Journalist K.S. Satchidananda Murthy ಮಲಯಾಳ ಮನೋರಮಾ’ ಮತ್ತು ‘ದಿ ವೀಕ್’ ಪತ್ರಿಕೆಗಳ ಸಂಪಾದಕರಾಗಿದ್ದ ಕೆ.ಎಸ್. ಸಚ್ಚಿದಾನಂದಮೂರ್ತಿ (66 ಶುಕ್ರವಾರ ನಿಧನರಾದರು.
ಇತ್ತೀಚೆಗಷ್ಟೇ ಶ್ವಾಸಕೋಶ ಕಸಿ ಮಾಡಿಸಿಕೊಂಡಿದ್ದರು. ಆರೋಗ್ಯದ ಸ್ಥಿತಿ ಬಿಗಡಾಯಿಸಿತ್ತು. ಶೇಷಾದ್ರಿಪುರ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆ ಯುತ್ತಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.
ಕೋಲಾರ ಜಿಲ್ಲೆಯ ಅಷ್ಟ ಗ್ರಾಮದ ಸಚ್ಚಿದಾನಂದ ಮೂರ್ತಿ ಅವರು 1982ರಲ್ಲಿ ‘ದಿ ವೀಕ್ ಬೆಂಗಳೂರಿನ ವರದಿಗಾರರಾಗಿ ವೃತ್ತಿ ಆರಂಭಿಸಿದ್ದರು. 1990ರಲ್ಲಿ ದೆಹಲಿಗೆ ರಾಜಧಾನಿ ಮುಖ್ಯಸರಾಗಿ ತೆರಳಿದರು.
ಹಿರಿಯ ಪತ್ರಕರ್ತ, ‘ಮಲಯಾಳ ಮನೋರಮಾ’ ಮತ್ತು ‘ದಿ ವೀಕ್’ ಪತ್ರಿಕೆಗಳ ಮಾಜಿ ಸ್ಥಾನೀಯ ಸಂಪಾದಕರಾಗಿದ್ದ ಕೆ.ಎಸ್.ಸಚ್ಚಿದಾನಂದಮೂರ್ತಿ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.
ನನಗೆ ಆತ್ಮೀಯರು ಮತ್ತು ಹಿತೈಷಿಗಳಾಗಿದ್ದ ಸಚ್ಚಿದಾನಂದಮೂರ್ತಿಯವರು ದೆಹಲಿಯ ಮಾಧ್ಯಮರಂಗದಲ್ಲಿ ಸಕ್ರಿಯರಾಗಿದ್ದ ಕೆಲವೇ ಕೆಲವು ಹಿರಿಯ ಕನ್ನಡಿಗ ಪತ್ರಕರ್ತರಲ್ಲಿ ಒಬ್ಬರಾಗಿದ್ದರು.
ರಾಜ್ಯ-ರಾಷ್ಟ್ರಗಳ ವಿದ್ಯಮಾನಗಳ ಜ್ಞಾನಕೋಶದಂತಿದ್ದ ಸಚ್ಚಿದಾನಂದ ಮೂರ್ತಿಯವರ ಸಾವು ಮಾಧ್ಯಮರಂಗಕ್ಕೆ ತುಂಬಲಾರದ ನಷ್ಟ.
ಅವರ ಕುಟುಂಬ ಮತ್ತು ಸ್ನೇಹಿತರ ದು:ಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂತಾಪ ಸೂಚಿಸಿದ್ದಾರೆ.
Journalist K.S. Satchidananda Murthy ಸೂಕ್ಷ್ಮ, ಸಂವೇದನಾಶೀಲ ಹಾಗೂ ಜನಪರ ಪತ್ರಿಕೋದ್ಯಮದಲ್ಲಿ ಬಹುದೊಡ್ಡ ಹೆಸರಾಗಿದ್ದ ಹಿರಿಯ ಪತ್ರಕರ್ತ ಶ್ರೀ ಕೆ.ಎಸ್.ಸಚ್ಚಿದಾನಂದಮೂರ್ತಿ ಅವರ ನಿಧನದ ವಾರ್ತೆ ತಿಳಿದು ಬಹಳ ನೋವಾಯಿತು.
‘ಮಲೆಯಾಳ ಮನೋರಮಾ’ ಹಾಗೂ ‘ದಿ ವೀಕ್’ ಪತ್ರಿಕೆಗಳ ಸ್ಥಾನಿಕ ಸಂಪಾದಕರಾಗಿದ್ದ ಅವರ ಅಂಕಣ ಬರಹಗಳನ್ನು ನಾನು ಸಾಕಷ್ಟು ಓದಿದ್ದೇನೆ.
ಸಚ್ಚಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಆ ಕುಟುಂಬಕ್ಕೆ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೆಚ್. ಡಿ. ಕುಮಾರಸ್ವಾಮಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ.