Monday, May 4, 2026
Monday, May 4, 2026

Nijasaran Ambigar Choudaiah Development Corporation ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಸೌಲಭ್ಯ ಪ್ರಕಟಣೆ

Date:

Nijasaran Ambigar Choudaiah Development Corporation ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ 2023-24 ನೇ ಸಾಲಿಗೆ ಪ್ರವರ್ಗ-1 ರ 6(ಎ) ಯಿಂದ 6(ಎಕೆ) ವರೆಗೆ ಬರುವ ಬೆಸ್ತ, ಅಂಬಿಗ/ಅಂಬಿ, ಗಂಗಾಮತ, ಕಬ್ಬಲಿಗ, ಕೋಲಿ, ಮೊಗವೀರ ಮತ್ತು ಇದರ ಉಪಜಾತಿಗಳಿಗೆ ಒಳಪಡುವ ಅರ್ಹ ಫಲಾಪೇಕ್ಷಿಗಳಿಂದ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ದಿ: 02-11-2023 ರವರೆಗೆ ಸೇವಾ ಸಿಂಧು ಪೋರ್ಟಲ್, ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಸಲ್ಲಿಸಬಹುದು. ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಕೊನೆಯ ದಿನಾಂಕ ಇರುವುದಿಲ್ಲ.

Nijasaran Ambigar Choudaiah Development Corporation ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ(ಹೊಸತು ಮತ್ತು ನವೀಕರಣ), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಗಳಡಿ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯವಾಗಿದ್ದು, ಅರ್ಜಿದಾರರ ಹೆಸರು, ಆಧಾರ್ ಕಾರ್ಡ್, ಜಾತಿ/ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಖಾತೆಗಳಲ್ಲಿ ಹೊಂದಾಣಿಕೆ ಆಗಿರಬೇಕು. ಹೆಚ್ಚಿನ ಮಾಹಿತಿಯನ್ನು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮ/ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಭಾಗ್ಯ ನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ಪ್ಯಾರಲಲ್ ರಸ್ತೆ, ಗಾಂಧಿನಗರ, ಶಿವಮೊಗ್ಗ ಅಥವಾ ನಿಗಮದ ವೆಬ್‍ಸೈಟ್ http://ambigaradevelopment.karnataka.gov.in ಹಾಗೂ ನಿಗಮದ ಸಹಾಯವಾಣಿ ಸಂಖ್ಯೆ 080-22864099/08182-229634 ಗೆ ಸಂಪರ್ಕಿಸಿ ಪಡೆಯಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...