Sunday, December 14, 2025
Sunday, December 14, 2025

DC Shivamogga ಮೀಸಲ್ಸ್ ರುಬೆಲ್ಲಾ ರೋಗದ ನಿರ್ಮೂಲನೆಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಿ- ಡಾ.ಆರ್.ಸೆಲ್ವಮಣಿ

Date:

DC Shivamogga ಲಸಿಕಾ ವಂಚಿತ ಮಕ್ಕಳು ಮತ್ತು ಗರ್ಭಿಣಿಯರನ್ನು ಗುರುತಿಸಿ ಲಸಿಕೆ ಹಾಕಬೇಕು. ಹಾಗೂ ಮೀಸಲ್ಸ್ ರುಬೆಲ್ಲಾ ರೋಗವನ್ನು ನಿರ್ಮೂಲನೆ ಮಾಡಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ..ಸೆಲ್ವಮಣಿ. ಆರ್ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ 3ನೇ ಸುತ್ತಿನ ಮಿಷನ್ ಇಂದ್ರಧನುಷ್ 5.0(ಐಎಂಐ 5.0) ಕುರಿತಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಲಸಿಕೆಗಳಿಂದ ತಡೆಗಟ್ಟಬಹುದಾದ ಮಾರಕ ರೋಗಗಳ ವಿರುದ್ದ ಮಕ್ಕಳನ್ನು ರಕ್ಷಿಸಲು ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ಅನೇಕ ಲಸಿಕೆಗಳನ್ನು ನೀಡಲಾಗುತ್ತಿದೆ. ಈ ಲಸಿಕೆಗಳನ್ನು ಕಾಲ ಕಾಲಕ್ಕೆ ಪಡೆಯದೇ ವಂಚಿತರಾದ 0 ಯಿಂದ 5 ವರ್ಷದೊಳಗಿನ ಮಕ್ಕಳನ್ನು ಹಾಗೂ ಗರ್ಭಿಣಿ ಸ್ತ್ರೀಯರನ್ನು ಗುರಿಯಾಗಿಸಿಕೊಂಡು ಅವರಿಗೆ ಬಿಟ್ಟು ಹೋದ ಲಸಿಕೆಗಳನ್ನು ಪೂರ್ಣಗೊಳಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶ.

ಅ.9 ರಿಂದ 14 ರವರೆಗೆ ನಡೆಯುವ 3ನೇ ಸುತ್ತಿನ ಸಾರ್ವತ್ರಿಕ ಲಸಿಕಾರಣದಲ್ಲಿ ಶೇ.100 ಪ್ರಗತಿ ಸಾಧಿಸಬೇಕು. ಅದಕ್ಕೆ ಅಗತ್ಯವಾದ ಮೈಕ್ರೋಪ್ಲಾನ್ ಸಿದ್ದಪಡಿಸಿ, ಐಇಸಿ ಚಟುವಟಿಕೆಗಳನ್ನು ಕೈಗೊಳ್ಳಬೇಕು. ನಗರ ಪ್ರದೇಶದಲ್ಲಿ ವಿಶೇಷವಾಗಿ ಸ್ಲಂಗಳು, ವಲಸಿಗರು ವಾಸಿಸುವ ಸ್ಥಳಗಳು, ಪೆರಿ ಅರ್ಬನ್ ಪ್ರದೇಶಗಳನ್ನು ಗುರುತಿಸಿ ಅಲ್ಲಿಯ ಮಕ್ಕಳು ಮತ್ತು ಗರ್ಭಿಣಿಯರಿಗೆ ಲಸಿಕೆ ಹಾಕಬೇಕು.

