Monday, June 23, 2025
Monday, June 23, 2025

Chandravalli Government School ಸರ್ಕಾರಿ ಶಾಲೆ ಉಳಿಸಲು ಎಲ್ಲರೂ ಕೈಜೋಡಿಸಬೇಕು- ಅಕ್ಕ ಅನು

Date:

Chandravalli Government School ಸಮಾಜ ಸೇವೆಯಲ್ಲಿ ಮಾನವೀಯತೆಯು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಸಮಾಜ ಸೇವೆಯಲ್ಲಿ ತೊಡಗಿಕೊಂಡವರಿಗೆ ಮಾನವೀಯ ಪ್ರೇರಣೆ ಯಾಗಿರುತ್ತದೆ. ಎಂದು ಡಿ ವೈ ಎಸ್ ಪಿ ಗಜಾನನ ವಾಮನ ಸುತಾರ ಹೇಳಿದರು.

ರಿಪ್ಪನ್ ಪೇಟೆ ಪಟ್ಟಣದ ಸಮೀಪದ ಚಂದವಳ್ಳಿ ಸರ್ಕಾರಿ ಶಾಲೆಯಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವತಿಯಿಂದ ಆಯೋಜಿಸಲಾಗಿದ್ದ ಕನ್ನಡ ಶಾಲೆಯ ಅಭಿಮಾನ, ಸುಣ್ಣ ಬಣ್ಣದ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಾನವನ ಜೀವಿತದಲ್ಲಿ ಅತ್ಯಂತ ಪವಿತ್ರವಾದ ಸ್ಥಳ ಶಾಲೆಯಾಗಿದ್ದು. ಶಾಲೆಯಲ್ಲಿ ಕಲಿತ ಪಾಠ ಪ್ರವಚನಗಳು, ಬದುಕಿನ ದಿಕ್ಕನ್ನೇ ಬದಲಾಯಿಸುವಂತಹ ಅದ್ಭುತವಾದ ಶಕ್ತಿಯನ್ನು ಹೊಂದಿರುತ್ತದೆ,ಕನ್ನಡದ ಶಾಲೆಯ ಬಗ್ಗೆ ಅಭಿಮಾನವನ್ನು ಹೊಂದಿ ಅದರಲ್ಲೂ ಸರ್ಕಾರಿ ಶಾಲೆಗಳ ಬಗ್ಗೆ ಗಮನಹರಿಸಿ ಸುಣ್ಣ ಬಣ್ಣದ ಜೊತೆಗೆ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳ ಅಭಿವೃದ್ಧಿಗೆ ಸಹಕಾರ ನೀಡುತ್ತಿರುವ ಪೋಸ್ಟ್ ಮ್ಯಾನ್ ಬಳಗದ ಕನ್ನಡ ಶಾಲೆಯ ಅಭಿಮಾನ ಸುಣ್ಣ ಬಣ್ಣದ ಅಭಿಯಾನ ಕಾರ್ಯಕ್ರಮ ನಿರಂತರವಾಗಿರಲಿ ಹಾಗೆಯೇ ಅವರುಗಳು ಶೈಕ್ಷಣಿಕ ಅಭಿವೃದ್ಧಿಗೆ ಸಮಾಜಕ್ಕೆ ಸಹಕಾರ ನೀಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಸರ್ಕಾರಿ ಶಾಲೆ ಅಭಿಮಾನ ಸುಣ್ಣಬಣ್ಣ ಅಭಿಯಾನ”ಕ್ಕೆ ಅನುಕರಣೆ ಪ್ರತಿಷ್ಠಾನದ” ಮೂಲಕ ರಾಜ್ಯದ ನೂರಾರು ಶಾಲೆಯನ್ನು ಅಂದಗಾಣಿಸಿ ಯುವ ಪೀಳಿಗೆಗೆ ಆದರ್ಶವಾಗಿರುವ ಕುಮಾರಿ|| ಕೆಚ್ಚೆದೆಯ ಕನ್ನಡತಿ ಅಕ್ಕ ಅನು ಚಾಲನೆ ನೀಡಿದರು.

