Tuesday, October 1, 2024
Tuesday, October 1, 2024

Mahatma Gandhi National Rural Employment Scheme ಜಿಲ್ಲೆಯಾದ್ಯಂತ ನರೇಗಾ ಯೋಜನೆ ಬಗ್ಗೆ ಗ್ರಾಮಗಳಲ್ಲಿ ಮನಮನೆ ಜಾಥಾ

Date:

Mahatma Gandhi National Rural Employment Scheme ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2024-25ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ಉದ್ದೇಶದಿಂದ ದಿನಾಂಕ: 02.10.2023 ರಿಂದ ಒಂದು ತಿಂಗಳ ಅವಧಿಗೆ “ಮನೆ ಮನೆ ಜಾಥಾ” ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಮನೆಗೆ ಭೇಟಿ ನೀಡಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಕುರಿತು ಮಾಹಿತಿಯನ್ನು ಜನರಿಗೆ ನೀಡಿ ಬೇಡಿಕೆಯನ್ನು ಸಂಗ್ರಹಿಸಲಾಗುತ್ತಿದೆ ಎಂದು ಜಿ.ಪಂ. ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ತಿಳಿಸಿದ್ದಾರೆ.

  • ನರೇಗಾ ಯೋಜನೆಯಡಿ ದೊರೆಯುವ ಕೂಲಿಯ ಮೊತ್ತ. ರೂ. 316/-
  • ಗಂಡು ಹೆಣ್ಣಿಗೆ ಸಮಾನ ಕೂಲಿ
  • ಒಂದು ದಿನದ ಕೂಲಿ ಪಡೆಯಲು ಮಾಡಬೇಕಾದ ಕೆಲಸ ಪ್ರಮಾಣ ಮತ್ತು ಕೆಲಸ ಅವಧಿ
  • ಯೋಜನೆಯಡಿ ದೊರೆಯುವ ವೈಯಕ್ತಿಕ ಸೌಲಭ್ಯಗಳು ಮತ್ತು ಅರ್ಹತೆಗಳು
  • ಕಾಮಗಾರಿ ಪ್ರಮಾಣದಲ್ಲಿ ಹಿರಿಯ ನಾಗರೀಕರಿಗೆ ಮತ್ತು ವಿಶೇಷ ಚೇತನರಿಗೆ ಶೇ.50 ರಷ್ಟು ರಿಯಾಯಿತಿ
  • ಕಾಮಗಾರಿ ಸ್ಥಳದಲ್ಲಿ ಒದಗಿಸಲಾಗುವ ಸೌಲಭ್ಯಗಳು
  • ಅಕುಶಲ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರುಗಳಿಗೆ ನಿರ್ವಹಿಸುವ ಕೆಲಸಕ್ಕೆ / ಕೂಲಿ ಕಾರ್ಮಿಕರಿಗೆ ಹೆಚ್ಚುವರಿಯಾಗಿ ಶೇ.20 ರಷ್ಟು ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ನೀಡುವ ಕುರಿತು. ಈ ಮೂಲಕ ಮಹಿಳಾ ಭಾಗವಹಿಸುವಿಕೆಯನ್ನು ಶೇ. 60 ಪ್ರತಿಶತಕ್ಕೆ ಹೆಚ್ಚಿಸುವುದು.
  • ಜಲ ಸಂಜೀವಿನಿ ಕಾರ್ಯಕ್ರಮದಡಿ ವೈಜ್ಞಾನಿಕ ಯೋಜನಾ ವರದಿ ತಯಾರಿಕೆ ಮತ್ತು ಅನುಷ್ಠಾನದ ಮಹತ್ವ ಹಾಗೂ ಅಗತ್ಯತೆ ಬಗ್ಗೆ ತಿಳಿಸಲಾಗುತ್ತಿದೆ.

