Thursday, September 17, 2026
Thursday, September 17, 2026

ರಾಜ್ಯದ ಅಲೆಮಾರಿ/ ಅರೆ ಅಲೆಮಾರಿ ಅಭಿವೃದ್ಧಿ Karnataka Nomadic Development Corporation ನಿಗಮದಿಂದ ಸಾಲ ಸೌಲಭ್ಯ ಪ್ರಕಟಣೆ

Date:

Karnataka Nomadic Development Corporation ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಗಳಡಿ ಸಹಾಯಧನ/ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ರಾಜ್ಯ ಸರ್ಕಾರ/ನಿಗಮದ ಯೋಜನೆಗಳು 01. ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, 02. ಅರಿವು ಶೈಕ್ಷ ಕ ಸಾಲ ಯೋಜನೆ, 03 ಗಂಗಾ ನೀರಾವರಿ ಕಲ್ಯಾಣ ಯೋಜನೆ-ಈ ಯೋಜನೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ ೧ ಎಕರೆ ಜಮೀನು ಹೊಂದಿರಬೇಕು ಇತರೇ ಜಿಲ್ಲೆಗಳಲ್ಲಿ ಕನಿಷ್ಠ ೨ ಎಕರೆ ಹೊಂದಿರಬೇಕು. ೪. ಸ್ವಯಂ ಉದ್ಯೋಗ ನೇರ ಸಾಲ (ಬ್ಯಾಂಕ್‌ಗಳ ಸಹಯೋಗದೊಂದಿಗೆ), ೫. ಸ್ವಾವಲಂಬಿ ಸಾರಥಿ ಯೋಜನೆ, ೬. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ.
ಆಸಕ್ತರು ಬೆಂಗಳೂರು-ಒನ್/ಕರ್ನಾಟಕ-ಒನ್/ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‌ನಡಿ ನ.೦೩ ರೊಳಗಾಗಿ ಅರ್ಜಿ ಸಲ್ಲಿಸುವುದು. ಅರಿವು ಶೈಕ್ಷಣ ಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ.
Karnataka Nomadic Development Corporation ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ ನಲ್ಲಿ ಅಥವಾ ನಿಗಮದ ಕೇಂದ್ರ ಕಚೇರಿ ದೂ.ಸಂ: 080-22374832/8050770004/80507700005 ನ್ನು ಹಾಗೂ ಶಿವಮೊಗ್ಗ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ/ ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮವನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...