Saturday, November 23, 2024
Saturday, November 23, 2024

Labor Council ಧನಸಹಾಯದ ಅರ್ಜಿಗಳ ಪರಿಶೀಲನೆ ಖಾಸಗಿಯವರಿಗೆ ವಹಿಸಬೇಡಿ- ಚಿಕ್ಕಮಗಳೂರು ಜಿಲ್ಲಾ ಕಟ್ಟಡ ಕಾರ್ಮಿಕ ಸಂಘದ ಮನವಿ

Date:

Labor Council ಶೈಕ್ಷಣಿಕ ವರ್ಷದ ಧನಸಹಾಯದ ಅರ್ಜಿಗಳನ್ನು ಖಾಸಗೀಯವರಿಗೆ ಪರಿಶೀಲಿಸಲು ನೀಡಿರುವ ಆದೇಶ ರದ್ದುಪಡಿಸಿ, ಕಾರ್ಮಿಕ ಮಂಡಳಿಯೇ ನಿಭಾಯಿಸುವ ಮೂಲಕ ಅರ್ಹ ಫಲಾ ನುಭವಿಗಳಿಗೆ ಧನಸಹಾಯದ ಮೊತ್ತವನ್ನು ಜಮಾ ಮಾಡಬೇಕು ಎಂದು ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘ ಮುಖ್ಯ ಮಂತ್ರಿಗಳನ್ನು ಒತ್ತಾಯಿಸಿದೆ.

ಈ ಸಂಬಂಧ ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವರ ಮುಖಾಂತರ ಮುಖ್ಯಮಂತ್ರಿ ಸಿದ್ದ ರಾಮಯ್ಯ ಅವರಿಗೆ ಮನವಿ ಸಲ್ಲಿಸಿದ ಸಂಘದ ಮುಖಂಡರುಗಳು ಶೈಕ್ಷಣ ಕ ಧನಸಹಾಯವನ್ನು ಕೂಡಲೇ ಮಂಜೂರಾತಿ ಮಾಡಿ ಅರ್ಹ ಫಲಾನುಭವಿಗಳಿಗೆ ಆರ್ಥಿಕ ನೆರವು ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ವಸಂತ್‌ಕುಮಾರ್ ಕಟ್ಟಡ ಕಾರ್ಮಿಕರಿಗೆ ನಿವೇಶನ ವನ್ನು ಪಡೆದುಕೊಳ್ಳಲು ಕಾರ್ಮಿಕರ ಮಂಡಳಿಯಿಂದ ಪ್ರೋತ್ಸಾಹಧನ ನೀಡಬೇಕು. ಸ್ವಂತ ನಿವೇಶನದಲ್ಲಿ ಮನೆ ನಿರ್ಮಿಸಿಕೊಳ್ಳಲು ಐದು ಲಕ್ಷದವರೆಗೆ ಸಹಾಯಧನ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಇತ್ತೀಚಿನ ದಿನಗಳಲ್ಲಿ ಬೋಗಸ್ ಕಾರ್ಡ್ದಾರರು ಹೆಚ್ಚಾಗುತ್ತಿದ್ದು ಇದನ್ನು ತಡೆಗಟ್ಟಲು ಸೂಕ್ತ ಕಾನೂನು ಕೈಗೊಳ್ಳುವ ಮೂಲಕ ಇದರಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಹಾಗೂ ಮಂಡಳಿ ಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತಡೆಗಟ್ಟಲು ಸೂಕ್ತ ಕ್ರಮ ವಹಿಸಬೇಕು ಎಂದರು.

