Friday, March 20, 2026
Friday, March 20, 2026

Supreme Court ಒಳಚರಂಡಿ ಕಾರ್ಮಿಕರು ಕರ್ತವ್ಯದಲ್ಲಿ ಮೃತಪಟ್ಟರೆ ₹ 30 ಲಕ್ಷ ಪರಿಹಾರ ನೀಡಿ-ಸುಪ್ರೀಂ ಕೋರ್ಟ್

Date:

Supreme Court ಒಳಚರಂಡಿ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಕಾರ್ಮಿಕರು ಮೃತಪಟ್ಟಿರುವ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಈ ಕೆಲಸದ ಸಂದರ್ಭದಲ್ಲಿ ಕಾರ್ಮಿಕರು ಮೃತಪಟ್ಟರೆ ಅವರ ಕುಟುಂಬಕ್ಕೆ ಸರ್ಕಾರದ ಪ್ರಾಧಿಕಾರಗಳು 30 ಲಕ್ಷ ರೂಪಾಯಿ ಪರಿಹಾರ ಒದಗಿಸಬೇಕು ಎಂದು ಹೇಳಿದೆ.

ಕಾರ್ಮಿಕರಿಗೆ ಬೇರೆ ಯಾವುದೇ ರೀತಿಯ ಅಂಗವೈಕಲ್ಯ ಉಂಟಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ರೂ. 10 ಲಕ್ಷದವರೆಗೆ ಪರಿಹಾರ ಒದಗಿಸಬೇಕು ಎಂದು ನ್ಯಾಯಮೂರ್ತಿ ಭಟ್‌ ಅವರು ಆದೇಶದಲ್ಲಿ ಹೇಳಿದ್ದಾರೆ. ಒಳಚರಂಡಿ, ಶೌಚಗುಂಡಿ ಇಳಿದು ಕಾರ್ಮಿಕರು ಜೀವ ಕಳೆದುಕೊಳ್ಳುವ ಸಂದಭ ಎದುರಾಗದಂತೆ ಸರ್ಕಾರದ ಸಂಸ್ಥೆಗಳು ಸಮನ್ವಯದಿಂದ ನೋಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

Supreme Court ಒಳಚರಂಡಿ ಸ್ವಚ್ಛಗೊಳಿಸುವಾಗ ಕಾರ್ಮಿಕರು ಶಾಶ್ವತ ಅಂಗವೈಕಲ್ಯಕ್ಕೆ ತುತ್ತಾದಲ್ಲಿ ಅವರಿಗೆ ಕನಿಷ್ಠ 20 ಲಕ್ಷ ಪರಿಹಾರ ನೀಡಬೇಕು ಎಂದು ನ್ಯಾಯಮೂರ್ತಿಗಳಾದ ಎಸ್. ರವೀಂದ್ರ ಭಟ್ ಮತ್ತು ಅರವಿಂದ ಕುಮಾರ್ ಅವರಿದ್ದ ವಿಭಾಗೀಯ ಪೀಠವು ಆದೇಶಿಸಿದೆ. ‘ಒಳಚರಂಡಿ, ಶೌಚಗುಂಡಿಯನ್ನು ಬರಿಗೈಯಿಂದ ಸ್ವಚ್ಛಗೊಳಿಸುವ ಪದ್ಧತಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ಇಲ್ಲವಾಗಿಸಬೇಕು’ ಎಂದು ತಾಕೀತು ಮಾಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...