Monday, December 15, 2025
Monday, December 15, 2025

Kuvempu University ಶಿವಮೊಗ್ಗದಲ್ಲಿ ನನ್ನ ಮಣ್ಣು ನನ್ನ ದೇಶಅಮೃತ ಕಳಶ ಅಭಿಯಾನ

Date:

Kuvempu University ಮೇರಿ ಮಾಟಿ ಮೇರಾದೇಶ್ ಅಮೃತ ಕಳಶ ಯಾತ್ರೆಯು ದೇಶದ್ಯಾಂತ ಒಂದು ಪ್ರಮುಖ ಕಾರ್ಯಕ್ರಮವಾಗಿದ್ದು, ಎಲ್ಲಾ ಹಳ್ಳಿಯ ಮಣ್ಣನ್ನು ಸಂಗ್ರಹಿಸಿ ದೆಹಲಿಯ ಕರ್ತವ್ಯ ಪಥ್‍ನಲ್ಲಿ ಉದ್ಯಾನವನ ನಿರ್ಮಿಸಲಾಗುವುದು ಎಂದು ಬಿ.ವೈ ರಾಘವೇಂದ್ರರವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನೆಹರುಯುವ ಕೇಂದ್ರ, ತಾಲ್ಲೂಕು ಪಂಚಾಯತ್, ಶಿವಮೊಗ್ಗ, ರಾಷ್ಟ್ರೀಯ ಸೇವಾ ಯೋಜನೆ, ಕುವೆಂಪು ವಿಶ್ವವಿದ್ಯಾಲಯ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಭಾರತೀಯ ಅಂಚೆ ಇಲಾಖೆ, ಕೇಂದ್ರ ಸಂವಹನ ಇಲಾಖೆ,,ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಶಿವಮೊಗ ಇತರೆ ಇಲಾಖೆಗಳು, ವಿವಿಧ ಸಂಘ-ಸಂಸ್ಥೆಗಳು ಇವರ ಸಹಯೋಗದೊಂದಿಗೆ ದಿ: 20.10.2023 ರಂದು ನೆಹರು ಯುವ ಕೇಂದ್ರ, ತಾಲ್ಲೂಕು ಪಂಚಾಯತ್ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮೇರಿ ಮಾಟಿ ಮೇರಾದೇಶ್ ಅಮೃತ ಕಳಶ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.

ಹಳ್ಳಿ, ಹಳ್ಳಿಗಳಿಂದ ಮಣ್ಣು ಸಂಗ್ರಹಿಸಿ ಉದ್ಯಾನವನ ನಿರ್ಮಿಸುವ ಈ ಪುಣ್ಯದ ಕೆಲಸದಲ್ಲಿ ನಾವೆಲ್ಲರೂ ಕೈ ಜೋಡಿಸೋಣ ಎಂದು ಹೇಳಿ ಎಲ್ಲರಿಗೂ ದಸರಾ ಮತ್ತು ವಿಜಯದಶಮಿ ಹಬ್ಬದ ಶುಭಾಶಯವನ್ನು ತಿಳಿಸಿದರು.

ಮೆರವಣಿಗೆಯು ತಾಲ್ಲೂಕು ಪಂಚಾಯತ್ ಕಚೇರಿಯಿಂದ ಹೊರಟು ಡಿ.ಸಿ ಕಚೇರಿ ಮುಂಭಾಗದಿಂದ ಕೋರ್ಟ್ ರಸ್ತೆ ಮೂಲಕ ನೆಹರು ಒಳಾಂಗಣ ಕ್ರೀಡಾಂಗಣಕ್ಕೆ ತಲುಪಿತು. ಇದೇ ಸಂದರ್ಭದಲ್ಲಿ ನಂತರ ಎಲ್ಲರೂ ಪಂಚಪ್ರಾಣ ಪ್ರತಿಜ್ಞೆಯನ್ನುತೆಗೆದು ಕೊಳ್ಳಲಾಯಿತು.

ಶಿವಮೊಗ್ಗದ 7 ತಾಲ್ಲೂಕಿನ ತಾಲ್ಲೂಕು ಮಟ್ಟದ ಮೇರಿ ಮಾಟಿ ಮೇರಾದೇಶ್ ಅಮೃತ ಕಳಶ ಯಾತ್ರೆಯು ಮುಗಿದ ನಂತರ ಆ ಕಳಶವನ್ನು ನೆಹರು ಯುವ ಕೇಂದ್ರಕ್ಕೆ ಹಸ್ತಾಂತರಿಸಲಾಗುತ್ತದೆ. ನಂತರ ಈ ಕಳಶವನ್ನು ರಾಷ್ಟ್ರೀಯ ಯುವ ಕಾರ್ಯಕರ್ತರುಗಳು ದೆಹಲಿಗೆ ತೆಗೆದುಕೊಂಡು ಹೋಗುತ್ತಾರೆ. ಅಮೃತ ಕಳಶ ಯಾತ್ರೆಯ ರಾಷ್ಟ್ರಮಟ್ಟದ ಕಾರ್ಯಕ್ರಮವನ್ನು ದೆಹಲಿಯಲ್ಲಿ ಅಕ್ಟೋಬರ್ ತಿಂಗಳಿನ ಕೊನೆಯಲ್ಲಿ ಹಮ್ಮಿಕೊಳ್ಳಲಾಗುವುದು. ಈ ಮಣ್ಣಿನಿಂದದೆ ಹಲಿಯಲ್ಲಿ ಅಮೃತ ವಾಟಿಕಾ (ಉದ್ಯಾನವನ) ಮತ್ತು ಆಜಾದಿ ಕಾ ಅಮೃತ ಮಹೋತ್ಸವ ಸ್ಮಾರಕವನ್ನು ಕರ್ತವ್ಯ ಪಥ್, ಇಂಡಿಯಾಗೇಟ್‍ನಲ್ಲಿ ಸ್ಥಾಪಿಸಲಾಗುವುದು.

Kuvempu University ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್‍ಚನ್ನಬಸಪ್ಪ, ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಡಾ. ಸೆಲ್ವಮಣಿಆರ್. ಜಿ.ಪಂ ಸಿಇಓ ಲೋಕಂಡೆ ಸ್ನೇಹಲ್ ಸುಧಾಕರ್, ತಾ,ಪಂ ಇಓ ಅವಿನಾಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್, ನೆಹರು ಯುವಕೇಂದ್ರದ, ಜಿಲಾ ಯುವ ಅಧಿಕಾರಿ ಉಲ್ಲಾಸ್, ಶಿವಮೊಗ್ಗ ತಾಲ್ಲೂಕಿನ ಗ್ರಾ.ಪಂ ಪಿಡಿಓ ಗಳು, ಕಾಲೇಜುಗಳ ಎನ್‍ಎಸ್‍ಎಸ್ ವಿಭಾಗದ ಅಧಿಕಾರಿಗಳು ಮತ್ತು ಕಾರ್ಯಕರ್ತರುಗಳು, ಮಹಿಳಾ ಸಂಘದಸದಸ್ಯರುಗಳು,ಕಾಲೇಜು ವಿದ್ಯಾರ್ಥಿಗಳು, ರಾಷ್ಟ್ರೀಯ ಯುವಕಾರ್ಯಕರ್ತರುಗಳು ಸರಿಸುಮಾರು 1000 ಕ್ಕೂ ಹೆಚ್ಚು ಜನರು ಅಮೃತ ಕಳಶ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...