Tuesday, October 1, 2024
Tuesday, October 1, 2024

Dr. Selvamani  ಕನ್ನಡ ರಾಜ್ಯೋತ್ಸವಕ್ಕೆ ಪೂರ್ವಸಿದ್ಧತೆಗೆ ಡಾ.ಸೆಲ್ವಮಣಿ ಸೂಚನೆ

Date:

Dr. Selvamani  ನವೆಂಬರ್ 1 ರಂದು ನಗರದ ಡಿಎಆರ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಏರ್ಪಡಿಸಲಾಗಿದ್ದು, ಸಮಾರಂಭಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಸೂಚನೆಗಳನ್ನು ನೀಡಿದರು.

ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಸಿದ್ದತೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಸಲಹೆ-ಸೂಚನೆನಗಳನ್ನು ನೀಡಿದರು.

ಅಪರ ಜಿಲ್ಲಾಧಿಕಾರಿಗಳು, ಜಿ.ಪಂ. ಉಪ ಕಾರ್ಯದರ್ಶಿ, ಪಾಲಿಕೆ ಆಯುಕ್ತರು ಹಾಗೂ ಶಿವಮೊಗ್ಗ ತಹಶೀಲ್ದಾರರು ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ಮುದ್ರಣಗೊಂಡ ಆಹ್ವಾನ ಪತ್ರಿಕೆಗಳನ್ನು ಸಮಾರಂಭದ ಅತಿಥಿಗಳು, ಜನಪ್ರತಿನಿಧಿಗಳು, ಸರ್ಕಾರಿ ಕಚೇರಿಗಳು, ಸಂಘಸಂಸ್ಥೆಗಳು, ಕನ್ನಡ ಸಂಘಟನೆಗಳು ಹಾಗೂ ನಾಗರೀಕರಿಗೆ ಜಾರಿ ಮಾಡಲು ಸೂಚಿಸಿದರು.

ನ.1 ರ ಬೆಳಿಗ್ಗೆ 8 ಗಂಟೆಯಿಂದ ನಗರದ ಸೈನ್ಸ್ ಮೈದಾನದಿಂದ ಮೆರವಣಿಗೆ ಹೊರಡುವುದು. ಮೆರವಣಿಗೆಯಲ್ಲಿ ಪೊಲೀಸ್, ಹೋಂ ಗಾಡ್ರ್ಸ್, ಸೇವಾದಳ, ಎನ್‍ಸಿಸಿ ಬ್ಯಾಂಡ್, ಡೊಳ್ಳುಕುಣಿತ, ವೀರಗಾಸೆ, ಕೋಲಾಟ, ಭಜನೆ ಸೇರಿದಂತೆ ವಿವಿಧ ತಂಡಗಳು ಭಾಗವಹಿಸಲು ಸೂಕ್ತ ವ್ಯವಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ತಲಾ ಎರಡು ಕಲಾ ತಂಡಗಳನ್ನು ಕಳುಹಿಸಿಕೊಂಡುವಂತೆ ತಿಳಿಸಿದರು.

ಭುವನೇಶ್ವರಿ ದೇವಿ ಪ್ರತಿಮೆ ಅಲಂಕಾರ ಮತ್ತು ವಾಹನ ವ್ಯವಸ್ಥೆಯನ್ನು ಪಾಲಿಕೆ ಆಯುಕ್ತರು ಮಾಡಬೇಕು. ಧ್ವಜಾರೋಹಣಕ್ಕೆ ಅಗತ್ಯ ವ್ಯವಸ್ಥೆಗಳಾದ ಧ್ವಜ, ಧ್ವಜಸ್ತಂಭ, ವೇದಿಕೆ ಅಲಂಕಾರ ಇತ್ಯಾದಿ ವ್ಯವಸ್ಥೆಯನ್ನು ಪಾಲಿಕೆ ಆಯುಕ್ತರು, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಪೊಲೀಸ್ ಕಚೇರಿ ವತಿಯಿಂದ ಕೈಗೊಳ್ಳಬೇಕು. ಸ್ವಾಗತ ಕಮಾನು, ಹೂವಿನ ತೋರಣ, ಅತಿಥಿ ಸತ್ಕಾರ, ಪೂರ್ವ ಸಿದ್ದತೆಯನ್ನು ಸಾರಿಗೆ ಉಪ ಆಯುಕ್ತರು, ನಿರ್ಮಿತಿ ಕೇಂದ್ರ ಮತ್ತು ಜಿಲ್ಲಾ ಯುವಜನ ಸಬಲೀಕರಣ ಇಲಾಖೆಯವರು ನಿರ್ವಹಿಸಬೇಕು.

