District Organization of Bharat Scouts and Guides ಜಗತ್ತಿಗೆ ಶಾಂತಿ, ಸಹೋದರತೆ ಹಾಗೂ ಸೌಹಾರ್ದ ಭಾವನೆ ಮೂಡಿ ಸುವ ಜತೆಗೆ ಉತ್ತಮ ಪ್ರಜೆಗಳ ನಿರ್ಮಾಣ ಮಾಡುವ ಮಹತ್ವದ ಕಾರ್ಯವನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಮಾಡುತ್ತಿದೆ ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಹೇಳಿದರು.
ನಗರದ ಸ್ಕೌಟ್ಸ್ ಭವನದಲ್ಲಿ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ವತಿಯಿಂದ ಏರ್ಪಡಿಸಿದ್ದ ಚಿಕ್ಕಮಗಳೂರು ಜಿಲ್ಲೆಯ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ಕಾರ್ಯಾಗಾರಕ್ಕೆ ಗುರುವಾರ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ಸ್ಕೌಟ್ಸ್ ಮತ್ತು ಗೈಡ್ಸ್ನಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ಉತ್ತಮ ಪ್ರಜೆಗಳಾಗುವ ಜತೆಗೆ ಆದರ್ಶ ವ್ಯಕ್ತಿಗಳಾಗಿ ಬದುಕಬೇಕು. ಸ್ಕೌಟ್ಸ್ ಮತ್ತು ಗೈಡ್ಸ್ನ ಶಿಕ್ಷಕರು ಸೇವಾ ಮನೋಭಾವದಿಂದ ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.
ಮಕ್ಕಳಿಗೆ ವಿದ್ಯೆ ಜೊತೆಗೆ ಬೌದ್ಧಿಕ ಜ್ಞಾನ ಅಗತ್ಯ. ಶಿಸ್ತು ಜೀವನ ಮೌಲ್ಯವನ್ನು ಸಮಂಜಸವಾಗಿ ತಿಳಿಸಿದರೆ ಮಗು ಭವಿಷ್ಯದಲ್ಲಿ ಉತ್ತಮ ನಾಗರೀಕನಾಗುತ್ತಾನೆ. ಆ ನಿಟ್ಟಿನಲ್ಲಿ ಸ್ಥಾಪಿತವಾದ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಪ್ರಸ್ತುತ ಸಂಸ್ಕೃತಿ ಬಿಂಬಿಸುವ ಹಲವು ಕಾರ್ಯಕ್ರಮವನ್ನು ಏರ್ಪಡಿಸಿ ಶಿಕ್ಷಕರು ಹಾಗೂ ಶಾಲಾ ಮಕ್ಕಳಿಗೆ ತರಬೇತಿ ನೀಡ ಲಾಗುತ್ತಿದೆ ಎಂದು ಹೇಳಿದರು.
ರಾಷ್ಟ್ರಪ್ರೇಮ ಮೂಡಿಸುವ ಸಲುವಾಗಿ ಹಲವಾರು ಕಾರ್ಯಕ್ರಮಗಳಿಗೆ ಹೆಚ್ಚು ಒತ್ತು ನೀಡಲಾಗಿದೆ. ಜೊತೆಗೆ ಸಸಿಗಳನ್ನು ನೆಡುವುದು, ಪೋಷಿಸುವುದು, ಬೀಜದುಂಡೆಗಳನ್ನು ತಯಾರಿಸುವುದು ಮತ್ತು ಸ್ವಧರ್ಮವನ್ನು ಗೌರವಿ ಸಿದಂತೆ ಇತರೆ ಧರ್ಮವನ್ನು ಗೌರವಿಸುವ ಪದ್ಧತಿಯನ್ನು ತರಬೇತಿ ಕಾರ್ಯಾಗಾರದಲ್ಲಿ ಅಭ್ಯಾಸಿಸಲಾಗುತ್ತಿದೆ ಎಂದರು.
District Organization of Bharat Scouts and Guides ಇಂದಿನ ಯುವಪೀಳಿಗೆಯ ಮಕ್ಕಳು ಆನ್‌ಲೈನ್ ಆಟಗಳತ್ತ ಹೆಚ್ಚು ಆಕರ್ಷಿತರಾಗುತ್ತಿದ್ದು ಇವುಗಳಿಂದ ಹೊರತರುವ ನಿಟ್ಟಿನಲ್ಲಿ ಶಿಕ್ಷಕರು ಪ್ರಯತ್ನಿಸಬೇಕು. ಸ್ಕೌಟ್ಸ್ & ಗೈಡ್ಸ್ ತರಬೇತಿ ಪಾಲ್ಗೊಳ್ಳುವಿಕೆ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಿದರೆ ಸ್ವಬಲದ ಮೇಲೆ ಪ್ರತಿಯೊಂದು ಕೆಲಸವನ್ನು ನಿಭಾಯಿಸಿಕೊಳ್ಳುವರು. ಇದರೊಂದಿಗೆ ಸಂಸ್ಥೆ ಬಡತನ ನಿರ್ಮೂಲನೆ ಹಾಗೂ ಗುಣಮಟ್ಟ ಶಿಕ್ಷಣ ಆಧಾರದಲ್ಲಿ ಮೇಲೆ ಶಿಕ್ಷಕರಿಗೆ ತರಬೇತಿ ನೀಡಲಾಗುತ್ತಿದೆ ಎಂದರು.
