Friday, June 20, 2025
Friday, June 20, 2025

Siddaramaiah ಕಲುಷಿತ ಕುಡಿಯುವ ನೀರಿನ ಸರಬರಾಜಾದರೆ ಅನಾಹುತಕ್ಕೆ ಸಂಬಂಧಿತ ಅಧಿಕಾರಿಗಳೇ ಹೊಣೆ- ಸಿದ್ಧರಾಮಯ್ಯ

Date:

Siddaramaiah ಕಲುಷಿತ ನೀರು ಸೇವನೆಯಿಂದ ಸಾವು ಸಂಭವಿಸಿದ ಕಾವಾಡಿಗರಹಟ್ಟಿಯ ಸಂತ್ರಸ್ಥ ಕುಟುಂಬಗಳನ್ನು ಭೇಟಿಮಾಡಿ, ಬಳಿಕ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿ
ಸಿದ್ದರಾಮಯ್ಯ
ಅವರು, ಅವುಗಳ ಪರಿಹಾರಕ್ಕಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.

ಕಲುಷಿತ ನೀರು ಕುಡಿದು ಆರು ಮಂದಿ ಮೃತಪಟ್ಟಿದ್ದ ಕಾವಾಡಿಗರ ಹಟ್ಟಿಯ ಅಭಿವೃದ್ದಿಗೆ 3 ಎಕರೆ ಜಾಗ 4 ಕೋಟಿ ರೂಪಾಯಿ ನೀಡಿದ್ದೇವೆ.
ಸಂತ್ರಸ್ಥ ಕುಟುಂಬಗಳ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಲಿದೆ. ಈ ಕುಟುಂಬಗಳ ಸದಸ್ಯರಿಗೆ ಉದ್ಯೋಗವನ್ನೂ ಕೊಡುತ್ತೇವೆ, ಮನೆಯನ್ನೂ ಕಟ್ಟಿಸಿಕೊಡುತ್ತೇವೆ.

ಶುದ್ಧ ಕುಡಿಯುವ ನೀರು ಕೊಡುವುದು ನಮ್ಮ ಕರ್ತವ್ಯ. ಘಟನೆ ಘಟಿಸಿದ ತಕ್ಷಣ ಸ್ಥಳೀಯ ಶಾಸಕರು, ಜಿಲ್ಲಾ ಮಂತ್ರಿಗಳು ಮತ್ತು ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ಕೊಟ್ಟು, ತಕ್ಷಣಕ್ಕೆ 10 ಲಕ್ಷ ಪರಿಹಾರ ನೀಡಲಾಗಿತ್ತು.

Siddaramaiah ಮೊದಲೇ ಶುದ್ಧ ನೀರಿನ ವ್ಯವಸ್ಥೆ ಇದ್ದಿದ್ದರೆ ಈ ಅನಾಹುತ ನಡೆಯುತ್ತಿರಲಿಲ್ಲ. ಘಟನೆ ಬಳಿಕ ಶುದ್ಧ ಕುಡಿಯುವ ನೀರಿಗೆ ತೊಂದರೆ ಆಗದಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದೆ ಇಂತಹ ಅನಾಹುತ ನಡೆದರೆ ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga District Minority Welfare Department ವಿದ್ಯಾರ್ಥಿನಿಲಯಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ

Shivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ...

ರಾಜ್ಯ ಮಟ್ಟದ ಅಂಬೆಗಾಲು – 6 ಕಿರು ಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಶಿವಮೊಗ್ಗ ನಗರದ ಸಿನಿಮೊಗೆ - ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ...

MESCOM ಜೂ.21 ರಂದು ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ ತಾಲ್ಲೂಕು, ಕುಂಸಿ ಗ್ರಾಮದ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ...