Dalita Sangarsha Samiti ಪ್ರತಿಯೊಂದು ಗ್ರಾಮ ಪಂಚಾಯಿತಿಗಳಲ್ಲಿ ಮದ್ಯದಂಗಡಿ ತೆರೆಯಲು ರಾಜ್ಯ ಸರ್ಕಾರ ನಿರ್ಣಯ ಕೈಗೊಂಡಿರುವುದನ್ನು ಕೂಡಲೇ ರದ್ದುಪಡಿಸಬೇಕು ಎಂದು ದಸಂಸ (ಕೃಷ್ಪಪ್ಪ ಬಣ) ಜಿಲ್ಲಾ ಸಂಚಾಲಕ ಕಬ್ಬಿಕೆರೆ ಮೋಹನ್‌ಕುಮಾರ್ ಒತ್ತಾಯಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು ಚುನಾವಣಾ ಪೂರ್ವದಲ್ಲಿ ಗ್ಯಾರಂಟಿಗಳನ್ನು ಕಾಂಗ್ರೆಸ್ ಘೋಷಣೆ ಮಾಡಿತ್ತು. ಬಳಿಕ ಗ್ಯಾರಂಟಿಗಳನ್ನು ನಿಭಾಯಿಸುವ ಸಲುವಾಗಿ ಪ್ರತಿ ಗ್ರಾಮ ಪಂಚಾಯಿತಿಗೆ ವ್ಯಾಪ್ತಿಯಲ್ಲಿ ಮದ್ಯದಂಗಡಿ ತೆರೆಯಲು ಹೊರಟಿರುವುದು ಎಷ್ಟರ ಮಟ್ಟಿಗೆ ಸರಿಯಿದೆ ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ದಲಿತರ 11 ಸಾವಿರ ಕೋಟಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡು ಅನ್ಯಾಯ ಮಾಡಲಾ ಗುತ್ತಿದೆ. ಅದಲ್ಲದೇ ರಾಜ್ಯದಲ್ಲಿ ಪಂಚಾಯಿತಿಗೊಂದು ಮದ್ಯದಂಗಡಿ ತೆರೆದು ಕುಡುಕರ ರಾಜ್ಯವನ್ನು ಮಾಡಲು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮುಂದಾಗುತ್ತಿರುವುದಕ್ಕೆ ತೀವ್ರವಾಗಿ ಖಂಡಿಸುತ್ತೇವೆ ಎಂದಿದ್ದಾರೆ.
Dalita Sangarsha Samiti ಕೂಡಲೇ ಮುಖ್ಯಮಂತ್ರಿಗಳು ಮದ್ಯದಂಗಡಿ ತೆರೆಯಲು ಕೈಗೊಂಡಿರುವ ನಿರ್ಣಯವನ್ನು ಕೈಬಿಟ್ಟು ರಾಜ್ಯದ ರೈತರು, ಜನಸಾಮಾನ್ಯರಿಗೆ ಅನುಕೂಲಕರವಾಗುವ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಸುಭಿಕ್ಷಾ ನಾಡ ನ್ನಾಗಿ ಪರಿವರ್ತಿಸಬೇಕು ಎಂದು ಆಗ್ರಹಿಸಿದ್ದಾರೆ.