ಮುಂದಿನ ದಿನಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಎಲ್‌ಕೆಜಿ, ಯುಕೆಜಿಗಳಲ್ಲೂ ಬರ‍್ಸ್ ಮತ್ತು ಬನ್ನಿಸ್ ತರಬೇತಿ ಪ್ರಾರಂಭಿಸುವ ಮೂಲಕ ಬಾಲ್ಯದಿಂದಲೇ ಜೀವನದ ಕ್ರಮ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಲಾಗುವುದು. ಆ ನಿಟ್ಟಿನಲ್ಲಿ ಸರ್ಕಾರವು ಗ್ರಾಮಮಟ್ಟದಲ್ಲಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲು ಜಿ.ಪಂ., ತಾ.ಪಂ. ಹಾಗೂ ಗ್ರಾ.ಪಂ.ಗಳು ಮುತುವರ್ಜಿ ವಹಿಸಬೇಕು ಎಂದು ಸಲಹೆ ಮಾಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜೆ.ರಂಗನಾಥ ಸ್ವಾಮಿ ಸಮಾಜದಲ್ಲಿನ ಪ್ರತಿಯೊಬ್ಬರಿಗೂ ಸ್ಕೌಟ್ಸ್ ಮೌಲ್ಯ ಮೂಡಿಸಲು ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಆ ನಿಟ್ಟಿ ನಲ್ಲಿ ಶಾಲೆಯ ಮುಖ್ಯಸ್ಥರು ಆಸಕ್ತಿ ಇರುವ ಶಿಕ್ಷಕರಿಗೆ ಆಯ್ಕೆಗೊಳಿಸಿ ತರಬೇತಿ ಕಾರ್ಯಾಗಾರಕ್ಕೆ ಕಳಿಸಬೇಕು. ಇದರ ಪ್ರಯೋಜನಪಡೆದುಕೊಂಡು ಮಕ್ಕಳನ್ನು ಉತ್ತಮ ಪ್ರಜೆಯನ್ನಾಗಿ ರೂಪಿಸಲು ಶಿಕ್ಷಕರು ಪಣತೊಡಬೇಕು ಎಂದು ಸಲಹೆ ಮಾಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಗೋಪಾಲಕೃಷ್ಣ ಮಾತನಾಡಿ ದೇಶದ ಉತ್ತಮ ಪ್ರಜೆಯನ್ನು ರೂಪಿಸುವ ಶಕ್ತಿ ಶಿಕ್ಷಕರಿಗಿದೆ. ಪಠ್ಯದ ಜೊತೆಗೆ ಸಮಾಜದಲ್ಲಿ ಬದುಕಲು ಹಲವಾರು ಸವಾಲುಗಳು ಮುಂದಿರುವ ಹಿನ್ನೆಲೆಯಲ್ಲಿ ಮಕ್ಕಳನ್ನು ಬಾಲ್ಯದಿಂದ ತಯಾರಿಸಬೇಕಿದೆ. ಈ ವಿಚಾರದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ನ ರಾಜ್ಯ ಉಪಾಧ್ಯಕ್ಷ ಎ.ಎನ್.ಮಹೇಶ್, ಸಂಘಟನಾ ಆಯುಕ್ತ ಪ್ರಭಾಕರ್‌ಭಟ್, ಜಿಲ್ಲಾ ಮುಖ್ಯ ಆಯುಕ್ತ ಎಂ.ಎನ್.ಷಡಕ್ಷರಿ, ಗೈಡ್ಸ್ ಆಯುಕ್ತೆ ಶ್ರೀಮತಿ ಡಿ.ಎಸ್.ಮಮತ, ತರಬೇತಿ ಆಯುಕ್ತೆ ಸಂಧ್ಯಾರಾಣ , ಜಂಟಿ ಸಹ ಕಾರ್ಯದರ್ಶಿ ನೀಲಕಂಠಪ್ಪ, ಸ್ಥಾನಿಕ ಆಯುಕ್ತರಾದ ಭಾರತಿ, ಸಿದ್ದೇಗೌಡ, ಸಂಘಟನಾ ಆಯುಕ್ತ ಕಿರಣ್‌ಕುಮಾರ್, ಕಡೂರು ಅಧ್ಯಕ್ಷ ಶರತ್‌ಕೃಷ್ಣಮೂರ್ತಿ, ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ರಾಜ್ ಅರಸ್, ಸಂಘಟಕ ನಿಹಾಲ್ ಮತ್ತಿತರರು ಹಾಜರಿದ್ದರು.