Tuesday, April 22, 2025
Tuesday, April 22, 2025

DC Chikkamagaluru ಅರ್ಹ ಫಲಾನುಭವಿಗಳಿಗೆ ನಿವೇಶನ ನೀಡಲು ಕಮ್ಯುನಿಷ್ಟ್ ಪಕ್ಷದ ಆಗ್ರಹ

Date:

DC Chikkamagaluru ನಿವೇಶನವಿಲ್ಲದೇ ವಸತಿ ಸಮಸ್ಯೆ ಎದುರಿಸುತ್ತಿರುವ ಅರ್ಹ ಫಲಾನುಭವಿಗಳಿಗೆ ನಿವೇಶನ ಒದಗಿಸಲು ರಾಜ್ಯಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷದ ಮುಖಂಡರುಗಳು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಸ್.ಎಲ್.ರಾಧಾಸುಂದ್ರೇಶ್ ರಾಜ್ಯದಲ್ಲಿ ಲಕ್ಷಾಂತರ ಕುಟುಂಬಗಳು ನಿವೇಶನವಿಲ್ಲದೇ ಸಮಸ್ಯೆ ಎದುರಿಸುತ್ತಿದೆ. ಚುನಾವಣಾ ಪೂರ್ವದಲ್ಲಿ ನೀಡಿ ದಂತಹ ಭರವಸೆಯನ್ನು ರಾಜ್ಯ ಸರ್ಕಾರ ಈಡೇರಿಸುವ ಮೂಲಕ ಜನರ ನೈಜ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿಯ ದುರಾಡಳಿತದಿಂದ ಬೇಸತ್ತಿದ್ದ ರಾಜ್ಯದ ಜನತೆ ವಿಧಾನಸಭಾ ಚುನಾವಣೆಯಲ್ಲಿ ಮನೆಗೆ ಕಳಿಸುವ ಮೂಲಕ ಕಾಂಗ್ರೆಸ್ ಸರ್ಕಾರವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವಲ್ಲಿ ಕಾರ್ಮಿಕ ಸಮುದಾಯ ಬಹಳಷ್ಟು ಶ್ರಮ ವಹಿಸಿದ್ದು ಆ ನಿಟ್ಟಿನಲ್ಲಿ ಅಸಂಘಟಿತ ಕಾರ್ಮಿಕರಾಗಿ ಘೋಷಿಸಿದ್ದ ೬ನೇ ಗ್ಯಾರಂಟಿಯನ್ನು ಜಾರಿಗೊಳಿಸಬೇಕು ಎಂದರು.

DC Chikkamagaluru -ಸರ್ಕಾರವೇ ಘೋಷಿಸಿದಂತೆ ಆರನೇ ಗ್ಯಾರಂಟಿಯನ್ನು ಅಸಂಘಟಿತ ಕಾರ್ಮಿಕರಾದ ಅಂಗನವಾಡಿ, ಆಶಾ ಹಾಗೂ ಬಿಸಿಯೂಟ ಕಾರ್ಯಕರ್ತೆಯರಿಗೆ 6 ಸಾವಿರ ಗೌರವಧನ ಹೆಚ್ಚಿಸಬೇಕು. ವಸತಿ ಸಮಸ್ಯೆಗೆ ತೊಡಕಾಗಿ ರುವ ಅರಣ್ಯ ಕಾಯಿದೆಗಳಿಗೆ ತಿದ್ದುಪಡಿ ತರಬೇಕು ಎಂದು ತಿಳಿಸಿದರು.

ನಗರದಲ್ಲಿ ಯುಜಿಡಿ ವ್ಯವಸ್ಥೆ ಸೌಲಭ್ಯ ಒದಗಿಸಲು ಕೋಟಿಗಟ್ಟಲೇ ಹಣ ಖರ್ಚಾಗಿದೆ. ಆದರೂ ಸಮರ್ಪಕ ವಾಗಿ ಕಾಮಗಾರಿ ಪೂರೈಸಿಲ್ಲ. ಮೇಲ್ನೋಟಕ್ಕೆ ಗಮನಿಸಿದರೆ ಬಹಳಷ್ಟು ಅನುದಾನ ದುರುಪಯೋಗವಾಗಿದೆ ಎನ್ನ ಲಾಗುತ್ತಿದೆ. ಆದ್ದರಿಂದ ಸಂಬಂಧಟಪಟ್ಟರಿಂದ ಉನ್ನತ ಮಟ್ಟದ ತನಿಖೆ ನಡೆಸಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದರು.

