Tuesday, February 3, 2026
Tuesday, February 3, 2026

Karnataka Savita Samaj Development Corporationರಾಜ್ಯದ ಸವಿತಾ ಸಮಾಜ ಅಭಿವೃದ್ಧಿನಿಗಮದಿಂದ ಸಾಲಸೌಲಭ್ಯ

Date:

Karnataka Savita Samaj Development ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಹಾಯಧನ/ಸಾಲ-ಸೌಲಭ್ಯವನ್ನು ನೀಡಲಾಗುತ್ತಿದ್ದು ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾ ನೀರಾವರಿ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ(ಬ್ಯಾಂಕ್‍ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದು.

ಆಸಕ್ತರು ಬೆಂಗಳೂರು-ಒನ್/ಕರ್ನಾಟಕ-ಒನ್/ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೆÇೀರ್ಟಲ್ ಮೂಲ ನ.03 ರೊಳಗಾಗಿ ಅರ್ಜಿ ಸಲ್ಲಿಸುವುದು. ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ.

Karnataka Savita Samaj Development ಆಧಾರ್ ಕಾರ್ಡ್‍ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ತಾಳೆಯಾಗಬೇಕು.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ http://kssd.karnataka.gov.in ನಲ್ಲಿ ಅಥವಾ ನಿಗಮದ ಕೇಂದ್ರ ಕಚೇರಿ ದೂ.ಸಂ: 080-22374832/ 8050770004/ 8050770005 ನ್ನು ಹಾಗೂ ಶಿವಮೊಗ್ಗ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ/ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮವನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...