Monday, February 2, 2026
Monday, February 2, 2026

Department of Rural Development and Panchayat Raj 44 ವಿವಿಧ ಸೇವೆಗಳು ಗ್ರಾಮೀಣ ಜನತೆಗೆ ಬಾಪೂಜಿ ಕೇಂದ್ರಗಳಲ್ಲಿ ಲಭ್ಯ- ಸಚಿವ ಪ್ರಿಯಾಂಕ ಖರ್ಗೆ

Date:

Department of Rural Development and Panchayat Raj ರಾಜ್ಯದ ಗ್ರಾಮೀಣ ಭಾಗಗಳ ಜನತೆಗೆ ಹೆಚ್ಚಿನ ಅನುಕೂಲ ಒದಗಿಸುವ ನಿಟ್ಟಿನಲ್ಲಿ ನಾಡಕಚೇರಿಗಳಲ್ಲಿ, ಅಟಲ್ ಜನಸ್ನೇಹಿ ಕೇಂದ್ರಗಳಲ್ಲಿ ಲಭ್ಯವಿದ್ದ 44 ಸರ್ಕಾರಿ ಸೇವೆಗಳು ಇನ್ನು ಮುಂದೆ ಗ್ರಾಮ ಪಂಚಾಯಿತಿಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲೂ ಲಭ್ಯವಾಗಲಿದೆ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಅವರು ತಿಳಿಸಿದ್ದಾರೆ.
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸೇವೆಗಳ ಜೊತೆಯಲ್ಲಿ ಇನ್ನು ಮುಂದೆ ಸಾರ್ವಜನಿಕರು ಕಂದಾಯ, ಕಾರ್ಮಿಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಇಂಧನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗಳ ಸೇವೆಗಳ ಜೊತೆಗೆ ಆದಾಯ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ ಹಾಗೂ ಆಧಾರ್ ಸೇವೆಗಳ ಸೌಲಭ್ಯವನ್ನು ಬಾಪೂಜಿ ಸೇವಾ ಕೇಂದ್ರಗಳಲ್ಲಿ ರಾಜ್ಯದ ಜನ ಪಡೆಯಬಹುದಾಗಿದೆ ಎಂದಿದ್ದಾರೆ.

Department of Rural Development and Panchayat Raj ಬಹುತೇಕ ಸರ್ಕಾರಿ ಸೇವೆಗಳು ಒಂದೇ ಸೂರಿನಡಿ ಲಭ್ಯವಾಗುವುದರಿಂದ ಬೇರೆ ಬೇರೆ ಇಲಾಖೆಗಳ ಸರ್ಕಾರಿ ಕಚೇರಿಗಳಿಗೆ ಹೋಗುವ ಅವಶ್ಯಕತೆ ಕಡಿಮೆಯಾಗಲಿದೆ. ಜನಪರವಾಗಿ ಜನರಿಗೆ ಸುಲಲಿತವಾಗಿ ಸೇವೆಗಳನ್ನು ಒದಗಿಸಲು ನಮ್ಮ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...