DC Shivamogga ನಗರ ಸ್ಥಳೀಯ ಸಂಸ್ಥೆಗಳೊಂದಿಗೆ ಸಭೆ ನಡೆಸಿ ಅವರ ಸಹಕಾರದೊಂದಿಗೆ ಲಸಿಕಾಕರಣವನ್ನು ಯಶಸ್ವಿಗೊಳಿಸಬೇಕು. ಶಾಲೆಗಳಲ್ಲಿ ಪ್ರಾರ್ಥನೆ ವೇಳೆ ಲಸಿಕೆಗಳ ಕುರಿತು ಮಾಹಿತಿ ನೀಡಬೇಕು. ಹಾಗೂ ಬಿಟ್ಟು ಹೋದ ಮಕ್ಕಳಿಗೆ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯು ಅಂಗನವಾಡಿ ಮಕ್ಕಳ ವಿವರ ನೀಡುವುದರೊಂದಿಗೆ ಬಿಟ್ಟು ಹೋದ ಮಕ್ಕಳಿಗೆ ಲಸಿಕೆ ಹಾಕಿಸಬೇಕು.
ಮೀಸಲ್ಸ್-ರುಬೆಲ್ಲಾ(ಎಂಆರ್) ರೋಗವನ್ನು ಪೋಲಿಯೋ ರೋಗದಂತೆ ನಿರ್ಮೂಲನೆ ಮಾಡಲು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು. ಈ ರೋಗದ ವಿರುದ್ದ ಲಸಿಕೆ ಹಾಕಿಸಿಕೊಳ್ಳಲು ಉತ್ತಮ ರೀತಿಯಲ್ಲಿ ಪ್ರಚಾರ ಕಾರ್ಯ ಕೈಗೊಳ್ಳಬೇಕು. ಎಲ್ಲಾ ತಾಲ್ಲೂಕು ವೈದ್ಯಾಧಿಕಾರಿಗಳು ಎಂಆರ್ ಮತ್ತು ಸಾರ್ವತ್ರಿಕ ಲಸಿಕಾ ಗುರಿಯನ್ನು ಸಾಧಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಡಬ್ಲ್ಯುಹೆಚ್‍ಓ ಕನ್ಸಲ್ಟೆಂಟ್ ಡಾ.ಅನಂತೇಶ್ ಮಾತನಾಡಿ, ಜಿಲ್ಲೆಯಲ್ಲಿ ಎಂಆರ್ ಮೊದಲ ಮತ್ತು ಎರಡನೇ ಡೋಸ್ ಲಸಿಕೆಯಲ್ಲಿ ಜಿಲ್ಲೆ ಶೇ.95 ಪ್ರಗತಿ ಸಾಧಿಸಿದೆ. ಹೊಸನಗರ, ಸೊರಬ, ಸಾಗರ ಮತ್ತು ಶಿಕಾರಿಪುರ ಇನ್ನೂ ಸ್ವಲ್ಪ ಪ್ರಗತಿ ಸಾಧಿಸಬೇಕಿದೆ. ಲಸಿಕಾಕರಣ ಕಾರ್ಯಕ್ರಮಗಳಿಗೆ ಅಂತರ ಇಲಾಖೆಗಳ ಸಹಕಾರ ಮತ್ತು ಐಇಸಿ ಚಟುವಟಿಕೆಗಳು ಪರಿಣಾಮಕಾರಿಯಾಗಬೇಕು. ಜ್ವರ ಮತ್ತು ದದ್ದು ಕಂಡುಬಂದಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ವಿಶೇಷವಾಗಿ ಗರ್ಭಿಣಿಯರಿಗೆ ಈ ಲಕ್ಷಣಗಳು ಕಂಡುಬಂದಲ್ಲಿ ಅಪಾಯ ಹೆಚ್ಚಿರುತ್ತದೆ. ಆದ್ದರಿಂದ ಗ್ರಾಮ ಸಭೆ, ತಾಯಂದಿರ ಸಭೆಗಳಲ್ಲಿ ಈ ಬಗ್ಗೆ ಮಾಹಿತಿ ನೀಡಬೇಕೆಂದರು.

ಆರ್‍ಸಿಹೆಚ್ ಅಧಿಕಾರಿ ಡಾ.ನಾಗರಾಜ್ ಮಾತನಾಡಿ, ಜಿಲ್ಲೆಯಲ್ಲಿ (ಮೀಸಲ್ಸ್ ರುಬೆಲ್ಲಾ)ಎಂಆರ್-1 ಮತ್ತು ಎಂಆರ್-2 ಲಸಿಕಾಕರಣ ಶೇ.95 ಪ್ರಗತಿಯಾಗಿದೆ. ಎರಡನೇ ಸುತ್ತಿನ ಇಂದ್ರ ಧನುಷ್ ಕಾರ್ಯಕ್ರಮದಲ್ಲಿ 0 ಯಿಂದ 1 ವರ್ಷದ ಮಕ್ಕಳ ಲಸಿಕಾ ಪ್ರಗತಿ ಶೇ.94.63, 1 ವರ್ಷ ಮೇಲ್ಪಟ್ಟ ಮಕ್ಕಳ ಶೇ. 87.93, 0 ಯಿಂದ 5 ವರ್ಷದ ಮಕ್ಕಳ ಲಸಿಕೆಯಲ್ಲಿ ಶೇ.93.23, ಗರ್ಭಿಣಿ ಸ್ತ್ರೀಯರ ಲಸಿಕೆ ಶೇ.99.46 ಆಗಿದೆ ಮೂರನೇ ಸುತ್ತಿನ ಲಸಿಕಾಕರಣ ಮೈಕ್ರೊಪ್ಲಾನ್ ಸಿದ್ದವಾಗಿದೆ. ಲಸಿಕಾ ವಂಚಿತರನ್ನು ಗುರುತಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಹಯೋಗದಲ್ಲಿ ಜಂಟಿ ಸರ್ವೇ ಆಗುತ್ತಿದೆ. ಹೈರಿಸ್ಕ್ ಏರಿಯಾಗಳಾದ ಸ್ಲಂ, ವಲಸಿಗರ ವಾಸಸ್ಥಳ, ನಗರ ಸಮೀಪ ಪ್ರದೇಶಗಳು, ಇನ್ನಿತರೆ ಸ್ಥಳಗಳಲ್ಲಿ ಸರ್ವೇ ಕಾರ್ಯ ನಡೆಯುತ್ತಿದೆ. ನಗರ ಸ್ಥಳೀಯ ಸಂಸ್ಥೆಗಳು ಟಾಂಟಾಂ, ಜಿಂಗಲ್ಸ್ ಮೂಲಕ ಲಸಿಕಾಕರಣದ ಕುರಿತು ಹೆಚ್ಚಿನ ಪ್ರಚಾರ ನಿಡಬೇಕು. ಇತರೆ ಇಲಾಖೆಗಳು ಸಹ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕೆಂದರು.

ಸಭೆಯಲ್ಲಿ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮ ಅನುಷ್ಟಾನ ಅಧಿಕಾರಿಗಳು, ತಾಲ್ಲೂಕು ವೈದ್ಯಾಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...