Wednesday, October 2, 2024
Wednesday, October 2, 2024

Zilla Panchayat ಶಿವಮೊಗ್ಗ ನಗರ &ಗ್ರಾಮಾಂತರದಲ್ಲಿಕುಡಿಯುವ ನೀರಿಗೆ ವ್ಯತ್ಯಯವಾಗದಂತೆ ನಿರ್ವಹಿಸಲು ಉಮಾಶಂಕರ್ ಸೂಚನೆ

Date:

Zilla Panchayat ಶಿವಮೊಗ್ಗ ಜಿಲ್ಲೆಯ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿನ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ವೆತ್ಯಯವಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಅವರು ಜಿಲ್ಲೆಯ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ಜಿಲ್ಲಾ ಪಂಚಾಯತಿಯ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ವಾಡಿಕೆಗಿಂತ ತೀವ್ರ ಕಡಿಮೆ ಪ್ರಮಾಣ ಮಳೆ ಬಿದ್ದಿರುವ ಹಿನ್ನೆಲೆಯಲ್ಲಿ, ಬೇಸಿಗೆಯಲ್ಲಿ ಕುಡಿಯುವ ನೀರಿನ ಹಾಹಾಕಾರ ಕಂಡುಬರದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಗೃಹಜ್ಯೋತಿ ಮತ್ತು ಗೃಹಲಕ್ಷ್ಮಿ ಯೋಜನೆಗಳ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಗೃಹಜ್ಯೋತಿ ಯೋಜನೆಯಡಿ ವಿದ್ಯುತ್ ಬಿಲ್‌ನಿಂದ ರಿಯಾಯಿತಿ ಪಡೆಯುತ್ತಿರುವ ಫಲಾನುಭವಿಗಳು ಸೌಲಭ್ಯದ ಲಾಭ ಪಡೆಯುತ್ತಿರುವ ಬಗ್ಗೆ ಹಾಗೂ ಈವರೆಗೆ ಬಳಕೆಯಾಗುತ್ತಿದ್ದ ಮತ್ತು ಪ್ರಸ್ತುತ ಬಳಕೆಯಾಗುತ್ತಿರುವ ವಿದ್ಯುತ್‌ನ ಪ್ರಮಾಣದ ಕುರಿತು ಮಾಹಿತಿ ಪಡೆದ ಅವರು, ಸೌಲಭ್ಯದ ಲಾಭ ಪಡೆಯದೆ ಉಳಿದಿರುವ ಫಲಾನುಭವಿಗಳನ್ನು ಗುರುತಿಸಿ, ಸೌಲಭ್ಯ ಒದಗಿಸುವಂತೆ ಸೂಚಿಸಿದರು. ಗೃಹಲಕ್ಷ್ಮಿ ಯೋಜನೆಯಡಿ ಸೌಲಭ್ಯಕ್ಕಾಗಿ ಹೆಸರು ನೋಂದಾಯಿಸಿರುವ ಫಲಾನುಭವಿಗಳ ಖಾತೆಗೆ ಹಣ ಜಮಾವಣೆಗೊಂಡಿರುವ ಹಾಗೂ ಹಲವು ತಾಂತ್ರಿಕ ಕಾರಣಗಳಿಂದಾಗಿ ಸೌಲಭ್ಯ ಪಡೆಯದಿರುವವರನ್ನು ಗುರುತಿಸಿ, ಸೌಲಭ್ಯ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಮೆಸ್ಕಾಂನ ಸೂಪರಿಂಟೆಂಡೆಂಟ್ ಅವರು ಸಭೆಗೆ ಮಾಹಿತಿ ನೀಡಿ, ಶೇ79ರಷ್ಟು ಫಲಾನುಭವಿಗಳು ಗೃಹಜ್ಯೋತಿ ಯೋಜನೆಯಿಂದಾಗಿ ಪ್ರತಿ ಮಾಹೆ ೯.ಕೋಟಿ ರೂ.ಗಳ ವಿದ್ಯುತ್ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ ಎಂದ ಅವರು, ಭದ್ರಾವತಿ ತಾಲೂಕು ಕಚೇರಿಯ ವಿದ್ಯುತ್ ಬಿಲ್ ರೂ.೧೦ಲಕ್ಷ ಬಾಕಿ ಇದ್ದು ಅದನ್ನು ಕೂಡಲೇ ಪಾವತಿಸಲು ಸೂಚನೆ ನೀಡುವಂತೆ ಅವರು ಮನವಿ ಮಾಡಿದರು.

