Friday, June 20, 2025
Friday, June 20, 2025

Ds Arun ಕ್ರೀಡಾಪಟುಗಳು ಒಳ್ಳೆಯ ಅವಕಾಶ & ವೇದಿಕೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು- ಡಿ.ಎಸ್.ಅರುಣ್

Date:

Ds Arun ಓದಿಗೆ ಕೊಡುವಷ್ಟು ಪ್ರಾಮುಖ್ಯತೆಯನ್ನು ಕ್ರೀಡೆಗೂ ನೀಡಬೇಕು. ಪ್ರಸ್ತುತ ಕ್ರೀಡಾ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿದ್ದು ಆಸಕ್ತರು ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದು ವಿಧಾನ ಪರಿಷತ್ ಶಾಸಕರಾದ ಡಿ.ಎಸ್.ಅರುಣ್ ನುಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿವಮೊಗ್ಗ ಹಾಗೂ ವಿವಿಧ ಕ್ರೀಡಾ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ 2023-24 ನೇ ಸಾಲಿನ ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಳೆದ ಐದು ವರ್ಷಗಳಲ್ಲಿ ದೇಶದ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಬೆಳೆವಣಿಗೆಯಾಗಿದೆ. ನಮ್ಮ ಪ್ರಧಾನಿಯವರ ದೂರದೃಷ್ಟಿಯಿಂದ ಖೇಲೋ ಇಂಡಿಯಾ ಎಂಬ ಪರಿಕಲ್ಪನೆಯಡಿ ಮುಂದಿನ ಒಲಂಪಿಕ್ಸ್ ಕ್ರೀಡೆಗೆ ಈಗಲೇ ಕ್ರೀಡಾಪಟುಗಳನ್ನು ಸಿದ್ದಪಡಿಸಲಾಗುತ್ತಿದೆ. ಸರ್ಕಾರದ ದೂರದೃಷ್ಟಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಬೆಳೆವಣಗೆಯಾಗುತ್ತಿದ್ದು ಪ್ರತಿಭಾವಂತ ಕ್ರೀಡಾಪಟುಗಳು ಹೊರಹೊಮ್ಮುತ್ತಿದ್ದಾರೆ. ನಮ್ಮ ಕ್ರೀಡಾಪಟುಗಳು ಏಷ್ಯನ್ ಕ್ರೀಡೆಗಳಲ್ಲಿ ಒಳ್ಳೆಯ ಸಾಧನೆ ಮಾಡುತ್ತಿದ್ದಾರೆ. ಇಂದಿಗೆ 23 ಚಿನ್ನದ ಪದಕ ಸೇರಿದಂತೆ ಒಟ್ಟು 88 ಪದಕಗಳನ್ನು ಪಡೆದಿರುವುದು ಹೆಮ್ಮೆಯ ವಿಷಯ ಎಂದರು.

ಎನ್‍ಇಪಿ ಅಡಿಯಲ್ಲಿ ಓದಿನ ಜೊತೆಗೆ ನಮಗೆ ಕ್ರೀಡೆ, ಕಲೆ, ಸಾಹಿತ್ಯ ಹೀಗೆ ಆಸಕ್ತಿ ಇರುವಂತಹ ವಿಷಯವನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಇದೆ. ವಿದ್ಯಾರ್ಥಿಗಳು ತಮ್ಮದೇ ಆದ ದೂರದೃಷ್ಟಿ, ಗುರಿ ಹೊಂದಬೇಕು. ಸೋಲನ್ನು ಸವಾಲಾಗಿ ಸ್ವೀಕರಿಸಿ ಮುಂದೆ ಬರಬೇಕು. ಶಿವಮೊಗ್ಗದಲ್ಲೂ ಕ್ರೀಡಾ ವಲಯ ಸಾಕಷ್ಟು ಬೆಳೆವಣೆ ಕಾಣುತ್ತಿದ್ದು ಕ್ರಿಕೆಟ್ ಮೈದಾನ, ಸಾಕಷ್ಟು ಒಳಾಂಗಣ ಕ್ರೀಡಾಂಗಣಗಳು ಹೀಗೆ ಅಭಿವೃದ್ದಿಯಾಗುತ್ತಿದೆ. ಒಳ್ಳೆಯ ಅವಕಾಶ ಮತ್ತು ವೇದಿಕೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಕ್ರೀಡಾಪಟುಗಳಿಗೆ ಕರೆ ನೀಡಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿ, ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ಶಿವಮೊಗ್ಗದಲ್ಲಿ ಏರ್ಪಡಿಸಲಾಗಿದ್ದು ಪ್ರತಿ ವಿಭಾಗ ಮಟ್ಟಕ್ಕೂ ವಿವಿಧ ಕ್ರೀಡೆಗಳನ್ನು ನೀಡಲಾಗಿದೆ. ಈ ವಿಭಾಗಕ್ಕೆ ಟೆನ್ನಿಸ್, ಜುಡೋ, ಯೋಗ, ವಾಲಿಬಾಲ್ ಮತ್ತು ಷಟಲ್ ಬ್ಯಾಡ್ಮಿಂಟನ್ ಒಟ್ಟು 5 ಕ್ರೀಡೆಗಳನ್ನು ನೀಡಲಾಗಿದೆ. ಸುಮಾರು 650 ಕ್ರೀಡಾಪಟುಗಳು ನೋಂದಣಿಯಾಗಿದ್ದಾರೆ. ಇಲ್ಲಿ ಆಯ್ಕೆಯಾದವರು ಮೈಸೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವರು ಎಂದರು.

ಕಾರ್ಯಕ್ರಮದಲ್ಲಿ ತರಬೇತುದಾರರಾದ ನಾಗರಾಜ್, ಬಾಳಪ್ಪ ಮಾನೆ, ಕೇಶವನ್ ಮತ್ತು ಶ್ರೀಕಾಂತ್ ಇವರನ್ನು ಸನ್ಮಾನಿಸಲಾಯಿತು.

Ds Arun ಕಾರ್ಯಕ್ರಮದಲ್ಲಿ ತರಬೇತುದಾರರಾದ ನಾಗರಾಜ್, ಜಮಾಲ್ ಅಹಮದ್, ಬಾಳಪ್ಪ ಮಾನೆ, ಕ್ರೀಡಾಪಟುಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

District Health and Family Welfare Department ಖಾಲಿ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನಕ್ಕೆ ಕರೆ

District Health and Family Welfare Department ಕರ್ನಾಟಕ ಮೆದುಳು ಆರೋಗ್ಯ...

Rahul Gandhi ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ರಾಹುಲ್ ಗಾಂಧಿಯವರ ಹುಟ್ಟುಹಬ್ಬ ಆಚರಣೆ

Rahul Gandhi ರಾಹುಲ್ ಗಾಂಧಿಯವರ ಹುಟ್ಟುಹಬ್ಬ - ಶಿವಮೊಗ್ಗ ಯುವ ಕಾಂಗ್ರೆಸ್...