Thursday, March 19, 2026
Thursday, March 19, 2026

CM Siddharamaih ಕನ್ನಡದ ಅನಿವಾರ್ಯತೆಯನ್ನು ಸೃಷ್ಟಿಸುವ ಅಗತ್ಯವಿದೆ- ಸಿದ್ಧರಾಮಯ್ಯ

Date:

CM Siddharamaih ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಸಂಭ್ರಮ 50ರ ಲಾಂಛನವನ್ನು ಬಿಡುಗಡೆಗೊಳಿಸಿ ಸಿಎಂ ಸಿದ್ದರಾಮಯ್ಯನವರು ಮಾತನಾಡಿದರು.

CM Siddharamaih ಕರ್ನಾಟಕದಲ್ಲಿ ಕನ್ನಡವನ್ನು ಮಾತನಾಡುವಂತಹ ವಾತಾವರಣ, ಕನ್ನಡದ ಅನಿವಾರ್ಯತೆಯನ್ನು ಸೃಷ್ಟಿಸುವ ಅಗತ್ಯವಿದೆ. ನಾವೆಲ್ಲರೂ ಕನ್ನಡಿಗರು, ಕರ್ನಾಟಕದ ಏಕೀಕರಣವಾದಾಗಿನಿಂದ ವಿವಿಧ ಭಾಷೆಗಳನ್ನು ಮಾತನಾಡುವ ಜನರು ಕನ್ನಡ ನಾಡಿನಲ್ಲಿ ನೆಲೆಸಿದ್ದಾರೆ. ಈ ನಾಡಿನಲ್ಲಿ ವಾಸಿಸುವ ಪ್ರತಿಯೊಬ್ಬರೂ ಕೂಡ ಕನ್ನಡ ಭಾಷೆ ಮಾತನಾಡುವುದನ್ನು ಕಲಿಯಬೇಕು. ತಮಿಳುನಾಡು, ಕೇರಳ, ತೆಲಂಗಾಣ, ಉತ್ತರಪ್ರದೇಶ ರಾಜ್ಯಗಳಲ್ಲಿ ಅಲ್ಲಿನ ಭಾಷೆ ಕಲಿಯದೇ ಕನ್ನಡ ಮಾತನಾಡಿಕೊಂಡು ಬದುಕಲು ಸಾಧ್ಯವಿಲ್ಲ. ಆದರೆ ಕರ್ನಾಟಕದಲ್ಲಿ ಕನ್ನಡ ಬಾರದೇ ಇದ್ದರೂ ಬದುಕಬಹುದು. ಇದೇ ನಮ್ಮ ರಾಜ್ಯಕ್ಕೂ ಹಾಗೂ ಪಕ್ಕದ ರಾಜ್ಯಗಳಿಗೂ ಇರುವ ವ್ಯತ್ಯಾಸ ಎಂದರು.

ಕರ್ನಾಟಕ ಏಕೀಕರಣವಾದದ್ದು 1956 ನವೆಂಬರ್ 1 ರಂದು. ಕರ್ನಾಟಕ ಏಕೀಕರಣಕ್ಕೂ ಮುನ್ನ ಅನೇಕ ರಾಜ್ಯಗಳಲ್ಲಿ ಕನ್ನಡ ನಾಡು ಹರಿದು ಹಂಚಿಹೋಗಿದ್ದವು. ಭಾಷಾವಾರು ಪ್ರಾಂತ್ಯ ವಿಂಗಡನೆ ಘೋಷಣೆಯಾದ ಮೇಲೆ ಕರ್ನಾಟಕ ಏಕೀಕರಣವಾಗಬೇಕೆಂದು ಆಲೂರು ವೆಂಕಟರಾಯರ ನೇತೃತ್ವದಲ್ಲಿ ಅನೇಕರು ಏಕೀಕರಣಕ್ಕಾಗಿ ಹೋರಾಟ ಮಾಡಿದರು. ಸಾಂಪ್ರದಾಯಿಕವಾಗಿ ರಾಜ್ಯೋತ್ಸವ ಆಚರಿಸಿಕೊಂಡು ಬರುತ್ತಿದ್ದರೂ ಮೈಸೂರು ರಾಜ್ಯವೆಂದೇ ಕರೆಯಲಾಗುತ್ತಿತ್ತು. ಮೈಸೂರು ರಾಜವಂಶಸ್ಥರು ಆಳಿದ್ದರಿಂದ ಆ ಹೆಸರಿತ್ತು. ವಿಶಾಲ ಕರ್ನಾಟಕವಾದ ನಂತರ ಮುಂಬೈ ಕರ್ನಾಟಕ, ಆಂಧ್ರ, ತಮಿಳುನಾಡು ರಾಜ್ಯಗಳಿಂದ ಹಲವು ಪ್ರದೇಶಗಳು ಒಗ್ಗೂಡಿ ಕರ್ನಾಟಕವಾಯಿತು. ದೇವರಾಜ ಅರಸು ಅವರು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ 1973 ನವೆಂಬರ್ 01, ರಂದು ಕರ್ನಾಟಕ ಎಂದು ಮರುನಾಮಕರಣವಾಯಿತು. ಕರ್ನಾಟಕ ಗತವೈಭವ ಎಂಬ ಆಲೂರು ವೆಂಕಟರಾಯರ ಪುಸಕ್ತದಿಂದ ಆಯ್ದು ಅಖಂಡ ಕರ್ನಾಟಕಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...