Saturday, December 6, 2025
Saturday, December 6, 2025

CM Siddharamaih ಗ್ಯಾರಂಟಿಗಳಿಂದಾಗಿ ಅಭಿವೃದ್ಧಿಗೆ ಸರ್ಕಾರ ಬ್ರೆಕ್ ಹಾಕಿದೆ ಎಂಬ ಆರೋಪ ಶುದ್ಧಸುಳ್ಳು- ಸಿದ್ಧರಾಮಯ್ಯ

Date:

CM Siddharamaih ಗ್ಯಾರಂಟಿಗಳಿಗಾಗಿ ರಾಜ್ಯದ ಅಭಿವೃದ್ಧಿಗೆ ಸರ್ಕಾರ ಬ್ರೇಕ್ ಹಾಕಿದೆ ಎಂಬ ಆರೋಪ ಶುದ್ಧ ಸುಳ್ಳು. ಆರೋಗ್ಯ, ಶಿಕ್ಷಣ, ಕೃಷಿ ಮತ್ತು ವಸತಿ ಕ್ಷೇತ್ರದ ಯೋಜನೆಗಳು ಕಾಲಬದ್ಧವಾಗಿ ಜಾರಿಗೊಳ್ಳುತ್ತಿವೆ. ಕರ್ನಾಟಕ ಬಂಡವಾಳ ಹೂಡಿಕೆದಾರರ ನೆಚ್ಚಿನ ತಾಣವಾಗುತ್ತಿದೆ. ಮೂಲಸೌಕರ್ಯಗಳ ನಿರ್ಮಾಣ ಭರದಿಂದ ಸಾಗಿದೆ. ಉದ್ಯೋಗವಕಾಶಗಳು ಹೆಚ್ಚುತ್ತಿದೆ. ಒಟ್ಟಿನಲ್ಲಿ ರಾಜ್ಯ ಅಭಿವೃದ್ದಿಯ ಪಥದಲ್ಲಿ ದಾಪುಗಾಲಿಡುತ್ತಿದೆ.
ಹಿಂದಿನ ಸರ್ಕಾರದಲ್ಲಿ ದುರಾಡಳಿತ, ಸಾಲ ಮತ್ತು ಬದ್ಧತಾ ವೆಚ್ಚ ಮಿತಿಮೀರಿದ್ದರಿಂದ ಆರ್ಥಿಕ ಸ್ಥಿತಿ ಹದಗೆಟ್ಟಿತ್ತು. ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳು ಮಾಡಿದವರೇ ಈಗ ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಅವರಿಗೆ ಯಾವ ನೈತಿಕತೆ ಇದೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಮಾನ್ಯ ಮುಖ್ಯಮಂತ್ರಿ ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಬಳಿ ಆಯೋಜಿಸಿದ್ದ ಸಮಾರಂಭದಲ್ಲಿ 100 ನೂತನ ಕರ್ನಾಟಕ ಸಾರಿಗೆ ಹಾಗೂ 40 ಹವಾನಿಯಂತ್ರಣ ರಹಿತ ಸ್ಲೀಪರ್ ಬಸ್ಸುಗಳನ್ನು ಲೋಕಾರ್ಪಣೆಗೊಳಿಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಸಾರಿಗೆ ಮತ್ತು ಮುಜರಾಯಿ ಸಚಿವರಾದ ಕೆ.ಹೆಚ್. ಮುನಿಯಪ್ಪ, ಈಶ್ವರ ಖಂಡ್ರೆ,
ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ರಾಜ್ಯ ಸಾರಿಗೆಯ ಪಲ್ಲಕ್ಕಿ ಉತ್ಸವ ಇಂದಿನಿಂದ ಆರಂಭವಾಗಿದೆ. ವಿಧಾನಸೌಧದ ಮುಂಭಾಗ ಇಂದು ರಾಜ್ಯ ಸಾರಿಗೆಯ ಪಲ್ಲಕ್ಕಿ ಕ್ಲಾಸ್ ಬಸ್ ಗಳು ಸೇರಿದಂತೆ 100 ನೂತನ ಕರ್ನಾಟಕ ಸಾರಿಗೆ ಹಾಗೂ 40 ಹವಾನಿಯಂತ್ರಣ ರಹಿತ ಸ್ಲೀಪರ್ ಬಸ್‌ಗಳಿಗೆ ಮುಖ್ಯಮಂತ್ರಿಗಳೊಂದಿಗೆ ಡಿ.ಕೆ.ಶಿವಕುಮಾರ್ ಅವರು ಚಾಲನೆ ನೀಡಿದರು.

CM Siddharamaih ಇಂದು ನಾವು ಹೊಸ ಅಧ್ಯಾಯಕ್ಕೆ ಕಾಲಿಟಿದ್ದೇವೆ. ಹೆಣ್ಣು ಕುಟುಂಬದ ಕಣ್ಣು ಇದ್ದಂತೆ. ಬೆಲೆಯೇರಿಕೆ ಸಮಸ್ಯೆಗೆ ಮುಕ್ತಿ ನೀಡಿ ಆರ್ಥಿಕವಾಗಿ ಮಹಿಳೆಯರಿಗೆ ಶಕ್ತಿ ನೀಡಬೇಕು ಎಂಬ ಉದ್ದೇಶದೊಂದಿಗೆ ನಮ್ಮ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಶಕ್ತಿ ಯೋಜನೆಯಡಿ ರಾಜ್ಯದ 72 ಕೋಟಿಯಷ್ಟು ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಸರ್ಕಾರಿ ಸಂಸ್ಥೆಗಳು ಲಾಭದ ಜೊತೆಗೆ ನಾಡಿನ ಜನತೆಗೆ ಅನುಕೂಲ ಆಗುವ ದೃಷ್ಟಿಯಿಂದ ಜನರ ಸೇವೆಯನ್ನು ಸರ್ಕಾರ ಮಾಡುತ್ತಿದೆ ಎಂದರು.

ಇಂದಿನಿಂದ ಆರಂಭವಾಗಿರುವ ಪಲ್ಲಕ್ಕಿ ಬಸ್‌ನ ವಿಶೇಷತೆಗಳನ್ನು ವೀಕ್ಷಿಸಿದೆ. ಮನೆಯ ಯಜಮಾನಿಯರನ್ನು ದೇವಸ್ಥಾನ ಸೇರಿದಂತೆ ಹಲವು ಪ್ರದೇಶಗಳಿಗೆ ರಾಜ್ಯ ಸಾರಿಗೆ ಬಸ್‌ಗಳು ತಲುಪಿಸುತ್ತಿವೆ. ಕೊಟ್ಟ ಮಾತು ಉಳಿಸಿಕೊಳ್ಳುವ ಮೂಲಕ ರಾಜ್ಯದಲ್ಲಿ ಉತ್ತಮವಾದ ಆಡಳಿತ ನೀಡುತ್ತೇವೆ ಎಂದು ತಿಳಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...