Thursday, March 19, 2026
Thursday, March 19, 2026

State Contractors Association ಗುತ್ತಿಗೆದಾರರಿಗೆ ಬಾಕಿ ಇರುವ ಮೊತ್ತದಲ್ಲಿ ಶೇ 50 ರಷ್ಟನ್ನು 30 ದಿನಗಳೊಳಗೆ ಬಿಡುಗಡೆ ಮಾಡಿ- ಕೆಂಪಣ್ಣ

Date:

State Contractors Association ಗುತ್ತಿಗೆದಾರರಿಗೆ ಬಾಕಿ ಇರುವ ಮೊತ್ತದಲ್ಲಿ ಶೇ 50ರಷ್ಟನ್ನು 30 ದಿನಗಳಲ್ಲಿ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ರಾಜ್ಯ ಗುತ್ತಿಗೆದಾರರ ಸಂಘ ಎಚ್ಚರಿಸಿದೆ.

ಲೋಕೋಪಯೋಗಿ, ಜಲ ಸಂಪನ್ಮೂಲ, ಸಣ್ಣ ನೀರಾವರಿ , ಆರ್ ಡಿ ಪಿ ಆರ್ ಮತ್ತು ಬಿಬಿಎಂಪಿ ಸೇರಿದಂತೆ ಸುಮಾರು 20 ಸಾವಿರ ಕೋಟಿ ಅಧಿಕ ಬಿಲ್ ಮುಕ್ತ ಪಾವತಿಸಬೇಕಿದೆ. ಹಂತ ಹಂತವಾಗಿ ಹಣ ಬಿಡುಗಡೆ ಮಾಡಲು ಮನವಿ ಮಾಡಿದ್ದರೂ ಕ್ರಮವಾಗಿಲ್ಲ. ಹಣ ಇಲ್ಲ ಎಂದರೆ ಹೊಸ ಕಾಮಗಾರಿ ಕೈಗೊಳ್ಳಬೇಡಿ ಬಾಕಿಯನ್ನು ಮೊದಲು ಪಾವತಿ ಮಾಡಿ ಎಂದು ರಾಜ್ಯ ಘಟಕದ ಅಧ್ಯಕ್ಷರಾದ ಡಿ. ಕೆಂಪಣ್ಣ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

State Contractors Association ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಮೂರು ಬಾರಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ವಿವಿಧ ಇಲಾಖೆಯ ಸಚಿವರನ್ನೂ ಭೇಟಿ ಮಾಡಿದ್ದೇವೆ. ಆದರೂ ಗುತ್ತಿಗೆದಾರರ ಸಂಕಷ್ಟ ಅವರಿಗೆ ತಿಳಿಯುತ್ತಿಲ್ಲ. ಹೀಗಾಗಿ ಹೋರಾಟ ಅನಿವಾರ್ಯವಾಗಿದೆ’ ಎಂದರು.

ನಮ್ಮ ಪರಿಸ್ಥಿತಿ ರೈತರಿಗಿಂತ ಶೋಚನೀಯವಾಗಿದೆ. ತನಿಖೆ ಪಕ್ಕಕ್ಕಿಟ್ಟು ಬಿಲ್ ಪಾವತಿ ಮಾಡಲಿ ಎಂದು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...