶಿ, ವಿಐಎಸ್‌ಎಲ್ ಅಧಿಕಾರಿಗಳ ಸಂಘ ಮತ್ತು ಶ್ರೀಮತಿ ಶೋಭ ಶಿವಶಂಕರನ್, ಇಸ್ಪಾತ್ ಮಹಿಳಾ ಸಮಾಜದ ಪ್ರತಿನಿಧಿ ಇವರುಗಳು ಜ್ಯೋತಿಯನ್ನು ಬೆಳಗಿಸಿ, ಗಾಂಧಿಜಿ ಭಾವಚಿತ್ರಕ್ಕೆ ಪುಷ್ಫ ನಮನ ಸಲ್ಲಿಸಿದರು.

VISL Bhadravati ಈ ಸಂದರ್ಭದಲ್ಲಿ ಧಾರ್ಮಿಕ ಗ್ರಂಥಗಳಿಂದ ಆಯ್ದ ಭಾಗಗಳ ಪಠಣವನ್ನು ಮಾಡಲಾಯಿತು. ಭಗವದ್ಗೀತೆಯನ್ನು ಕುಮಾರಿ ಅಧಿತ್ರಿ ರಾಘವೇಂದ್ರ, ಬೈಬಲ್ ಅನ್ನು ಶ್ರೀಮತಿ ನೋರಾ ಮೆನೆಜಸ್ ಮತ್ತು ಕುರಾನ್ ಅನ್ನು ಶ್ರೀ ಹಫೀಝ್-ಉರ್-ರೆಹಮಾನ್ ಪಠಿಸಿದರು.

ಶ್ರೀ ಉನ್ನಿಕೃಷ್ಣನ್, ಹಿರಿಯ ಪ್ರಬಂಧಕರು (ಹಣಕಾಸು) ರಘುಪತಿರಾಘವ ಭಜನೆಯನ್ನು ಸುಶ್ರಾವ್ಯವಾಗಿ ಹಾಡಿ ಎಲ್ಲರೂ ಸಹ ಭಜನೆಯಲ್ಲಿ ಪಾಲ್ಗೊಳ್ಳುವಂತೆ ಮಾಡಿದರು.

ಈ ಸಂದರ್ಭದಲ್ಲಿ ಸ್ವಚ್ಛತಾ ಪ್ರತಿಜ್ಞೆಯನ್ನು ತೆಗೆದುಕೊಳ್ಳಲಾಯಿತು.

ವಿಐಎಸ್‌ಎಲ್ ಉದ್ಯೋಗಿಗಳು, ವಿಐಎಸ್‌ಎಲ್ ಕಾರ್ಮಿಕ ಸಂಘ ಮತ್ತು ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರುಗಳು, ಗುತ್ತಿಗೆ ಕಾರ್ಮಿಕರು, ಇಸ್ಪಾತ್ ಮಹಿಳಾ ಸಮಾಜದ ಸದಸ್ಯರು ಮತ್ತು ಪತ್ರಿಕಾ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಶ್ರೀ ಎಲ್. ಪ್ರವೀಣ್ ಕುಮಾರ್, ಮಹಾಪ್ರಬಂಧಕರು (ಸಾರ್ವಜನಿಕ ಸಂಪರ್ಕ) ಸ್ವಾಗತಿಸಿ, ನಿರೂಪಿಸಿದರು ಮತ್ತು ಶ್ರೀ ಕೆ.ಎಸ್. ರಾಘವೇಂದ್ರ, ವಿಐಎಸ್‌ಎಲ್ ಅತಿಥಿಗೃಹದ ಸೂಪರ್‌ವೈಸರ್ ರವರು ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮವನ್ನು ವಿಐಎಸ್‌ಎಲ್ ನ ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಅತಿಥಿಗೃಹ ಆಯೋಜಿಸಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...