District Sand Stewardship Committee ಜಿಲ್ಲೆಯಲ್ಲಿನ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ ಮಾಡುವವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ನಿಯಮಾನುಸಾರ ದಂಡ ವಿದಿಸುವಂತೆ ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಹಿರಿಯ ಗಣಿ ಮತ್ತು ಭೂವಿಜ್ಞಾನಿ ಸಿ.ಎಸ್.ನವೀನ್ ಅವರಿಗೆ ಸೂಚಿಸಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಟಾಸ್ಕ್ಫೋರ್ಸ್, ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಹಾಗೂ ಜಿಲ್ಲಾ ಕಲ್ಲುಪುಡಿ ಮಾಡುವ ಘಟಕಗಳ ಪರವಾನಿಗೆ ಮತ್ತು ನಿಯಂತ್ರಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಿಸುವವರ ವಿರುದ್ಧ ಕೈಗೊಂಡ ಕಾನೂನು ಕ್ರಮಗಳು ಹಾಗೂ ದಂಡ ವಿಧಿಸಿರುವ ಕುರಿತು ಅಕ್ರಮ ಉಪಖನಿಜ ಗಣ ಗಾರಿಕೆ, ಸಾಗಾಣ ಕೆ, ದಾಸ್ತಾನು ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಅಕ್ರಮ ಮರಳು ಸಾಗಾಣಿಕೆ ಮತ್ತು ನಿಯಂತ್ರಣ ವಿರುದ್ಧ ಕೈಗೊಂಡ ಕ್ರಮ ಆಶಾದಾಯಕವಾಗಿಲ್ಲ. ಮರಳು ನಿಯಂತ್ರಣ ಕಾರ್ಯಕ್ಕೆ ನಿಯೋಜಿತರಾದ ಅಧಿಕಾರಿ-ಸಿಬ್ಬಂಧಿಗಳು ಕೂಡಲೇ ಪ್ರವೃತ್ತರಾಗಿ ನಿರೀಕ್ಷಿತ ಪ್ರಗತಿ ಸಾಧಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.
District Sand Stewardship Committee ಗಣಿಗುತ್ತಿಗೆ ಪೂರ್ಣಗೊಂಡಿರುವ ತೀರ್ಥಹಳ್ಳಿ ತಾಲೂಕು ಮೇಲಿನ ಕುರುವಳ್ಳಿ ಪ್ರದೇಶವನ್ನು ವಿಲೇಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಸದರಿ ಸ್ಥಳದಲ್ಲಿ ನಡೆಯುತ್ತಿರುವ ಅನಧಿಕೃತ ಗಣ ಗಾರಿಕೆ ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಸಾಗರ ಮತ್ತು ಸೊರಬ ತಾಲೂಕಿನ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಲ್ಯಾಟರೈಟ್ ಗಣ ಗಾರಿಕೆಗೆ ಸಂಬಂಧಿಸಿದಂತೆ ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಅಕ್ರಮದಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಅದಕ್ಕಾಗಿ ಬಳಸುತ್ತಿರುವ ವಾಹನಗಳನ್ನು ಜಪ್ತಿ ಮಾಡುವಂತೆೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಹೊಸ ಮರಳು ನೀತಿ-೨೦೨೦ರನ್ವಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಮರಳು ಎತ್ತುವಳಿಗೆ ಅನುಮತಿ ನೀಡಿರುವ ಪ್ರದೇಶಗಳಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಸಿ, ಅಗತ್ಯ ಕ್ರಮ ಕೈಗೊಂಡು, ಮುಂದಿನ ಒಂದು ವಾರದೊಳಗಾಗಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.
ಅನಧಿಕೃತವಾಗಿ ಸಂಗ್ರಹಿಸಲಾಗಿರುವ ಹಾಗೂ ವಶಪಡಿಸಿಕೊಳ್ಳಲಾಗಿರುವ ಮರಳನ್ನು ಈಗಾಗಲೇ ದರ ನಿಗಧಿಪಡಿಸಿದ ನಿಯಮಾನುಸಾರ ಸಂಬಂಧಪಟ್ಟ ಇಲಾಖೆಗಳು ವಿಲೇವಾರಿ ಮಾಡಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ ಅವರು, ಅನಧಿಕೃತ ಮರಳು ಗಣ ಗಾರಿಕೆ ಹಾಗೂ ಸಾಗಾಣ ಕೆಯನ್ನು ತಡೆಗಟ್ಟುವ ಕುರಿತು ತಾಲೂಕು ಮರಳು ಉಸ್ತುವಾರಿ ಸಮಿತಿ ಸಭೆಗಳನ್ನು ನಿಯಮಿತವಾಗಿ ಆಯೋಜಿಸುವ ಹಾಗೂ ಅಕ್ರಮ ಮರಳು ಗಣ ಗಾರಿಕೆ ನಿಯಂತ್ರಿಸಲು ನಿಯೋಜಿತ ಅಧಿಕಾರಿಗಳು ಕ್ರಮ ವಹಿಸುವಂತೆ ಅವರು ಸೂಚಿಸಿದರು.
ಇದೇ ಸಂದರ್ಭದಲ್ಲಿ ಕಲ್ಲುಪುಡಿ ಮಾಡುವ ಘಟಕಗಳ ನಿಯಂತ್ರಣ ಅಧಿನಿಯಮದನ್ವಯ ಸಭೆಯಲ್ಲಿ ಪ್ರಸ್ತಾಪಿಸಿರುವ ೦೪ ಜಲ್ಲಿ ಕ್ರಷರ್ ಘಟಕಗಳ ಅವಧಿಯನ್ನು ಮುಂದಿನ 20 ವರ್ಷಗಳ ಅವಧಿಗೆ ವಿಸ್ತರಿಸಲು ಅನುಮೋದನೆ ನೀಡಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಅರಣ್ಯಾಧಿಕಾರಿ ಶಿವಶಂಕರ್, ಹಿರಿಯ ಭೂವಿಜ್ಞಾನಿ ಸಿ.ಎಸ್.ನವೀನ್ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.