ನಗರ ಪ್ರದೇಶದಲ್ಲಿ ಕಳೆದ ಹಲವಾರು ವರ್ಷಗಳಿಂದ ಮನೆ ನಿವೇಶನ ಇಲ್ಲದವರಿಗೆ ಪ್ಲಾಟ್ ಕೊಡುವುದಾಗಿ ಜನರಿಂದ ಹಣ ಹಾಗೂ ಅರ್ಜಿ ತೆಗೆದುಕೊಂಡಿದ್ದು ಇದುವರೆಗೂ ನೀಡಿರುವುದಿಲ್ಲ. ಪ್ಲಾಟ್ ಒದಗಿಸಲು ಬದಲು ನಿವೇಶನ ಒದಗಿಸಿಕೊಡಬೇಕು. ರಾಜ್ಯದ ಪೌರಕಾರ್ಮಿಕರ ಸೇವೆಯನ್ನು ಖಾಯಂಗೊಳಿಸಿ ಸರ್ಕಾರ ಸೌಲಭ್ಯವನ್ನು ವಿಸ್ತರಿಸಬೇಕು ಎಂದು ಒತ್ತಾಯಿಸಿದರು.

ಪಕ್ಷದ ರಾಜ್ಯ ಮಂಡಳಿ ಸದಸ್ಯ ಹೆಚ್.ಎಂ.ರೇಣುಕಾರಾಧ್ಯ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರುವಲ್ಲಿ ಸಿಪಿಐ ಸಂಪೂರ್ಣ ಬೆಂಬಲ ಸೂಚಿಸಿತ್ತು. ಇದೀಗ ಕಾರ್ಮಿಕರನ್ನು ಸಮಸ್ಯೆಗಳನ್ನು ಆಲಿಸುವ ಸರ್ಕಾರ ಗಮನಹರಿಸಬೇಕು. ಭರವಸೆಯಂತೆ 6ನೇ ಗ್ಯಾರಂಟಿಯನ್ನು ಘೋಷಿಸುವ ಮೂಲಕ ಕಾರ್ಮಿಕರ ಸಮುದಾಯಕ್ಕೆ ಸಹಾಯಹಸ್ತ ಚಾಚಬೇಕು ಎಂದರು.
ರಾಜ್ಯದ ಬಹಳ ಕಡೆಗಳಲ್ಲಿ ಕಾಡು ಪ್ರಾಣಗಳಿಂದ ರೈತರು, ಕಾರ್ಮಿಕರು ತೊಂದರೆ ಅನುಭವಿಸಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇದಕ್ಕೆಲ್ಲಾ ಕಾರಣ ಅರಣ್ಯ ಇಲಾಖೆ. ಕಾಡಿನಲ್ಲಿ ಹಣ್ಣಿನ ಗಿಡಗಳು, ಬಿದಿರು ಬೆಳೆಸದೇ ಅಕೇಶಿಯಾ, ತೇಗದ ಮರಗಳನ್ನು ಬೆಳೆಯು ತ್ತಿರುವುದರಿಂದ ಪ್ರಾಣಗಳಿಗೆ ಆಹಾರ ದೊರಕದಂತೆ ನಾಡಿನತ್ತ ಧಾವಿಸುವಂತಾಗಿದೆ ಎಂದು ದೂರಿದರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಮಂಡಳಿ ಸದಸ್ಯ ವಸಂತ್‌ಕುಮಾರ್, ತಾಲ್ಲೂಕು ಕಾರ್ಯದರ್ಶಿ ರಮೇಶ್ ಕೆರೆಮಕ್ಕಿ, ಸಹ ರ್ಕಾದರ್ಶಿ ಯಡದಾಳು ಕುಮಾರ್, ಮುಖಂಡರುಗಳಾದ ಮಂಜೇಗೌಡ, ವಿಜಯ್‌ಕುಮಾರ್, ಸೋಮೇಗೌಡ, ಲೋಬೋ, ಜಯನಂದ್, ಜಯಕುಮಾರ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ತಾಲ್ಲೂಕುಗಳಲ್ಲಿ ಜನಸ್ಪಂದನ ಕಾರ್ಯಕ್ರಮ- ಮಧು ಬಂಗಾರಪ್ಪ

Madhu Bangarappa ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು...

Fisheries project 2024-25ನೇ ಸಾಲಿನ ಮತ್ಸ್ಯಸಂಪದ ಯೋಜನೆಗೆ ಅರ್ಹರಿಂದ ಅರ್ಜಿ ಆಹ್ವಾನ

Fisheries project 2024-25 ನೇ ಸಾಲಿನ ಪ್ರಧಾನ ಮಂತ್ರಿ ಮತ್ಯ್ಸ ಸಂಪದ...

Ravi Telex ಪತ್ರಕರ್ತ‌ “ಟೆಲೆಕ್ಸ್ ರವಿ ” ಗೆ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ

Ravi Telex ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ...

Inner Wheel East Shimoga ಆಶ್ರಮವಾಸಿಗಳ ಸೇವೆ ,ದೇವರ ಸೇವೆಗೆ ಸಮ- ವಾಗ್ದೇವಿ ಬಸವರಾಜ್

Inner Wheel East Shimoga ಆಶ್ರಮವಾಸಿಗಳ ಸೇವೆ ದೇವರ ಸೇವೆಗೆ ಸಮಾನ....