ಪ್ರತಿ ಮನೆಗೂ ಭೇಟಿ ನೀಡುವುದರ ಜೊತೆಗೆ ದಿನಾಂಕ : 02-10-2023 ರಿಂದ
ದಿನಾಂಕ: 31.10.2023ರವರೆಗೆ ನಿರಂತರವಾಗಿ ಜಾಗೃತಿ ವಾಹನದ (ಧ್ವನಿ ವರ್ಧಕ) ಮೂಲಕ ಗ್ರಾಮಸ್ಥರು, ಹಿರಿಯ ನಾಗರಿಕರು, ಮಹಿಳೆಯರು, ದುರ್ಬಲ ವರ್ಗದವರು, ಲಿಂಗತ್ವ ಅಲ್ಪಸಂಖ್ಯಾತರು, ಸ್ವ-ಸಹಾಯ ಸಂಘಗಳು ಹಾಗೂ ರೈತರಿಗೆ ಯೋಜನೆಯಡಿ ಸಿಗುವ ಸೌಲಭ್ಯಗಳ ಕುರಿತು ಮತ್ತು ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯ “ಜಲ ಸಂಜೀವಿನಿ” ಕಾರ್ಯಕ್ರಮದ ಮಹತ್ವದ ಬಗ್ಗೆ ಪ್ರಚಾರ ಆಂದೋಲನ ಕೈಗೊಳ್ಳಲಾಗುತ್ತಿದೆ.

ಕಾಮಗಾರಿಗಳ ಬೇಡಿಕೆ ಅರ್ಜಿಗಳನ್ನು ಸ್ವೀಕರಿಸಲು ಜಾಗೃತಿ ವಾಹನದಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಮತ್ತು ಗ್ರಾಮ ಪಂಚಾಯತಿಯಲ್ಲಿ ಕಾಮಗಾರಿ ಬೇಡಿಕೆ ಪೆಟ್ಟಿಗೆಯನ್ನಿಟ್ಟು ದಿನಾಂಕ: 31.10.2023 ರವರೆಗೆ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ.
ರೈತರಿಂದ ರೈತರಿಗಾಗಿ ಅಭಿಯಾನ:

Mahatma Gandhi National Rural Employment Scheme ಮಹಾತ್ಮಗಾಂಧಿ ನರೇಗಾ ಯೋಜನೆಯ ಮಾರ್ಗಸೂಚಿಯಂತೆ ಒಟ್ಟು ವೆಚ್ಚದ ಶೇ.60 ರಷ್ಟನ್ನು ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳಿಗೆ ಖರ್ಚು ಮಾಡಬೇಕಾಗಿದ್ದು, ವೈಯಕ್ತಿಕ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಫಲಾನುಭವಿಗಳ ಆಯ್ಕೆಯನ್ನು ಸರಳಗೊಳಿಸುವ ಉದ್ದೇಶದಿಂದ “ಜಲ ಸಂಜೀವಿನಿ” ಯಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡ, ಬಿ.ಪಿ.ಎಲ್ ಕುಟುಂಬಗಳು, ಸಣ್ಣ ಮತ್ತು ಅತಿ ಸಣ್ಣ ರೈತರು, ಅಂಗವಿಕಲರು ಸೇರಿದಂತೆ ಮಹಾತ್ಮಗಾಂಧಿ ನರೇಗಾ ಅಧಿನಿಯಮದ ಅನುಸೂಚಿ-1, ಪ್ಯಾರಾ 5 ರಲ್ಲಿ ವಿವರಿಸಿರುವ ಎಲ್ಲಾ ವರ್ಗದ ಅರ್ಹ ಫಲಾನುಭವಿಗಳಗೆ ಯೋಜನೆಯಡಿ ಸೌಲಭ್ಯ ಕಲ್ಪಿಸಲಾಗುವುದು.

ಜಲಾನಯನ ಮಾದರಿಯಲ್ಲಿ ಕಾಮಗಾರಿಗಳ ಅನುಷ್ಠಾನದ ಹಂತದಲ್ಲಿ, ಫಲಾನುಭವಿಯು/ಕುಟುಂಬವು ಜೀವಿತಾವಧಿಯಲ್ಲಿ ರೂ.2.50 ಲಕ್ಷಗಳ ಮಿತಿಯೊಳಗೆ ತನಗೆ ಬೇಕಾದ ವೈಯಕ್ತಿಕ ಕಾಮಗಾರಿಗಳನ್ನು ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ.

“ಮನೆ ಮನೆ ಜಾಥಾ” ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಮನೆಗೆ ಭೇಟಿ ನೀಡಿ ಕೂಲಿ ಮತ್ತು ಕಾಮಗಾರಿ ಬೇಡಿಕೆ ಪಡೆಯುವ ಮೂಲಕ ಎಸ್‍ಸಿ, ಎಸ್‍ಟಿ ಸೇರಿದಂತೆ ದುರ್ಬಲ ವರ್ಗದವರಿಗೆ, ರೈತರಿಗೆ, ಮಹಿಳೆ/ ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಗತ್ಯ ಕ್ರವಹಿಸಿ ಅಭಿಯಾನವನ್ನು ಯಶಸ್ವಿಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...