ಶಿಕ್ಷಣ ಇಲಾಖೆಯ ವತಿಯಿಂದ ನಿರ್ಮಾಣ ಹಂತದಲ್ಲಿರುವ ನೂತನ ಕಟ್ಟಡ ಕಾಮಗಾರಿಗಳಿಗೆ ವೇಗ ಹೆಚ್ಚಿಸಬೇಕು. ಕಟ್ಟಡಗಳ ದುರಸ್ತಿಗಾಗಿ ಬಿಡುಗಡೆಯಾದ ಅನುದಾನವನ್ನು ಸಕಾಲದಲ್ಲಿ ಉದ್ದೇಶಿತ ಕೆಲಸಕ್ಕಾಗಿಯೇ ಬಳಸಬೇಕು. ಕರ್ನಾಟಕ ಪಬ್ಲಿಕ್ ಸ್ಕೂಲ್ ಮಾದರಿಯಲ್ಲಿ ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ಹಣ ಮಂಜೂರಾಗಿದ್ದು, ಕೂಡಲೇ ಅನುದಾನವನ್ನು ಬಳಸುವಂತೆ ಅವರು ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಅಥ್ಲೆಟಿಕ್ ಹಾಗೂ ಹಾಕಿ ಕ್ರೀಡೆಯಲ್ಲಿ ಜಿಲ್ಲೆಯ ಕ್ರೀಡಾವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ರಾಷ್ಟ, ಅಂತರಾಷ್ಟ ಮಟ್ಟದಲ್ಲಿ ಅಸಾಧಾರಣ ಸಾಧನೆ ಮಾಡಿರುವ ವಿದ್ಯಾರ್ಥಿಗಳನ್ನು ಗುರುತಿಸಿ, ಪ್ರೋತ್ಸಾಹಿಸುವಂತೆ ಅವರು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಎಸ್.ಸಿ.ಪಿ. ಮತ್ತು ಟಿ.ಎಸ್.ಪಿ. ಯೋಜನೆಯಡಿ ಆಗಿರುವ ಪ್ರಗತಿ ಆಶಾದಾಯಕವಾಗಿಲ್ಲ. ಸಂಬಧಿಸಿದ ಇಲಾಖಾ ಅಧಿಕಾರಿಗಳು ಗಮನಹರಿಸಿ, ನಿರೀಕ್ಷಿತ ಪ್ರಗತಿ ಸಾಧಿಸಲು ಶ್ರಮಿಸುವಂತೆ ಸೂಚಿಸಿದರು.

ಜನತಾದರ್ಶನದಲ್ಲಿ ಸ್ವೀಕರಿಸಲಾದ ಅರ್ಜಿಗಳನ್ನು ಇಲಾಖಾವಾರು ವಿಂಗಡಿಸಿ, ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಸಂಬಂಧ ಅಧಿಕಾರಿಗಳು ಕೈಗೊಂಡ ಕ್ರಮದ ಬಗ್ಗೆ ಅಕ್ಟೋಬರ್ 16ರಂದು ಸಭೆ ಕರೆದು ಪ್ರಗತಿ ಪರಿಶೀಲನೆ ನಡೆಸಲಾಗುವುದು. ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ವರದಿಯಾಗಿರುವ 24ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ 16ಅರ್ಹ ಪ್ರಕರಣಗಳಿಗೆ ಪರಿಹಾರ ವಿತರಿಸಲಾಗಿದೆ. ಅವುಗಳಲ್ಲಿ 04 ಪ್ರಕರಣಗಳನ್ನು ತಿರಸ್ಕರಿಸಲಾಗಿದೆ. ಉಳಿದ 04 ಪ್ರಕರಣಗಳನ್ನು ವೈದ್ಯಕೀಯ ವರದಿ ಪಡೆದು ಶೀಘ್ರದಲ್ಲಿ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

Zilla Panchayat ಜಿಲ್ಲೆಯಲ್ಲಿ ವಾಡಿಕೆ ಪ್ರಮಾಣದ ಮಳೆ ಬಾರದಿರುವ ಹಿನ್ನೆಲೆಯಲ್ಲಿ ಸುಮಾರು ೮೦ಕೋಟಿ ರೂ.ಗಳ ಬೆಳೆ ನಷ್ಟ ಆಗಿರುವ ಬಗ್ಗೆ ಅಂದಾಜು ಮಾಡಲಾಗಿದೆ. ಶೇ.೫೭ರಷ್ಟು ಭತ್ತ, ಶೇ.೮೫ರಷ್ಟು ಮೆಕ್ಕೆಜೋಳದ ಬೆಳೆ ನಷ್ಟವಾಗಿದ್ದು, ಒಟ್ಟು ಶೇ.೬೮ರಷ್ಟು ಬೆಳೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. _ ಶ್ರೀಮತಿ ಪೂಣ ðಮಾ, ಜಂಟಿ ಕೃಷಿ ನಿರ್ದೇಶಕರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...