ಕೃಷಿ ಇಲಾಖೆ, ಪಾಲಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಪ್ರವಾಸೋದ್ಯಮ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ, ಕೆಎಸ್‍ಆರ್‍ಟಿಸಿ, ಆರೋಗ್ಯ ಇಲಾಖೆಯವರು ಟ್ಯಾಬ್ಲೋಗಳನ್ನು ತಯಾರಿಸಿ ಪ್ರದರ್ಶಿಸುವಂತೆ ಸೂಚಿಸಿದರು.

ಶಾಲಾ ಮಕ್ಕಳನ್ನು ಮೆರವಣಿಗೆಯಲ್ಲಿ ಕರೆತರಲು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು, ರೂಟ್ ಮ್ಯಾಪ್ ತಯಾರಿಸಿ ನಿರ್ವಹಿಸಬೇಕು. ಹಾಗೂ ಮಕ್ಕಳ ಸಾಂಸ್ಕoತಿಕ ಕಾರ್ಯಕ್ರಮಗಳಿಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು. ಮೈದಾನದಲ್ಲಿ ಷಾಮಿಯಾನ, ಉತ್ತಮ ಸೌಂಡ್ ಸಿಸ್ಟಂ ಇತರೆ ವ್ಯವಸ್ಥೆಯನ್ನು ಲೋಕೋಪಯೋಗಿ ಇಲಾಖೆ, ಆಸನ ವ್ಯವಸ್ಥೆಯನ್ನು ತಹಶೀಲ್ದಾರರು, ಪಾಲಿಕೆಯವರು ಸ್ವಚ್ಚತೆ ಹಾಗೂ ಕುಡಿಯು ನೀರಿನ ವ್ಯವಸ್ಥೆಯನ್ನು ಪಾಲನೆ ಮತ್ತು ನಿರ್ವಹಣೆ ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಿ ಹಂಚಿಕೆಯನ್ನು ಶಿಮುಲ್, ಪಾಲಿಕೆ, ಡಿಡಿಪಿಐ ನೋಡಿಕೊಳ್ಳುವಂತೆ ತಿಳಿಸಿದರು.

ಪ್ರಮುಖ ರಸ್ತೆಯ ವೃತ್ತಗಳಿಗೆ ವಿದ್ಯುತ್ ಅಲಂಕಾರವನ್ನು ಮೆಸ್ಕಾಂ, ಪಾಲಿಕೆ ಆಯುಕ್ತರು, ಸೂಡಾ ಆಯುಕ್ತರು ಹಾಗೂ ಧ್ವನಿ ವರ್ಧಕದ ಮೂಲಕ ಕನ್ನಡ ದೇಶಭಕ್ತಿ ಗೀತೆಗಳನ್ನು ಪ್ರಸಾರ ಮಾಡುವ ವವಸ್ಥೆಯನ್ನು ಅಬಕಾರಿ ಇಲಾಖೆ, ನೋಂದಣಿ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯವರು ನೋಡಿಕೊಳ್ಳಬೇಕೆಂದು ತಿಳಿಸಿದರು.

Dr. Selvamani  ಸಂಜೆಯ ಸಾಂಸ್ಕoತಿಕ ಕಾರ್ಯಕ್ರಮಗಳು ಕುವೆಂಪು ರಂಗಮಂದಿರದಲ್ಲಿ ನಡೆಯಲಿದ್ದು ಸಾರ್ವಜನಿಕ ಶಿಕ್ಷಣ ಇಲಾಖೆ, ಪಾಲಿಕೆ ಆಯುಕ್ತರು ನಿರ್ವಹಿಸಬೇಕು. ಆಂಬುಲೆನ್ಸ್ ಮತ್ತು ಅಗ್ನಿಶಾಮಕ ವಾಹನ ವ್ಯವಸ್ಥೆಯನ್ನು ಜಿಲ್ಲಾ ಸರ್ಜನ್ನರು ಹಾಗೂ ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ನಿರ್ವಹಿಸುವಂತೆ ಸೂಚಿಸಿದ ಅವರು ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು, ಕಚೇರಿ ಸಿಬ್ಬಂದಿ ವರ್ಗದವರು ಸಮಾರಂಭಕ್ಕೆ ಹಾಜರಾಗುವಂತೆ ಸೂಚಿಸಿದರು.

ಸಭೆಯಲ್ಲಿ ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಅಪರ ಪೊಲೀಸ್ ವರಿಷ್ಟಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ, ಎಸಿ ಸತ್ಯನಾರಾಯಣ್, ಡಿಎಆರ್, ಕೆಎಸ್‍ಆರ್‍ಪಿ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...