ನಂತರ ಮಾತನಾಡಿದ ಅಕ್ಕ ಅನು ಪೋಸ್ಟ್ ಮ್ಯಾನ್ ಸುದ್ದಿ ಬಳಗ ಆಯೋಜಿಸಿರುವ ಈ ಅಭಿಯಾನ ಯುವ ಪೀಳಿಗೆಗೆ ಮಾದರಿಯಾಬೇಕು,ಎಲ್ಲಾ ಕಾರ್ಯಕ್ರಮಗಳಿಂದ ದೂರವುಳಿಯುವ ನನಗೆ ಪೋಸ್ಟ್ ಮ್ಯಾನ್ ನ್ಯೂಸ್ ಬಳಗ ಆಯೋಜಿಸಿದ್ದ ಈ ವಿನೂತನ ಅಭಿಯಾನ ನನ್ನನ್ನು ಹೆಚ್ಚಾಗಿ ಸೆಳೆಯಿತು.ಸರ್ಕಾರಿ ಕನ್ನಡ ಶಾಲೆಗಳು ಪ್ರಸ್ತುತ ದಿನಗಳಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿವೆ.ಜನರಲ್ಲಿ ಅರಿವು ಮೂಡಿಸಬೇಕು. ಈ ಶಾಲೆಗಳಿಗೆ ದಾಖಲಾಗುವವರಲ್ಲಿ ಅತಿ ಹೆಚ್ಚಿನವರು ಬಡ ವಿದ್ಯಾರ್ಥಿಗಳಾಗಿರುವದರಿಂದ ಅವರಿಗೆ ಶಿಕ್ಷಣದ ಹಕ್ಕು ಕೊಡಿಸುವುದರ ಜತೆಗೆ ಸರ್ಕಾರಿ ಶಾಲೆ ಉಳಿಸುವ ಕೆಲಸಕ್ಕೆ ಎಲ್ಲಾರೂ ಕೈಜೋಡಿಸಬೇಕು ಎಂದು ಹೇಳಿದರು.

ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಬಂದಿದ್ದ ನಮ್ಮ ತಂಡ ಪೋಸ್ಟ್ ಮ್ಯಾನ್ ಬಳಗದೊಂದಿಗೆ ನಾಲ್ಕೈದು ಶಾಲೆಗಳ ಸುಣ್ಣ ಬಣ್ಣ ಕಾರ್ಯಕ್ರಮದಲ್ಲಿ ಕೈ ಜೋಡಿಸಲು ನಿರ್ಧರಿಸಿದ್ದೇವೆ ಎಂದರು.

ಹೊಸನಗರ ತಾಪಂ ಕಾರ್ಯ ನಿರ್ವಾಹಣಾಧಿಕಾರಿ ವೈ ನರೇಂದ್ರ ಕುಮಾರ್ ,ಕ್ರೀಯಾಶೀಲ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ ಆರ್ ಕೃಷ್ಣಮೂರ್ತಿ ಹಾಗೂ ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್,ಗ್ರಾಪಂ ಸದಸ್ಯ ಕೃಷ್ಣೋಜಿರಾವ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

Chandravalli Government School ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೋಸ್ಟ್ ಮ್ಯಾನ್ ಸುದ್ದಿ ಬಳಗದ ರಫ಼ಿ ರಿಪ್ಪನ್‌ಪೇಟೆ ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಪೋಸ್ಟ್ ಮ್ಯಾನ್ ಸುದ್ದಿಬಳಗದ ಸೆಬಾಸ್ಟಿಯನ್ ಮ್ಯಾಥ್ಯೂಸ್, ಉಮೇಶ್ ಜಾಗದ್ದೆ ,ಸಂಘ ಸಂಸ್ಥೆಗಳ ಅಧ್ಯಕ್ಷರುಗಳು, ಕೆಂಚನಾಲ ಗ್ರಾಪಂ ಸದಸ್ಯರು,ಶಾಲೆಯ ಮುಖ್ಯೋಪಾಧ್ಯಾಯ ಜಗದೀಶ್, ಚಂದಳ್ಳಿ ಗ್ರಾಮದ ಹಿರಿಯ ಮುಖಂಡರು ಇದ್ದರು.
ಶಿಕ್ಷಕಿ ತಾಜುನ್ ಬಿ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ಸಮುದಾಯಗಳ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸುವ ಉದ್ದೇಶವಿದೆ – ಮಧು ಬಂಗಾರಪ್ಪ

Madhu Bangarappa ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳ, ಅದರಲ್ಲೂ ಮುಖ್ಯವಾಗಿ ಹಿಂದುಳಿದ...

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ...