Monday, February 2, 2026
Monday, February 2, 2026

Meri Maati Mera Desh ‘ನನ್ನ ಮಣ್ಣು ನನ್ನ ದೇಶ’ ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು-ಡಾ.ಪಿ.ಆರ್.ಮಮತಾ

Date:

Meri Maati Mera Desh ದೇಶದ ವಿವಿಧ ರಾಜ್ಯಗಳಲ್ಲಿ ಜನರು ತೊಡುವ ಉಡುಪುಗಳು ವೈವಿಧ್ಯಮಯ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುತ್ತದೆ. ಶ್ರೇಷ್ಠ ಸಂಸ್ಕೃತಿ ಪರಂಪರೆ ಹೊಂದಿರುವ ದೇಶ ಭಾರತ ಎಂದು ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಪ್ರಾಚಾರ್ಯೆ ಪ್ರೊ. ಮಮತಾ ಪಿ.ಆರ್. ಹೇಳಿದರು.

ಶಿವಮೊಗ್ಗ ನಗರದ ಎಟಿಎನ್‌ಸಿಸಿ ಕಾಲೇಜಿನ ಚಂದನ ಸಭಾಂಗಣದಲ್ಲಿ ಆಯೋಜಿಸಿದ್ದ ನನ್ನ ಮಣ್ಣು ನನ್ನ ದೇಶ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿ, ಮೇರಾ ಮಿಟ್ಟಿ ಮೇರಾ ದೇಶ್ ಅಭಿಯಾನವು ದೇಶಾದ್ಯಾಂತ ಯಶಸ್ವಿಯಾಗಿ ನಡೆಯುತ್ತಿದೆ ಎಂದು ತಿಳಿಸಿದರು.

ಭಾರತ ದೇಶವು 75ನೇ ಸ್ವಾತಂತ್ರ್ಯ ವರ್ಷದ ಸಂಭ್ರಮ ಆಚರಣೆ ಪ್ರಯುಕ್ತ ಆಜಾದಿ ಕಾ ಅಮೃತ ಮಹೋತ್ಸವ ನಡೆಸುತ್ತಿದ್ದು, ಇದರ ಭಾಗವಾಗಿ ನನ್ನ ಮಣ್ಣು ನನ್ನ ದೇಶ ( ಮೇರಾ ಮಿಟ್ಟಿ ಮೇರಾ ದೇಶ ) ಅಭಿಯಾನ ನಡೆಸಲಾಗುತ್ತಿದ್ದು, ದೇಶದ ಪ್ರತಿಯೊಬ್ಬರು ಅಭಿಯಾನದಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.

ಆಗಸ್ಟ್ ತಿಂಗಳಲ್ಲಿ ದೇಶದ ವಿವಿಧ ಪ್ರದೇಶಗಳಿಂದ ಸಂಗ್ರಹಿಸಲಾದ ಮಣ್ಣನ್ನು ಬಳಸಿಕೊಂಡು ದೆಹಲಿಯಲ್ಲಿ ಕರ್ತವ್ಯ ಪಥದ ಉದ್ದಕ್ಕೂ ಅಮೃತ ವಾಟಿಕಾ ಎನ್ನುವ ಹೆಸರಿನಲ್ಲಿ ಉದ್ಯಾನವನ ಅಭಿವೃದ್ಧಿಪಡಿಸುವ ಗುರಿಯನ್ನು ಅಭಿಯಾನವು ಒಳಗೊಂಡಿದೆ ಎಂದು ತಿಳಿಸಿದರು.

ಪಂಚಾಯಿತಿ, ಗ್ರಾಮ, ಬ್ಲಾಕ್, ಪಟ್ಟಣ, ನಗರ ಸ್ಥಳೀಯ ಸಂಸ್ಥೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಸ್ವಾತಂತ್ರ್ಯ ಹೋರಾಟಗಾರರು ಮತ್ತು ರಕ್ಷಣಾ ಸಿಬ್ಬಂದಿ ಸೇರಿ ಅತ್ಯುನ್ನತ ತ್ಯಾಗ ಮಾಡಿದವರ ಹೆಸರನ್ನು ಹೊಂದಿರುವ ಸ್ಮಾರಕ ಫಲಕವನ್ನು ಸ್ಥಾಪಿಸುವುದು ಸಹ ಇರಲಿದೆ ಎಂದರು.

Meri Maati Mera Desh ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಎಟಿಎನ್‌ಸಿಸಿ ಕಾಲೇಜಿನ ಪ್ರೊ. ಎಸ್.ಜಗದೀಶ್, ಪ್ರೊ. ಕೆ.ಎಂ.ನಾಗರಾಜು, ಪ್ರೊ. ಮಂಜುನಾಥ್.ಎನ್. ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...