Wednesday, April 23, 2025
Wednesday, April 23, 2025

DVS College Shivamogga ರಕ್ತದಾನವು ಜೀವ ಉಳಿಸುವ ಪುಣ್ಯದ ಕೆಲಸ-ಡಾ.ಎಂ.ವೆಂಕಟೇಶ್

Date:

DVS College Shivamogga ಅಪಘಾತ ಸಂದರ್ಭಗಳಲ್ಲಿ ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಹಾಗೂ ಪ್ರಥಮ ಚಿಕಿತ್ಸೆ ನೀಡುವ ಸಾಮಾನ್ಯ ಅರಿವನ್ನು ಸಮಾಜದ ಪ್ರತಿಯೊಬ್ಬ ವ್ಯಕ್ತಿಯು ಹೊಂದಿರಬೇಕು ಎಂದು ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಹೇಳಿದರು.

ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಿಂಗಾರ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕದ ವತಿಯಿಂದ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಕ್ತದಾನವು ಜೀವ ಉಳಿಸುವ ಪುಣ್ಯದ ಕೆಲಸ ಆಗಿದ್ದು, ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯು ರಕ್ತದಾನ ಮಾಡಲು ಮುಂದಾಗಬೇಕು. ಯುವಜನರು ರಕ್ತದಾನದಿಂದ ಆಗುವ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು. ಯುವಜನತೆ ಹೆಚ್ಚು ಹೆಚ್ಚು ರಕ್ತದಾನ ಮಾಡಬೇಕು ಎಂದು ತಿಳಿಸಿದರು.

ಜಿಲ್ಲಾ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಟಿ.ಎನ್.ಚಂದ್ರಶೇಖರ್ ಮಾತನಾಡಿ, ಯುವಜನತೆ ರಕ್ತದಾನದ ಬಗ್ಗೆ ಯಾವುದೇ ಭಯ ಹೊಂದಬಾರದು. ರಕ್ತದಾನದ ಬಗ್ಗೆ ಯಾವುದೇ ಗೊಂದಲಗಳಿದ್ದಲ್ಲಿ ವೈದ್ಯರ ಬಳಿ ಸಮಾಲೋಚಿಸಿ ಮಾರ್ಗದರ್ಶನ ಪಡೆದುಕೊಳ್ಳಬೇಕು. ಆರೋಗ್ಯವಂತ ವ್ಯಕ್ತಿ ವರ್ಷಕ್ಕೆ 3-4 ಬಾರಿ ರಕ್ತದಾನ ಮಾಡಬಹುದಾಗಿದೆ ಎಂದು ಮಾಹಿತಿ ನೀಡಿದರು.

ಸ್ವಯಂ ಪ್ರೇರಿತರಾಗಿ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿರುವ ಸುರೇಶ್ ಬಿ.ಎಸ್., ಮೋಹನಕೃಷ್ಣ ಜಿ.ವಿ., ಪದ್ಮಿನಿ ಕೆ.ಎಸ್. ಹಾಗೂ ಪವನ್ಕುಮಾರ್ ಅವರನ್ನು ಅಭಿನಂದಿಸಲಾಯಿತು.

DVS College Shivamogga ರಕ್ತದಾನ ಮಾಡುವುದರಿಂದ ಆರೋಗ್ಯ ಉತ್ತಮವಾಗಿ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ. ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡಲು ಮುಂದಾಗಬೇಕು ಎಂದು ಸನ್ಮಾನಿತರು ಅನಿಸಿಕೆ ವ್ಯಕ್ತಪಡಿಸಿದರು.

ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆ ಜಿಲ್ಲಾ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ವೀಣಾ ಎಸ್., ಆಪ್ತ ಸಮಾಲೋಚಕ ಪುಲಿಗೇಶ್, ಡಾ. ಗುರುನಾಥ್, ಹನುಮಂತಪ್ಪ, ಶ್ರೀಧರ್, ಶ್ರೀನಿವಾಸ್, ಎನ್ಎಸ್ಎಸ್ ಅಧಿಕಾರಿ ಮಲ್ಲಿಕಾರ್ಜುನ್, ಬೋಧಕ ವರ್ಗ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ತಾಲ್ಲೂಕುಗಳಲ್ಲಿ ಜನಸ್ಪಂದನ ಕಾರ್ಯಕ್ರಮ- ಮಧು ಬಂಗಾರಪ್ಪ

Madhu Bangarappa ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು...

Fisheries project 2024-25ನೇ ಸಾಲಿನ ಮತ್ಸ್ಯಸಂಪದ ಯೋಜನೆಗೆ ಅರ್ಹರಿಂದ ಅರ್ಜಿ ಆಹ್ವಾನ

Fisheries project 2024-25 ನೇ ಸಾಲಿನ ಪ್ರಧಾನ ಮಂತ್ರಿ ಮತ್ಯ್ಸ ಸಂಪದ...

Ravi Telex ಪತ್ರಕರ್ತ‌ “ಟೆಲೆಕ್ಸ್ ರವಿ ” ಗೆ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ

Ravi Telex ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ...

Inner Wheel East Shimoga ಆಶ್ರಮವಾಸಿಗಳ ಸೇವೆ ,ದೇವರ ಸೇವೆಗೆ ಸಮ- ವಾಗ್ದೇವಿ ಬಸವರಾಜ್

Inner Wheel East Shimoga ಆಶ್ರಮವಾಸಿಗಳ ಸೇವೆ ದೇವರ ಸೇವೆಗೆ ಸಮಾನ....