State Scholarship Portal 2023-24ನೇ ಸಾಲಿನಲ್ಲಿ ವಿಕಲಚೇತನ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಅರ್ಜಿಗಳನ್ನು ಸ್ಟೇಟ್ ಸ್ಕಾಲರ್‍ಶಿಪ್ ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಸಲ್ಲಿಸಬಹುದಾಗಿರುತ್ತದೆ.
ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ 1ನೇ ತರಗತಿಯಿಂದ 10ನೇ ತರಗತಿವರೆಗೆ ವಿಕಲಚೇತನ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಅರ್ಜಿಗಳನ್ನು ಸ್ಟೇಟ್ ಸ್ಕಾಲರ್‍ಶಿಪ್ ಪೋರ್ಟಲ್ https://ssp.karnataka.gov.in ಮೂಲಕ ಮತ್ತು ಎಸ್.ಎಸ್‍ಎಲ್.ಸಿ ನಂತರದ ವಿಕಲಚೇತನ ವಿದ್ಯಾರ್ಥಿಗಳು https://ssp.postmatric.karnataka.gov.in ಮೂಲಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಹಾರ್ಡ್ ಕಾಪಿಯನ್ನು ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂಗಳಿಗೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಯು.ಆರ್.ಡಬ್ಲ್ಯೂಗಳಿಗೆ ಹಾಗೂ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂಗಳಿಗೆ ಸಲ್ಲಿಬಹುದಾಗಿದೆ.
State Scholarship Portal ಅರ್ಜಿ ಸಲ್ಲಿಸುವ ಮೊದಲು ಅರ್ಜಿ ಸಲ್ಲಿಕೆಯ ಸೂಚನೆಗಳನ್ನು ಗಮನಿಸಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ತಾಂತ್ರಿಕ ತೊಂದರೆ ಕಂಡುಬಂದಲ್ಲಿ ಸಹಾಯವಾಣಿ ಸಂಖ್ಯೆ 1902 ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆಲ್ಕೊಳ ಸರ್ಕಲ್, ಬಿಎಸ್‍ಎನ್‍ಎಲ್ ಕಚೇರಿ ಪಕ್ಕ, ಸಾಗರ ರಸ್ತೆ, ಶಿವಮೊಗ್ಗ ದೂರವಾಣಿ ಸಂಖ್ಯೆ : 08182-295234/251676 ನ್ನು ಸಂಪರ್ಕಿಸಬಹುದಾಗಿರುತ್ತದೆ ಎಂದು ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.