ಮಂಡಳಿಯಲ್ಲಿ ಉಪಯೋಗಿಸುತ್ತಿರುವ ಹಣವನ್ನು ಕಾರ್ಮಿಕರ ಸದುಪಯೋಗಕ್ಕೆ ಬಳಸಿಕೊಳ್ಳಬೇಕು. ಎಲ್ಲಾ ನರ್ಸಿಂಗ್ ಹೋಂಗಳಲ್ಲಿ ಫಲಾನುಭವಿಗಳು ತುರ್ತು ಚಿಕಿತ್ಸೆ ಪಡೆದುಕೊಂಡರೆ ವೈದ್ಯಕೀಯ ನೀಡುವುದು. ವೈದ್ಯಕೀಯ ವೆಚ್ಚದ ಮೊತ್ತವನ್ನು ಪಡೆಯಲು 48 ಗಂಟೆಯ ಮಿತಿಯನ್ನು ತೆಗೆದು ಖರ್ಚು-ವೆಚ್ಚಗಳ ಆಧಾರದ ಮೇಲೆ ವೆಚ್ಚವನ್ನು ಭರಿಸಬೇಕು. ತಪಾಸಣೆ ವೇಳೆಯಲ್ಲಿ ಪತ್ತೆಯಾಗುವ ರೋಗಗಳಿಗೆ ಉನ್ನತ ಚಿಕಿತ್ಸೆ ಪಡೆಯಲು ನಗದು ರಹಿಗ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ತಿಳಿಸಿದರು.

Labor Council ನೈಜ ಕಟ್ಟಡ ಕಾರ್ಮಿಕರಲ್ಲದವರ ಕಾರ್ಡ್ಗಳನ್ನು ಕೂಡಲೇ ಪರಿಶೀಲನೆ ನಡೆಸಿ ರದ್ದುಪಡಿಸಬೇಕು. ಹಾಗೂ ಕಾರ್ಮಿಕರ ನೊಂದಣ ಯನ್ನು ಸೇವಾಸಿಂಧುವಿಗೆ ನೀಡದೇ ಹಿಂದಿನ ರೀತಿಯಲ್ಲೇ ಕಾರ್ಮಿಕ ಇಲಾಖೆಯ ಮು ಖಾಂತರವೇ ನೊಂದಣ ಮಾಡಿದರೆ ಅನುಕೂಲವಾಗುವ ಜೊತೆಗೆ ಬೋಗಸ್ ಕಾರ್ಡ್ಗಳನ್ನು ತಡೆಗಟ್ಟಬಹುದು ಎಂದರು.

ಕಲ್ಯಾಣ ಮಂಡಳಿಯಲ್ಲಿ ಹಾಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರನ್ನು ಹಾಗೂ ನೌಕರರನ್ನು ಖಾಯಂಗೊಳಿಸಬೇಕು. ಮುಂದಿನ ದಿನಗಳಲ್ಲಿ ತೆರವಾಗುವ ಖಾಲಿ ಹುದ್ದೆಗೆ ಮಂಡಳಿಯಿಂದ ವಿದ್ಯಾರ್ಥಿ ಸಹಾಯಧನ ಪಡೆದು ಅತಿಹೆಚ್ಚು ಅಂಕಗಳಿಸಿದ ನೈಜ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸಿ.ಸಿ.ಮಂಜೇಗೌಡ, ಪ್ರಧಾನ ಕಾರ್ಯದರ್ಶಿ ಎ.ಜಯಕುಮಾರ್, ಸದಸ್ಯರಾದ ಸಲೀಂ, ಗಣೇಶ್ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ “ರಾಜ್ಯೋತ್ಸವ ಕವಿಗೋಷ್ಠಿ”

Akhila Bharatiya Sahitya Parishad ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ...

Mohare Hanumantharaya Award ಪ್ರಶಸ್ತಿ ಪುರಸ್ಕೃತ ಪತ್ರಕರ್ತ, ‘ಕ್ರಾಂತಿ ದೀಪ ‘ಮಂಜುನಾಥ್ ಅವರಿಗೆ ಸನ್ಮಾನ

Mohare Hanumantharaya Award ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಮೊಹರೆ ಹಣಮಂತರಾಯ...

MESCOM ನವೆಂಬರ್ 23 .ಹೊಳಲೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಹೊಳಲೂರು ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ...

Rotary Club Shimoga ಪ್ರೌಢಾವಸ್ಥೆಯು ದೇಹದಲ್ಲಿ ಅನೇಕ ಬದಲಾವಣೆ ತರುತ್ತದೆ.ಅದನ್ನ ಗಮನಿಸಬೇಕು- ಡಾ.ಮೋಕ್ಷಾ

Rotary Club Shimoga ರೋಟರಿ ಸಂಸ್ಥೆಯು ನಿಸ್ವಾರ್ಥವಾಗಿ ವಿಶ್ವದ ಎಲ್ಲ ಭಾಗಗಳಲ್ಲಿ...