Saturday, September 26, 2026
Saturday, September 26, 2026

District Physical Education Teachers Association ಕ್ರೀಡೆಯಲ್ಲಿ ಸೋಲುಗೆಲುವು ಸಾಮಾನ್ಯ.ಸಾಮರ್ಥ್ಯ ಪ್ರದರ್ಶನ ಮುಖ್ಯ- ನಾಗರಾಜ್

Date:

District Physical Education Teachers Association ಕ್ರೀಡೆಯಲ್ಲಿ ಕ್ರೀಡಾಪಟುಗಳು ತಮ್ಮ ಸಾಮರ್ಥ್ಯವನ್ನು, ಆತ್ಮಸ್ಥೈರ್ಯ ದಿಂದ ಪ್ರದರ್ಶಿಸುವುದು ಅತ್ಯಂತ ಮುಖ್ಯವಾಗಿರುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ನಾಗರಾಜ್ ಹೇಳಿದರು.

ಶಿವಮೊಗ್ಗ ನಗರದ ನೆಹರೂ ಕ್ರೀಡಾಂಗಣದಲ್ಲಿ ಸಾಕ್ಷರತಾ ಇಲಾಖೆ, ಉಪ ನಿರ್ದೇಶಕರ ಕಚೇರಿ, ಶಿವಮೊಗ್ಗ. ಹಾಗೂ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಶಿವಮೊಗ್ಗ.ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ ಮತ್ತು ಬಾಲಕಿಯರ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯ, ಆದರೆ ತಮ್ಮಲ್ಲಿರುವ ಕ್ರೀಡಾ ಕೌಶಲ್ಯವನ್ನು ಹಾಗೂ ಸಾಮರ್ಥ್ಯವನ್ನು ಪ್ರದರ್ಶಿಸುವುದರಿಂದ ಕ್ರೀಡಾಪ್ರತಿಭೆ ಹೊರ ಹೊಮ್ಮುತ್ತದೆ ಎಂದು ಹೇಳಿದರು.

ಈಗಾಗಲೇ ಹಲವು ವಿಭಾಗ ಮಟ್ಟದಲ್ಲಿ ನೀವುಗಳು ಭಾಗವಹಿಸಿದ್ದೀರಿ ಜಿಲ್ಲೆ, ರಾಜ್ಯ, ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ದಿನಾಂಕ ನಿಗದಿಯಾಗಿದ್ದು, ಮುಂದಿನ ದಿನಗಳಲ್ಲಿ ನೀವುಗಳು ಬಾಗವಹಿಸಿ ರಾಜ್ಯ, ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವಂತಾಗಲಿ ಎಂದರು.

District Physical Education Teachers Association ನಾರಾಯಣ ಹೃದಯಾಲಯದ ಮ್ಯಾನೇಜಿಂಗ್ ಡೈರೆಕ್ಟರ್ ಆದ ಶ್ರೀ ರಾಜಾಸಿಂಗ್ ಮಾತನಾಡಿ,ಕ್ರೀಡೆಯಿಂದ ಶಿಸ್ತು,ಸಂಯಮ ಬೆಳೆಯುವುದು. ಕ್ರೀಡಾ ಮನೋಭಾವದಿಂದ ಕ್ರೀಡೆಯಲ್ಲಿ ಭಾಗವಹಿಸಿ ಎಂದು ಕ್ರೀಡಾಪಟುಗಳಿಗೆ ತಿಳಿಸಿದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಶ್ರೀಮತಿ ಸುಮತಿ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಡಿ. ಬಿ.ರುದ್ರಪ್ಪ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್, ಗಿರೀಶ್,ಎಸ್. ಜಿಲ್ಲಾ ಸಂಘದ ಖಜಾಂಚಿ ಗಿರೀಶ್.ಎಸ್., ಜಿಲ್ಲಾ ಸಂಘದ ಕಾರ್ಯದರ್ಶಿ ಗಿರೀಶ್ ಬಿ. ಎಸ್. ಹಾಗೂ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳಾದ ನಿರಂಜನ್ ಮೂರ್ತಿ ಬಿ. ಹೆಚ್.ಇನ್ನೂ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...