Friday, April 18, 2025
Friday, April 18, 2025

Adichunchanagiri Mutt ಆದಿಚುಂಚನಗಿರಿ ಶಾಖಾಮಠದಲ್ಲಿ ಶರನ್ನವರಾತ್ರಿ ಉತ್ಸವ ಮಾಹಿತಿ

Date:

Adichunchanagiri Mutt ಅಕ್ಟೊಬರ್ 15- 10- 2023 ರಂದು ಶಿವಮೊಗ್ಗ ಶಾಖಾ ಮಠದಲ್ಲಿ ಶ್ರೀ ಕಾಲಭೈರವೇಶ್ವರ ಸ್ವಾಮಿ ಮತ್ತು ಶೀ ಕಾಳಿಕಾಂಬ ದೇವಿಯ ಅಮ್ಮನವರ ಸನ್ನಿಧಿಯಲ್ಲಿ ಶರನ್ನವರಾತ್ರಿ ಮಹೋತ್ಸವವು ಯುಗ ಯೋಗಿ ಪದ್ಮಭೂಷಣ ಪುರಸ್ಕೃತ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳವರ ದಿವ್ಯಾಶೀರ್ವಾದಗಳೊಂದಿಗೆ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ 15/10/2023 ರಿಂದ 24/10/2023 ರವರೆಗೆ ಕಾರ್ಯಕ್ರಮ ನಡೆಯಲಿದ್ದು, ಒಂಬತ್ತು ದಿನಗಳವರೆಗೆ ಶ್ರೀದೇವಿಗೆ ವಿವಿಧ ಅಲಂಕಾರಗಳಿಂದ ಪೂಜಾ ಕೈಂಕರ್ಯಗಳು ಜರುಗಲಿವೆ.

ಸಂಜೆ ದುರ್ಗಾಹೋಮ ನಡೆಸಲಾಗುವುದು, ಪ್ರತಿದಿನ ಸಂಜೆ 6:15 ರಿಂದ 7:20 ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವವು.

Adichunchanagiri Mutt ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರ ದಿವ್ಯಸಾನಿಧ್ಯದಲ್ಲಿ ಅ, 21/10/2023 ರಂದು ಬೆಳಿಗ್ಗೆ 7 ರಿಂದ ಚಂಡಿಕಾ ಹೋಮ, ಮಹಾಮಂಗಳಾರತಿ, ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಲಿವೆ. ನಂತರ ಪ್ರಸಾದ ವಿನಿಯೋಗ ವಿರುತ್ತದೆ. ಅ,24/10/2023 ರ ಸಂಜೆ 5 ಗಂಟೆಗೆ ಪಲ್ಲಕ್ಕಿ ಉತ್ಸವ ಹಾಗೂ ಬನ್ನಿ ಮುಡಿಯುವ ಕಾರ್ಯಕ್ರಮವಿದ್ದು,
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ. ಶ್ರೀ ಕಾಳಿಕಾಂಬ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ಶಿಮೊಗ್ಗ ಶಾಖಾಮಠದ ವ್ಯವಸ್ಥಾಪಕರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಏಪ್ರಿಲ್ 19 ಆಲ್ಕೊಳ ಫೀಡರ್ ಎ.ಎಫ್. 3 & 5 ರ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-3 ಮತ್ತು...

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...