CM Siddharamaih ಮಳೆ ಕೊರತೆಯಿಂದಾಗಿ ರಾಜ್ಯದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕನಿಷ್ಠ ಮಟ್ಟಕ್ಕೆ ಕುಸಿದಿದೆ, ಇದರಿಂದಾಗಿ ಜಲವಿದ್ಯುತ್ ಉತ್ಪಾದಕ ಘಟಕಗಳು ತಮ್ಮ ಸಾಮರ್ಥ್ಯಕ್ಕೆ ಸಮನಾಗಿ ವಿದ್ಯುತ್ ಉತ್ಪಾದಿಸಲು ಸಾಧ್ಯವಿಲ್ಲದಂತಾಗಿದೆ ಎಂದು ಸಿಎಂ ಸಿದ್ದರಾಮಯ್ಯನವರು ತಿಳಿಸಿದರು.
ಉತ್ಪಾದನೆ ಕಡಿಮೆಯಿದ್ದು, ಬೇಡಿಕೆ ಹೆಚ್ಚಿರುವುದರಿಂದ ಅನಿವಾರ್ಯವಾಗಿ ತಾತ್ಕಾಲಿಕ ಒಡಂಬಡಿಕೆಯ ಮೇರೆಗೆ ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿಗೆ ನಾವು ಮುಂದಾಗಿದ್ದೇವೆ. ವಿದ್ಯುತ್ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ನವೀಕರಿಸಬಹುದಾದ ಇಂಧನ ಮೂಲಗಳ ಪರಿಣಾಮಕಾರಿ ಬಳಕೆಯ ಮೂಲಕ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸುವ ಕಡೆಗೂ ಗಮನ ಹರಿಸಿದ್ದೇವೆ ಎಂದಿದ್ದಾರೆ .
CM Siddharamaih ನಾವು ವೆಸ್ಟಂಡ್ ಹೋಟೆಲ್‌ನಲ್ಲಿ ಕೂತು ಸರ್ಕಾರ ನಡೆಸುತ್ತಿಲ್ಲ, ಜನರ ನಡುವೆ ಇದ್ದು ಅವರ ಕಷ್ಟಕ್ಕೆ ಹೆಗಲಾಗಿ ನಿಂತಿದ್ದೇವೆ ಎಂದು ತಿಳಿಸಿದ್ದಾರೆ.