Tuesday, March 24, 2026
Tuesday, March 24, 2026

Rovers Club Shivamogga ಗಾಂಧೀಜಿ ಮತ್ತು ಶಾಸ್ತ್ರೀಜಿ ಅವರ ಪುಸ್ತಕಗಳ ಅಧ್ಯಯನ ಮಾಡಬೇಕು-ಕೆ.ಸಿ.ಮಲ್ಲಿಕಾರ್ಜುನಪ್ಪ

Date:

Rovers Club Shivamogga ಇಂದಿನ ಯುವ ಪೀಳಿಗೆಯು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಸ್ತಕಗಳ ಅಧ್ಯಯನ ಮಾಡಬೇಕು. ಅವರ ಜೀವನ ಚರಿತ್ರೆಯಿಂದ ಸ್ಫೂರ್ತಿ ಪಡೆದು ಉತ್ತಮ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ರೋವರ್ಸ್ ಕ್ಲಬ್ ಅಧ್ಯಕ್ಷ ಕೆ.ಸಿ.ಮಲ್ಲಿಕಾರ್ಜುನಪ್ಪ ಹೇಳಿದರು.

ಶಿವಮೊಗ್ಗ ನಗರದ ರೋವರ್ಸ್ ಕ್ಲಬ್ ಕಚೇರಿಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಅಹಿಂಸೆ ತತ್ವವನ್ನು ಮಹಾತ್ಮ ಗಾಂಧೀಜಿ ಪ್ರತಿಪಾದಿಸಿ ಜೀವನುದ್ದಕ್ಕೂ ಪಾಲಿಸಿಕೊಂಡು ಬಂದರು. ಸತ್ಯ ಮಾರ್ಗದಲ್ಲಿ ಜೀವನ ನಡೆಸಬೇಕು ಎಂದು ತಿಳಿಸಿದರು.

Rovers Club Shivamogga ಮಹಾತ್ಮ ಗಾಂಧೀಜಿ ಜೀವನವು ವಿಶ್ವದ ಸಾವಿರಾರು ಜನರಿಗೆ ಪ್ರೇರಣೆಯನ್ನು ಒದಗಿಸಿದ್ದು, ಲಕ್ಷಾಂತರ ಜನರು ಗಾಂಧೀಜಿ ಜೀವನ ಚರಿತ್ರೆಯಿಂದ ಪ್ರಭಾವಿತರಾಗಿದ್ದಾರೆ. ಯುವ ವಿದ್ಯಾರ್ಥಿಗಳು ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳುವಲ್ಲಿ ಗಾಂಧೀಜಿ ಅವರ ಜೀವನವು ಪರಿಣಾಮ ಬೀರುತ್ತದೆ ಎಂದರು.

ರೋವರ್ಸ್ ಕ್ಲಬ್ ಕಾರ್ಯದರ್ಶಿ ಆ.ಮ.ಪ್ರಕಾಶ್, ಖಜಾಂಚಿ ಎ.ಎಚ್.ಸುನೀಲ್, ನಿರ್ದೇಶಕರಾದ ಜಿ.ವಿಜಯ್‌ಕುಮಾರ್, ಚಿನ್ನಪ್ಪ, ವಿನಾಯಕ, ಸಂದೀಪ್ ಕುಮಾರ್ ಬಲ್ಲಾಳ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...