Saturday, December 6, 2025
Saturday, December 6, 2025

CM Siddharamaih ಎಲ್ಲಾ ಜಾತಿಗಳೂ ಮುಖ್ಯವಾಹಿನಿಗೆ ಬರದೇ ಸಮಸಮಾಜ ನಿರ್ಮಾಣ ಸಾಧ್ಯವಿಲ್ಲ- ಸಿದ್ಧರಾಮಯ್ಯ

Date:

CM Siddharamaih ಬೆಳಗಾವಿಯ ನೆಹರೂ ನಗರದ ಜಿಲ್ಲಾ ಕ್ರೀಡಾ ಮೈದಾನದಲ್ಲಿ ಇಂದು ನಡೆದ ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ನ 9ನೇ ರಾಷ್ಟ್ರೀಯ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತನಾಡಿದರು.

ಸ್ವಾತಂತ್ರ್ಯ ಬಂದು 76 ವರ್ಷಗಳಾದರೂ ಎಲ್ಲರಿಗೂ ಸಾಮಾಜಿಕ ನ್ಯಾಯ ದೊರೆತಿಲ್ಲ. ಇನ್ನೂ ಕೂಡ ಅನೇಕ ಜಾತಿಗಳು ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವಾಗಿಲ್ಲ. ದೇಶದಲ್ಲಿ ಹಾಗೂ ಕರ್ನಾಟಕದಲ್ಲಿ ಈಗಲೂ ಇಂಥ ಸ್ಥಿತಿ ಇದೆ, ಎಲ್ಲಾ ಜಾತಿಗಳು ಮುಖ್ಯವಾಹಿನಿಗೆ ಬರದೇ ಸಮಸಮಾಜದ ನಿರ್ಮಾಣ ಸಾಧ್ಯವಿಲ್ಲ ಎಂದರು.

ಜಾತಿ ವ್ಯವಸ್ಥೆಯ ಸಮಾಜದಲ್ಲಿ ವಾಸ್ತವಿಕ ಅಂಶಗಳನ್ನು ಅರ್ಥಮಾಡಿಕೊಂಡು ಅದರಂತೆ ನಡೆಯಬೇಕಾದುದ್ದು ನಮ್ಮ ಕರ್ತವ್ಯ. ಈ ದೃಷ್ಟಿಯಿಂದ ಇಂಥ ಸಂಘಟನೆ, ಸಮಾವೇಶಗಳು ಅತ್ಯಂತ ಅವಶ್ಯಕ. ಅಧಿಕಾರ ವಿಕೇಂದ್ರೀರಣವಾಗಿ, ಗ್ರಾಮ ಸ್ವರಾಜ್ಯವಾಗಬೇಕು ಎಂದು ಗಾಂಧಿಜೀ ಹೇಳಿದ್ದರು.

CM Siddharamaih ಕುರುಬ ಸಮಾಜ ಸಂಘಟಿತವಾಗಿ ಉತ್ತಮ ಕೆಲಸ ಮಾಡಿದೆ. ರಾಜಕೀಯ ಶಕ್ತಿ ಬೆಳೆದು ಎಲ್ಲರಿಗೂ ಅಧಿಕಾರದಲ್ಲಿ ಪಾಲು ಸಿಗಬೇಕು. ಯಾವುದೇ ಸಮಾಜದ ಪ್ರಗತಿಗೆ ರಾಜಕೀಯ ಪ್ರಾತಿನಿಧ್ಯ ಅತ್ಯಗತ್ಯ. ನಿಮ್ಮ ಪರವಾಗಿ ಧ್ವನಿ ಎತ್ತುವವರು ಇಲ್ಲದಿದ್ದಾಗ ಆ ಸಮುದಾಯ ಹಿಂದುಳಿಯುತ್ತದೆ. ಸಂಘಟನೆ ಮಾಡಿ, ರಾಜಕೀಯವಾಗಿ ಬೆಳೆಯುವ ಶಕ್ತಿ ಬೆಳೆಸಿಕೊಳ್ಳಬೇಕು ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...