Saturday, October 10, 2026
Saturday, October 10, 2026

Department of Skill Development ಶಿವಮೊಗ್ಗದಲ್ಲಿ ಸಿಡಾಕ್ ವತಿಯಿಂದ ಉಚಿತ ಉದ್ಯಮ ತರಬೇತಿ ಕಾರ್ಯಕ್ರಮ

Date:

Department of Skill Development ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಸಿಡಾಕ್(ಕರ್ನಾಟಕ ಉದ್ಯಮಶೀಲತಾಭಿವೃದ್ದಿ, ಧಾರವಾಡ) ಸಂಸ್ಥೆಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಚಿಸುವ ಮಹಿಳಾ ಉದ್ಯಮಾಕಾಂಕ್ಷಿಗಳಿಗೆ ಅ.11 ರಿಂದ 20 ರವರೆಗೆ ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಮೊಗ್ಗ ಇಲ್ಲಿ ಉಚಿತ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.

Department of Skill Development 18 ರಿಂದ 55 ವರ್ಷದೊಳಗಿನ 10 ನೇ ತರಗತಿ ಪಾಸಾದ ಮಹಿಳಾ ಉದ್ಯಮಾಕಾಂಕ್ಷಿಗಳು ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, 3ನೇ ಮಹಡಿ, ಶಿವಪ್ಪನಾಯಕ ಕಾಂಪ್ಲೆಕ್ಸ್, ನೆಹರು ರಸ್ತೆ, ಶಿವಮೊಗ್ಗ ಹಾಗೂ ಸಿಡಾಕ್ ತರಬೇತು ದಾರ ಅವಿನಾಶ ಎ, ಮೊ.ಸಂ: 9164811887 ನ್ನು ಸಂಪರ್ಕಿಸಬಹುದು. ಅರ್ಜಿಯೊಂದಿಗೆ 2 ಪಾಸ್‍ಪೋರ್ಟ್ ಅಳತೆಯ ಫೋಟೊ ಹಾಗೂ ಆಧಾರ್ ಕಾರ್ಡ್ ಪ್ರತಿಯನ್ನು ಸಲ್ಲಿಸಬೇಕು.

ತರಬೇತಿ ವಸತಿರಹಿತವಾಗಿದ್ದು ಊಟೋಪಚಾರ ಒದಗಿಸಲಾಗುವುದು ಎಂದು ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...