Sunday, December 14, 2025
Sunday, December 14, 2025

Government Employees Union ರಾಜ್ಯ ಸರ್ಕಾರಿ ನೌಕರರಿಗೆ ನವೆಂಬರ್ ಅಂತ್ಯದಲ್ಲಿ ಸಿಹಿ ಸುದ್ದಿ-ಎಸ್.ಷಡಕ್ಷರಿ

Date:

Government Employees Union 7ನೇ ವೇತನ ಆಯೋಗದ ವರದಿ ನವೆಂಬರ್ ಅಂತ್ಯಕ್ಕೆ ಸಲ್ಲಿಕೆಯಾಗುವ ಸಾಧ್ಯತೆ ಇದೆ. ಅದನ್ನು ರಾಜ್ಯ ಸರ್ಕಾರ ಜಾರಿ ಮಾಡುವ ಮೂಲಕ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡುತ್ತದೆ ಎನ್ನುವ ವಿಶ್ವಾಸವಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಎಸ್. ಷಡಕ್ಷರಿ ಹೇಳಿದ್ದಾರೆ.

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೇತನ ಆಯೋಗ ಕಾಲವಕಾಶ ಕೇಳಿದರೆ ಆ ಮಾತು ಬೇರೆ. ಆದರೆ, ವೇತನ ಆಯೋ ಗವೇ ಸಂಪೂರ್ಣ ವರದಿ ಸಲ್ಲಿಕೆ ಮಾಡಲು ಮುಂದಾಗಿದೆ. ರಾಜ್ಯ ಸರ್ಕಾರ ಅದನ್ನು ಮತ್ತೆ ವಿಸ್ತರಣೆ ಮಾಡುವುದಿಲ್ಲ ಎನ್ನುವ ವಿಶ್ವಾಸ ನಮ್ಮದು ಎಂದಿದ್ದಾರೆ.

ಸಿ.ಎಂ. ಸಿದ್ದರಾಮಯ್ಯ ನೌಕರರ ಪರ ಇದ್ದಾರೆ. ಈ ಹಿಂದೆ ಅವರೇ ಸಿಎಂ ಆಗಿದ್ದ ವೇಳೆ 6ನೇ ವೇತನ ಆಯೋಗದ ಜಾರಿ, ಶೇ. 30 ಹೆಚ್ಚಳ ಮಾಡಿದ್ದಾರೆ. ಈ ಬಾರಿಯೂ ಮಾಡುತ್ತಾರೆ ಎನ್ನುವುದು ನಮ್ಮ ನಂಬಿಕೆ. ತುಮಕೂರಿ ನಲ್ಲಿ ಇದೇ 27, 28, 29ರಂದು ಸರ್ಕಾರಿ ನೌಕರರ ಕ್ರೀಡಾಕೂಟ ನಡೆಯಲಿದೆ. ಆಗ ಸಿಎಂಗೆ ನೌಕರರ ಪರವಾಗಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಅಂದು ಅವರು ಸಹ ಈಕುರಿತು ಮಾತನಾಡಲಿದ್ದಾರೆ ಎಂದರು.
ವೇತನ ಆಯೋಗದವರು ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದರಿಂದ ನೌಕರರ ವೇತನ ಹೆಚ್ಚಳಕ್ಕೆ ಸಮಸ್ಯೆಯಾಗುವುದಿಲ್ಲವೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, 21.25ಲಕ್ಷ ಕೋಟ ಬಜೆಟ್ ಮಂಡಿ ಸುವ ರಾಜ್ಯ ಸರ್ಕಾರಕ್ಕೆ ಸರ್ಕಾರಿ ನೌಕರರ ವೇತನ ಹೆಚ್ಚಳ ಹೊರೆಯಾಗು ವುದಿಲ್ಲ. ಈಗಾಗಲೇ 17 ರ್ಪಂಟೇಜ್ ನೀಡಿರುವುದರಿಂದ ಆಯೋಗದ ಶಿಫಾರಸಿನಲ್ಲಿ ಇದನ್ನು ಕಡಿತ ಮಾಡಿ ಕೊಡಬೇಕಾಗಿರುವುದರಿಂದ ಹೊರೆಯಾಗುವುದಿಲ್ಲ ಎಂದರು.

Government Employees Union ನಾವು ಶೆಕಡ 48 ಕೇಳಿದ್ದೇವೆ, ಅವರು ಎಷ್ಟು ಕೊಡುತ್ತಾರೆ. ಎನ್ನುವುದನ್ನು ಕಾದು ನೋಡಬೇಕು, ಆಯೋಗ ವರದಿ ಆಧಾರದಲ್ಲಿ ನಿರ್ಧಾರವಾಗುತ್ತದೆ. ಎಂದರು. ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ÷ ಹೇಳಿಕೆ ಅವರಿಗೆ ಬಿಟ್ಟಿ ವಿಷಯ. ಆದರೆ, ನಾನು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷನಾಗಿ ಎಲ್ಲ ವರ್ಗ ದವರನ್ನು ಪ್ರತಿನಿಧಿಸುತ್ತೇನ. ಇಲ್ಲಿ ನಮ್ಮ ಸದಸ್ಯರ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುವ ನನಗೆ ಲಿಂಗಾಯತರಿಗೆ ಅನ್ಯಾಯ ವಾಗಿದೆ ಎನಿಸಿಲ್ಲ ಎಂದರು.

ಈ ಒಂದು ಉತ್ತಮ ಕಾರ್ಯಕ್ಕೆ ಶ್ರಮಿಸುತ್ತಿರುವ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರಿಗೆ ಶಿವಮೊಗ್ಗ ನಗರದ ಉದ್ಯಮಿ ಹಾಗೂ ಸಮಾಜದ ಪ್ರಮುಖರು ಆದ ಕೆ.ಜಿ. ಗಂಗಾಧರ್ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...