National Means-cum-Merit 2023-24ನೇ ಸಾಲಿಗೆ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್(ಎನ್‍ಎಂಎಂಎಸ್) ವಿದ್ಯಾರ್ಥಿ ವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳು ನ್ಯಾಷನಲ್ ಸ್ಕಾಲರ್‍ಶಿಪ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಮತ್ತು ನವೀಕರಿಸಲು ಅವಕಾಶ ಕಲ್ಪಿಸಲಾಗಿದೆ.
2019-20, 2020-21, 2021-22 ರಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ರಿನಿವಲ್ ಲಿಂಕ್ ಮೂಲಕ ಮತ್ತು 2023-24 ರಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಫ್ರೆಶ್ ಲಿಂಕ್ ಮೂಲಕ ನೋಂದಣಿ ಮಾಡಿ ನಂತರ ಎನ್.ಎಸ್.ಪಿ ಪೋರ್ಟಲ್ ಮೂಲಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ನ.30 ಕೊನೆಯ ದಿನವಾಗಿರುತ್ತದೆ. 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಎನ್.ಎಂ.ಎಂ.ಎಸ್ ಪರೀಕ್ಷೆಯನ್ನು ತೆಗೆದುಕೊಳ್ಳಲು ಅ.17 ರವರೆಗೆ ದಿನಾಂಕವನ್ನು ವಿಸ್ತರಿಸಲಾಗಿದೆ.
National Means-cum-Merit ಸರ್ಕಾರಿ/ಅನುದಾನಿತ ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು 9, 10, ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ವ್ಯಾಸಂಗಕ್ಕೆ ಪ್ರತಿ ವರ್ಷ ತಲಾ ರೂ.12000/- ಗಳ ವಿದ್ಯಾರ್ಥಿ ವೇತನಕ್ಕೆ ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಡಿಬಿಟಿ ಮೂಲಕ ವಿದ್ಯಾರ್ಥಿಗಳ ಖಾತೆಗೆ ಜಮಾ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಡಯಟ್ ದೂರವಾಣಿ ಸಂಖ್ಯೆ : 08182-270597, ನೋಡಲ್ ಅಧಿಕಾರಿ : 9449379952, 9844342198 ಸಂಖ್ಯೆಗೆ ಅಥವಾ ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪನಿರ್ದೇಶಕರು ಹಾಗೂ ಪ್ರಾಂಶುಪಾಲರು ತಿಳಿಸಿದ್ದಾರೆ.