Saturday, December 6, 2025
Saturday, December 6, 2025

Income Tax Deparatment ಬೆಂಗಳೂರಿನಲ್ಲಿ ₹40 ಕೋಟಿಗೂ ಆಧಿಕ ಕಪ್ಪುಹಣ ಪತ್ತೆ

Date:

Income Tax Deparatment ಬೆಂಗಳೂರು ನಗರದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಮುಂದುವರೆದಿದ್ದು ಶನಿವಾರ ನಡೆಸಿದ ದಾಳಿಯಲ್ಲಿ 40 ಕೋಟಿ ರೂಪಾಯಿಗೂ ಅಧಿಕ ಹಣ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಈ ಹಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಮಾಜಿ ಸದಸ್ಯರೊಬ್ಬರ ಸಹೋದರನ ವಿಚಾರಣೆ ನಡೆಸಲಾಗಿದೆ.

ಇಡೀ ದಿನ ರಾಜಾಜಿನಗರದ ಕೇತಮಾರನಹಳ್ಳಿಯ ಅಪಾರ್ಟ್‌ಮೆಂಟ್‌ನ ಫ್ಲಾಟ್‌ವೊಂದರ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ದಾಳಿಯ ವೇಳೆ 40 ಕೋಟಿ ರೂಪಾಯಿಗೂ ಅಧಿಕ ಹಣ ಪತ್ತೆಯಾಗಿದೆ. ಈ ಫ್ಲಾಟ್ ಬಿಲ್ಡರ್‌ ಸಂತೋಷ್‌ ಎಂಬುವವರಿಗೆ ಸೇರಿದ್ದು, ಎಂದು ತಿಳಿದುಬಂದಿದೆ.

ಸತತ 18 ಗಂಟೆಗಳ ಕಾಲ ಪರಿಶೀಲನೆ ನಡೆಸಿದ ಐಟಿ ಅಧಿಕಾರಿಗಳು 3 ಟ್ರಂಕ್, 3 ಬ್ಯಾಗ್, 1 ಸೂಟ್ ಕೇಸ್‌ಗಳಲ್ಲಿ ಹಣ, ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಅಲ್ಲದೇ ಬಿಲ್ಡರ್‌ ಸಂತೋಷ್‌ಗೆ ವಿಚಾರಣೆಗೆ ಆಗಮಿಸಲು ನೋಟಿಸ್ ನೀಡಿದ್ದಾರೆ.

Income Tax Deparatment ಅಪಾರ್ಟ್‌ಮೆಂಟ್‌ನ 5ನೇ ಮಹಡಿಯ ಫ್ಲಾಟ್‌ನಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಈ ಹಣ ವಿಧಾನ ಪರಿಷತ್‌ನ ಮಾಜಿ ಸದಸ್ಯರೊಬ್ಬರಿಗೆ ಸೇರಿದ್ದು ಎಂಬ ಮಾಹಿತಿ ಸಿಕ್ಕಿದ್ದು, ಅವರ ಸಹೋದರನನ್ನು ಫ್ಲಾಟ್‌ಗೆ ಕರೆಸಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ ಎಂಬ ಮಾಹಿತಿ ಇದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...